ಕೆಕೆಆರ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಬೌಲಿಂಗ್; ಲಿವಿಂಗ್‌ಸ್ಟನ್ ಔಟ್, ಕೋಲ್ಕತ್ತಾ ತಂಡದಿಂದ ಹೊರಬಿದ್ದ ದುಬಾರಿ ಬೌಲರ್
- ಐಪಿಎಲ್ 2024ರ ಆವೃತ್ತಿಯ 42ನೇ ಪಂದ್ಯದಲ್ಲಿ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಕೆಕೆಆರ್ ತವರು ಮೈದಾನ ಈಡನ್ ಗಾರ್ಡನ್ಸ್‌ನಲ್ಲಿ ಪಂದ್ಯ ನಡೆಯುತ್ತಿದ್ದು, ರೋಚಕ ಹಣಾಹಣಿಯ ಟಾಸ್ ಹಾಗೂ ಆಡುವ ಬಳಗದ ಅಪ್ಡೇಟ್ ಹೀಗಿದೆ.
- ಐಪಿಎಲ್ 2024ರ ಆವೃತ್ತಿಯ 42ನೇ ಪಂದ್ಯದಲ್ಲಿ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಕೆಕೆಆರ್ ತವರು ಮೈದಾನ ಈಡನ್ ಗಾರ್ಡನ್ಸ್‌ನಲ್ಲಿ ಪಂದ್ಯ ನಡೆಯುತ್ತಿದ್ದು, ರೋಚಕ ಹಣಾಹಣಿಯ ಟಾಸ್ ಹಾಗೂ ಆಡುವ ಬಳಗದ ಅಪ್ಡೇಟ್ ಹೀಗಿದೆ.
(1 / 7)
ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಸ್ಯಾಮ್ ಕರನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದಿನ ಪಂದ್ಯಕ್ಕೂ ತಂಡದ ಕಾಯಂ ನಾಯಕ ಶಿಖರ್ ಧವನ್ ಅಲಭ್ಯರಾಗಿದ್ದಾರೆ.
(2 / 7)
ಪಂಜಾಬ್ ತಂಡದಿಂದ ಲಿಯಾಮ್ ಲಿವಿಂಗ್‌ಸ್ಟನ್ ಹೊರಗುಳಿದಿದ್ದಾರೆ. ಇದೇ ವೇಳೆ ಜಾನಿ ಬೇರ್‌ಸ್ಟೋ ಆಡುವ ಬಳಗಕ್ಕೆ ಮರಳಿದ್ದಾರೆ(AP)
(3 / 7)
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಜಾನಿ ಬೈರ್‌ಸ್ಟೋ, ಸ್ಯಾಮ್ ಕರನ್ (ನಾಯಕ), ರಿಲೀ ರೊಸೊವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್.(PTI)
(4 / 7)
ಅತ್ತ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ದುಬಾರಿ ಆಟಗಾರ ಮಿಚೆಲ್ ಸ್ಟಾರ್ಕ್ ಬದಲಿಗೆ ದುಷ್ಮಂತ್ ಚಮೀರಾ ಆಡುವ ಬಳಗ ಸೇರಿಕೊಂಡಿದ್ದಾರೆ.(PTI)
(5 / 7)
ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ದುಷ್ಮಂತ ಚಮೀರಾ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.(PTI)
(6 / 7)
ಕೋಲ್ಕತ್ತಾ ನೈಟ್ ರೈಡರ್ಸ್ ಬದಲಿ ಆಟಗಾರರು: ಸುಯಶ್ ಶರ್ಮಾ, ಅನುಕುಲ್ ರಾಯ್, ಮನೀಶ್ ಪಾಂಡೆ, ವೈಭವ್ ಅರೋರಾ, ರಹಮಾನುಲ್ಲಾ ಗುರ್ಬಾಜ್(ANI)
ಇತರ ಗ್ಯಾಲರಿಗಳು