Prasidh Rachana Wedding: ನಿಶ್ಚಿತಾರ್ಥದ ಬೆನ್ನಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಸಿದ್ಧ್ ಕೃಷ್ಣ; ಬಾಳ ಸಂಗಾತಿ ರಚನಾ ಯಾರು ಗೊತ್ತಾ
- ಭಾರತ ಕ್ರಿಕೆಟ್ ತಂಡದ ವೇಗಿ ಪ್ರಸಿದ್ಧ್ ಕೃಷ್ಣ (Prasidh Krishna) ಅವರು ರಚನಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ರಚನಾ (Rachana) ಯಾರು ಗೊತ್ತಾ? ಅವರು ಏನು ಮಾಡುತ್ತಿದ್ದಾರೆ ಎಂಬೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.
- ಭಾರತ ಕ್ರಿಕೆಟ್ ತಂಡದ ವೇಗಿ ಪ್ರಸಿದ್ಧ್ ಕೃಷ್ಣ (Prasidh Krishna) ಅವರು ರಚನಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ರಚನಾ (Rachana) ಯಾರು ಗೊತ್ತಾ? ಅವರು ಏನು ಮಾಡುತ್ತಿದ್ದಾರೆ ಎಂಬೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.
(1 / 8)
ಟೀಮ್ ಇಂಡಿಯಾ ಮತ್ತು ಕರ್ನಾಟಕ ತಂಡದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘ ಕಾಲದ ಗೆಳತಿ ರಚನಾ ಕೃಷ್ಣ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ.
(2 / 8)
3 ದಿನಗಳ (ಜೂ 6) ಹಿಂದಷ್ಟೇ ಎಂಗೇಜ್ಮೆಂಟ್ ಮಾಡಿಕೊಂಡಿದ್ದ ಈ ಕ್ರಿಕೆಟಿಗ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಾಲಿ-ಮಾಜಿ ಕ್ರಿಕೆಟರ್ಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.
(3 / 8)
ಪ್ರಸಿದ್ಧ್ ಕೃಷ್ಣ ಮತ್ತು ರಚನಾ ಕೃಷ್ಣ ಅವರು ಸರಳ ವಿವಾಹವಾದರು. ಅವರ ಕುಟುಂಬಸ್ಥರು ಮತ್ತು ಆಪ್ತರು ಮಾತ್ರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮದುವೆ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.
(4 / 8)
ರಚನಾ ಅವರು ಸಹ ಕರ್ನಾಟಕದವರೇ. ಟೆಕ್ಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಪದವಿ ಮಾಡಿದ್ದಾರೆ. ರಚನಾ ಅವರು ಅಮೆರಿಕಗೆ ಸೇರಿದ ಪ್ರಸಿದ್ಧ ಟೆಕ್ಸಾಸ್‌ನ ಡೆಲ್ ಕಂಪನಿಯಲ್ಲಿ ಪ್ರಾಡಕ್ಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಆಕೆ ಉದ್ಯಮಿಯೂ ಹೌದು.
(5 / 8)
ಟೀಮ್ ಇಂಡಿಯಾ ಆಟಗಾರರಾದ ಜಸ್ಪ್ರಿತ್ ಬೂಮ್ರಾ, ಶ್ರೇಯಸ್ ಅಯ್ಯರ್, ಮಯಾಂಕ್ ಅಗರ್ವಾಲ್, ಕೃಷ್ಣಪ್ಪ ಗೌತಮ್, ದೇವದತ್ ಪಡಿಕ್ಕಲ್ ಸೇರಿದಂತೆ ಕರ್ನಾಟಕ ತಂಡದ ಆಟಗಾರರು ಈ ವಿವಾಹ ಸಮಾರಂಭದಲ್ಲಿ ಹಾಜರಿದ್ದರು.
(6 / 8)
2022ರ ಆಗಸ್ಟ್ನಲ್ಲಿ ಭಾರತದ ಜಿಂಬಾಬ್ವೆಯ ಏಕದಿನ ಪ್ರವಾಸದ ನಂತರ ಕೃಷ್ಣ ಸ್ಪರ್ಧಾತ್ಮಕ ಕ್ರಿಕೆಟ್‌ನಲ್ಲಿ ಕಾಣಿಸಿಕೊಂಡಿಲ್ಲ. ಏಕದಿನ ವಿಶ್ವಕಪ್ಗೂ ಮುನ್ನ ಫಿಟ್ನೆಸ್ ಮರಳಿ ಪಡೆಯುವ ಲೆಕ್ಕಾಚಾರದಲ್ಲಿ ಇರುವ ಕೃಷ್ಣ, 14 ಏಕದಿನಗಳಲ್ಲಿ 25 ವಿಕೆಟ್ ಪಡೆದಿದ್ದಾರೆ.
(7 / 8)
27 ವರ್ಷದ ಪ್ರಸಿದ್ಧ್ ಅವರನ್ನು ರಾಜಸ್ಥಾನ್ ರಾಯಲ್ಸ್ 10 ಕೋಟಿ ದುಬಾರಿ ಬೆಲೆಗೆ ಪಡೆದುಕೊಂಡಿದೆ. ಕಳೆದ ವರ್ಷ 8.29ರ ಎಕಾನಮಿಯಲ್ಲಿ ಆಡಿದ 17 ಪಂದ್ಯಗಳಲ್ಲಿ 19 ವಿಕೆಟ್ ಪಡೆದಿದ್ದರು. ಇಂಜುರಿ ಕಾರಣ ಈ ಬಾರಿ ಐಪಿಎಲ್ ತಪ್ಪಿಸಿಕೊಂಡಿದ್ದರು.
ಇತರ ಗ್ಯಾಲರಿಗಳು