ICC Test Rankings : 15 ತಿಂಗಳಿಂದ ಟೆಸ್ಟ್ ಕ್ರಿಕೆಟ್ ಆಡದಿದ್ದರೂ ರ್ಯಾಂಕಿಂಗ್ನಲ್ಲಿ ಏರಿದ ರಿಷಭ್ ಪಂತ್
- ICC Test Rankings : ಐಪಿಎಲ್ 2024ರ ಮಧ್ಯೆಯೇ ಐಸಿಸಿ ಟೆಸ್ಟ್ ಕ್ರಿಕೆಟ್ ಶ್ರೇಯಾಂಕ ಬಿಡುಗಡೆಯಾಗಿದೆ. ಒಂದು ವರ್ಷಕ್ಕೂ ಅಧಿಕ ಕಾಲ ಕ್ರಿಕೆಟ್ ಆಡದಿದ್ದರೂ ರಿಷಭ್ ಪಂತ್ ಒಂದು ಸ್ಥಾನ ಮೇಲೇರಿದ್ದಾರೆ.
- ICC Test Rankings : ಐಪಿಎಲ್ 2024ರ ಮಧ್ಯೆಯೇ ಐಸಿಸಿ ಟೆಸ್ಟ್ ಕ್ರಿಕೆಟ್ ಶ್ರೇಯಾಂಕ ಬಿಡುಗಡೆಯಾಗಿದೆ. ಒಂದು ವರ್ಷಕ್ಕೂ ಅಧಿಕ ಕಾಲ ಕ್ರಿಕೆಟ್ ಆಡದಿದ್ದರೂ ರಿಷಭ್ ಪಂತ್ ಒಂದು ಸ್ಥಾನ ಮೇಲೇರಿದ್ದಾರೆ.
(1 / 5)
ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ನಂತರ ರಿಷಭ್ ಪಂತ್ 15 ತಿಂಗಳ ಕಾಲ ಮೈದಾನದಿಂದ ಹೊರಗುಳಿದಿದ್ದರು. ಪ್ರಸ್ತುತ ಐಪಿಎಲ್ನಲ್ಲಿ ಮೈದಾನಕ್ಕೆ ಮರಳಿರುವ ಪಂತ್, ಇನ್ನೂ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಿಲ್ಲ. ದೀರ್ಘಕಾಲದವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಡದಿದ್ದರೂ, ಪಂತ್ ಟೆಸ್ಟ್ ಕ್ರಿಕೆಟ್ ವಿಶ್ವ ಶ್ರೇಯಾಂಕದಲ್ಲಿ ಒಂದು ಸ್ಥಾನ ಮೇಲೇರಿದ್ದಾರೆ. ಟೆಸ್ಟ್ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ 16ನೇ ಸ್ಥಾನದಿಂದ 15ನೇ ಸ್ಥಾನಕ್ಕೇರಿದ್ದಾರೆ. ಬಾಂಗ್ಲಾದೇಶ ಪ್ರವಾಸದಲ್ಲಿ ಕಳಪೆ ಪ್ರದರ್ಶನದ ದೃಷ್ಟಿಯಿಂದ ಶ್ರೀಲಂಕಾದ ಧನಂಜಯ ಡಿ ಸಿಲ್ವಾ ಎರಡು ಸ್ಥಾನಗಳನ್ನು ಕಳೆದುಕೊಂಡು 16ನೇ ಸ್ಥಾನಕ್ಕೆ ಇಳಿದಿದ್ದಾರೆ,
(2 / 5)
ಐಸಿಸಿ ಟೆಸ್ಟ್ ಬ್ಯಾಟ್ಸ್ಮನ್ಗಳ ಟಾಪ್ 10ರಲ್ಲಿ ಭಾರತದ ಮೂವರು ಕ್ರಿಕೆಟಿಗರು ಸ್ಥಾನ ಪಡೆದಿದ್ದಾರೆ. ಭಾರತದ ನಾಯಕ ರೋಹಿತ್ ಶರ್ಮಾ 6ನೇ ಸ್ಥಾನದಲ್ಲಿದ್ದಾರೆ. ಐಸಿಸಿ ರ್ಯಾಂಕಿಂಗ್ ಪ್ರಕಾರ, ರೋಹಿತ್ ಪ್ರಸ್ತುತ ಭಾರತದ ಅತ್ಯುತ್ತಮ ಟೆಸ್ಟ್ ಬ್ಯಾಟ್ಸ್ಮನ್. ಯಶಸ್ವಿ ಜೈಸ್ವಾಲ್ ಒಟ್ಟಾರೆ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 9ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಟೆಸ್ಟ್ ಬ್ಯಾಟ್ಸ್ಮನ್ಗಳ ಟಾಪ್-20ರಲ್ಲಿ ಭಾರತದ ಇನ್ನಿಬ್ಬರು ಕ್ರಿಕೆಟಿಗರು ಸ್ಥಾನ ಪಡೆದಿದ್ದಾರೆ. ರಿಷಭ್ ಪಂತ್ (15) ಹೊರತುಪಡಿಸಿ, ಶುಭ್ಮನ್ ಗಿಲ್ 20ನೇ ಸ್ಥಾನದಲ್ಲಿದ್ದಾರೆ.
(3 / 5)
ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ವಿಶ್ವದ ಅತ್ಯುತ್ತಮ ಬೌಲರ್ ಆಗಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಜಸ್ಪ್ರೀತ್ ಬುಮ್ರಾ, ಜೋಶ್ ಹೇಜಲ್ವುಡ್ ಅವರೊಂದಿಗೆ ಜಂಟಿಯಾಗಿ 2ನೇ ಸ್ಥಾನದಲ್ಲಿದ್ದಾರೆ. ರವೀಂದ್ರ ಜಡೇಜಾ 7ನೇ ಸ್ಥಾನದಲ್ಲಿದ್ದಾರೆ. ಕುಲ್ದೀಪ್ ಯಾದವ್ 15, ಮೊಹಮ್ಮದ್ ಶಮಿ 21, ಮೊಹಮ್ಮದ್ ಸಿರಾಜ್ 25, ಅಕ್ಷರ್ ಪಟೇಲ್ 36ನೇ ಸ್ಥಾನದಲ್ಲಿದ್ದಾರೆ.
(4 / 5)
ಪ್ರಸ್ತುತ ವಿಶ್ವದ ಅತ್ಯುತ್ತಮ ಟೆಸ್ಟ್ ಆಲ್ರೌಂಡರ್ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನ ಪಡೆದಿದ್ದಾರೆ. ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಅಕ್ಷರ್ ಪಟೇಲ್ ಆರನೇ ಸ್ಥಾನದಲ್ಲಿದ್ದಾರೆ.
ಇತರ ಗ್ಯಾಲರಿಗಳು