ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಐಪಿಎಲ್ ಇತಿಹಾಸದಲ್ಲಿ ಚರಿತ್ರೆ ಸೃಷ್ಟಿಸಿದ ಸಾಯಿ ಸುದರ್ಶನ್; ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಆಟಗಾರ

ಐಪಿಎಲ್ ಇತಿಹಾಸದಲ್ಲಿ ಚರಿತ್ರೆ ಸೃಷ್ಟಿಸಿದ ಸಾಯಿ ಸುದರ್ಶನ್; ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಆಟಗಾರ

  • Sai Sudharsan Record : ಗುಜರಾತ್ ಟೈಟಾನ್ಸ್ ಬ್ಯಾಟ್ಸ್​​ಮನ್​ ಸಾಯಿ ಸುದರ್ಶನ್ ಅವರು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಐಪಿಎಲ್ ದಾಖಲೆಯನ್ನು ಮುರಿದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಇ ಗುಜರಾತ್ ಟೈಟಾನ್ಸ್ ಆರಂಭಿಕ ಆಟಗಾರ ಸಾಯಿ ಸುದರ್ಶನ್ ತಮ್ಮ ಚೊಚ್ಚಲ ಶತಕ ಸಿಡಿಸಿದರು. ಕೇವಲ 51 ಎಸೆತಗಳಲ್ಲಿ 7 ಸಿಕ್ಸರ್ ಮತ್ತು 6 ಬೌಂಡರಿಗಳ ಸಹಾಯದಿಂದ 103 ರನ್ ಗಳಿಸಿ ಔಟಾದರು. ಈ ಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಮತ್ತು ಋತುರಾಜ್ ಗಾಯಕ್ವಾಡ್ ಅವರ ಸಾರ್ವಕಾಲಿಕ ದಾಖಲೆಯನ್ನು ಮುರಿದಿದ್ದಾರೆ.
icon

(1 / 5)

 ಸಾಯಿ ಸುದರ್ಶನ್ ಐಪಿಎಲ್​​ನಲ್ಲಿ 1000 ರನ್​​ಗಳ ಮೈಲಿಗಲ್ಲನ್ನು ತಲುಪಿದ್ದಾರೆ. 25 ಇನ್ನಿಂಗ್ಸ್ ಗಳಲ್ಲಿ 1034 ರನ್ ಗಳಿಸಿ ವಿನೂತನ ರೆಕಾರ್ಡ್ ಸೃಷ್ಟಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು ಆರು ಅರ್ಧಶತಕಗಳು ಸೇರಿವೆ. ಐಪಿಎಲ್​ನಲ್ಲಿ ಅತಿ ವೇಗವಾಗಿ 1000 ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟ್ಸ್​ಮನ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
icon

(2 / 5)

ಈ ಹಿಂದೆ ಸಚಿನ್ ತೆಂಡೂಲ್ಕರ್ ಮತ್ತು ಋತುರಾಜ್ ಗಾಯಕ್ವಾಡ್ ಇಬ್ಬರೂ 31 ಇನ್ನಿಂಗ್ಸ್ ಗಳಲ್ಲಿ 1000 ರನ್ ಗಳಿಸಿ ಜಂಟಿ ದಾಖಲೆ ಹೊಂದಿದ್ದರು. ಸಾಯಿ ಸುದರ್ಶನ್ ಕೇವಲ 25 ಇನ್ನಿಂಗ್ಸ್​​ಗಳಲ್ಲಿ ಈ ದಾಖಲೆಯನ್ನು ತಲುಪಿದ್ದಾರೆ. ತಿಲಕ್ ವರ್ಮಾ 34 ಇನ್ನಿಂಗ್ಸ್ ಗಳಲ್ಲಿ 1000 ರನ್ ಗಳಿಸಿ 3ನೇ ಸ್ಥಾನದಲ್ಲಿದ್ದಾರೆ.
icon

(3 / 5)

ಸಾಯಿ ಸುದರ್ಶನ್ ಐಪಿಎಲ್ ಇತಿಹಾಸದಲ್ಲಿ ವೇಗವಾಗಿ 1000 ರನ್ ಗಳಿಸಿದ 3ನೇ ಆಟಗಾರ. ಲೆಂಡ್ಲ್ ಸಿಮನ್ಸ್ 23 ಇನ್ನಿಂಗ್ಸ್​​ಗಳಲ್ಲಿ  ಈ ಸಾಧನೆ ಮಾಡಿದ್ದರೆ, ಶಾನ್ ಮಾರ್ಷ್ 21 ಇನ್ನಿಂಗ್ಸ್​​ಗಳಲ್ಲಿ  1000 ರನ್ ಗಳಿಸಿದ್ದಾರೆ. ಹೇಡನ್ ಮತ್ತು ಸುದರ್ಶನ್ ಇಬ್ಬರೂ 25 ಇನ್ನಿಂಗ್ಸ್​​ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದ್ದಾರೆ.
icon

(4 / 5)

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಾಯಿ ಸುದರ್ಶನ್ ಕೇವಲ 50 ಎಸೆತಗಳಲ್ಲಿ ಐಪಿಎಲ್​​​​ನಲ್ಲಿ ತಮ್ಮ ಚೊಚ್ಚಲ ಶತಕವನ್ನು ಪೂರೈಸಿದರು. ನಾಯಕ ಗಿಲ್ ಕೂಡ ಶತಕ ಬಾರಿಸಿದರು, ಇವರಿಬ್ಬರು ಮೊದಲ ವಿಕೆಟ್​​ಗೆ 210 ರನ್​​ಗಳ ದಾಖಲೆಯ ಆರಂಭಿಕ ಜೊತೆಯಾಟವನ್ನು ನೀಡಿದರು.
icon

(5 / 5)

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಾಯಿ ಸುದರ್ಶನ್ ಕೇವಲ 50 ಎಸೆತಗಳಲ್ಲಿ ಐಪಿಎಲ್​​​​ನಲ್ಲಿ ತಮ್ಮ ಚೊಚ್ಚಲ ಶತಕವನ್ನು ಪೂರೈಸಿದರು. ನಾಯಕ ಗಿಲ್ ಕೂಡ ಶತಕ ಬಾರಿಸಿದರು, ಇವರಿಬ್ಬರು ಮೊದಲ ವಿಕೆಟ್​​ಗೆ 210 ರನ್​​ಗಳ ದಾಖಲೆಯ ಆರಂಭಿಕ ಜೊತೆಯಾಟವನ್ನು ನೀಡಿದರು.(IPL-X)

IPL_Entry_Point

ಇತರ ಗ್ಯಾಲರಿಗಳು