KL Rahul: ವಿರಾಟ್ ಕೊಹ್ಲಿ ಹಿಂದಿಕ್ಕಿ ಐಪಿಎಲ್ನಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ ಕೆಎಲ್ ರಾಹುಲ್
- KL Rahul : ರಾಜಸ್ಥಾನ್ ರಾಯಲ್ಸ್ ವಿರುದ್ಧ 76 ರನ್ ಬಾರಿಸಿದ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್, ಐಪಿಎಲ್ ಇತಿಹಾಸದಲ್ಲಿ ವಿಶೇಷ ಮೈಲಿಗಲ್ಲು ತಲುಪಿದ್ದಾರೆ. ಇದರೊಂದಿಗೆ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.
- KL Rahul : ರಾಜಸ್ಥಾನ್ ರಾಯಲ್ಸ್ ವಿರುದ್ಧ 76 ರನ್ ಬಾರಿಸಿದ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್, ಐಪಿಎಲ್ ಇತಿಹಾಸದಲ್ಲಿ ವಿಶೇಷ ಮೈಲಿಗಲ್ಲು ತಲುಪಿದ್ದಾರೆ. ಇದರೊಂದಿಗೆ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.
(1 / 5)
ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಕರ್ಷಕ ಅರ್ಧಶತಕ ಬಾರಿಸಿದ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ.(AP)
(2 / 5)
ತಂಡವು ಆರಂಭದಲ್ಲಿ 11 ರನ್ಗೆ 2 ವಿಕೆಟ್ ಕಳೆದುಕೊಂಡ ವೇಳೆ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ರಾಹುಲ್ 48 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ಸಹಿತ 76 ರನ್ ಸಿಡಿಸಿ ಔಟಾದರು.(PTI)
(3 / 5)
ಐಪಿಎಲ್ನಲ್ಲಿ ಕೆಎಲ್ ರಾಹುಲ್ ಆರಂಭಿಕರಾಗಿ 4000 ರನ್ ಪೂರೈಸಿದರು. ಓಪನರ್ ಆಗಿ ವೇಗವಾಗಿ 4000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ರಾಹುಲ್ ಆರಂಭಿಕನಾಗಿ 94 ಇನ್ನಿಂಗ್ಸ್ಗಳಲ್ಲಿ 4041 ರನ್ ಗಳಿಸಿದ್ದಾರೆ. ಒಟ್ಟಾರೆ ಐಪಿಎಲ್ನಲ್ಲಿ 127 ಪಂದ್ಯಗಳಲ್ಲಿ 4,541 ರನ್ ಗಳಿಸಿದ್ದಾರೆ. (PTI)
(4 / 5)
ವಿರಾಟ್ ಕೊಹ್ಲಿ ಆರಂಭಿಕನಾಗಿ 4000+ ರನ್ ಪೂರೈಸಲು 107 ಇನ್ನಿಂಗ್ಸ್ ತೆಗೆದುಕೊಂಡಿದ್ದರು. ಇದೀಗ ಕೊಹ್ಲಿ ದಾಖಲೆ ಹಿಂದಿಕ್ಕಿದ ಕೆಎಲ್ ರಾಹುಲ್ 94 ಇನ್ನಿಂಗ್ಸ್ಗಳಲ್ಲಿ ಈ ಮೈಲಿಗಲ್ಲು ದಾಟುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.(PTI)
ಇತರ ಗ್ಯಾಲರಿಗಳು