ಇನ್‌ಸ್ಟಾಗ್ರಾಮ್‌ನಲ್ಲಿ ರೋಹಿತ್ ಶರ್ಮಾ ಅನ್‌ಫಾಲೊ ಮಾಡಿದ ಶುಭ್ಮನ್ ಗಿಲ್; ಸೋಷಿಯಲ್ ಮೀಡಿಯಾದಲ್ಲಿ ಬಿಸಿಬಿಸಿ ಚರ್ಚೆ
- ಭಾರತ ತಂಡವು ಟಿ20 ವಿಶ್ವಕಪ್ 2024ರ ಸೂಪರ್ 8 ಹಂತ ತಲುಪಿದೆ. ಈ ನಡುವೆ ಭಾರತ ತಂಡದ ಮೀಸಲು ಆಟಗಾರನಾಗಿ ಸ್ಥಾನ ಪಡೆದಿದ್ದ ಶುಭ್ಮನ್ ಗಿಲ್ ಅವರನ್ನು ತವರಿಗೆ ಕಳುಹಿಸಲಾಗಿದೆ ಎಂಬ ವರದಿ ಮುನ್ನೆಲೆಗೆ ಬಂದಿದೆ. ಇದಕ್ಕೂ ಹೆಚ್ಚಾಗಿ, ಇನ್‌ಸ್ಟಾಗ್ರಾಮ್‌ನಲ್ಲಿ ರೋಹಿತ್ ಶರ್ಮಾ ಅವರನ್ನು ಗಿಲ್ ಅನ್‌ಫಾಲೋ ಮಾಡಿದ್ದಾರೆ ಎಂಬುದು ನೆಟ್ಟಿಗರ ಗಮನಕ್ಕೆ ಬಂದಿದೆ.

(1 / 5)
ವಿಶ್ವಕಪ್‌ಗೆ ಭಾರತ ತಂಡವನ್ನು ಆಯ್ಕೆ ಮಾಡುವಾಗ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಅವರನ್ನು ಮೀಸಲು ಆಟಗಾರರ ವಿಭಾಗದಲ್ಲಿ ಹೆಸರಿಸಲಾಯಿತು. ಭಾರತೀಯ ತಂಡದೊಂದಿಗೆ ಅವರು ಅಮೆರಿಕಕ್ಕೆ ಹಾರಿದರೂ, ಅವರು ಅಂತಿಮ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಪಂದ್ಯಾವಳಿಯ ನ್ಯೂಯಾರ್ಕ್ ಹಂತ ಪೂರ್ಣಗೊಂಡ ನಂತರ, ಗಿಲ್ ಅವರನ್ನು ಭಾರತಕ್ಕೆ ವಾಪಸ್ ಕಳುಹಿಸಲಾಗಿದೆ ಎಂದು ಹೇಳಲಾಗುತ್ತಿದೆ.(ANI)
(2 / 5)
ಗಿಲ್ ಅವರ ವೈಯಕ್ತಿಕ ಉದ್ಯಮಗಳ ಗಮನ ಹರಿಸುವ ಸಲುವಾಗಿ ಅವರು ಭಾರತಕ್ಕೆ ಮರಳಿದ್ದಾರೆ ಎಂದು ವರದಿಗಳು ತಿಳಿಸಿವೆ. ಆದರೆ ಈ ಕುರಿತು ಬಿಸಿಸಿಐ ಕಡೆಯಿಂದ ಅಧಿಕೃತ ಮಾಹಿತಿ ಬಂದಿಲ್ಲ. ಬಿಸಿಸಿಐ ಮೂಲಗಳ ಪ್ರಕಾರ ಗಿಲ್ ಹಾಗೂ ಆವೇಶ್ ಇನ್ನೂ ತಂಡದ ಮೀಸಲು ಆಟಗಾರರ ಭಾಗವಾಗಿದ್ದಾರೆ.(ANI)
(3 / 5)
ಶುಭ್ಮನ್ ಗಿಲ್, ರಿಂಕು ಸಿಂಗ್, ಆವೇಶ್ ಖಾನ್ ಮತ್ತು ಖಲೀಲ್ ಅಹ್ಮದ್ ಅವರನ್ನು ಮೀಸಲು ಆಟಗಾರರಾಗಿ ಆಯ್ಕೆ ಮಾಡಲಾಗಿತ್ತು. ನ್ಯೂಯಾರ್ಕ್ ಲೆಗ್ ನಂತರ, ಗಿಲ್ ಮತ್ತು ಆವೇಶ್ ಖಾನ್ ಅವರನ್ನು ತಂಡ ತೊರೆಯಲು ಹೇಳಲಾಗಿದೆ. ಆದರೆ ಖಲೀಲ್ ಅಹ್ಮದ್ ಮತ್ತು ರಿಂಕು ಸಿಂಗ್ ಸ್ಟ್ಯಾಂಡ್‌ಬೈ ಆಟಗಾರರಾಗಿ ಉಳಿದಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳಿವೆ.(AFP)
(4 / 5)
ಈ ನಡುವೆ ಇನ್‌ಸ್ಟಾಗ್ರಾಮ್‌ನಲ್ಲಿ ರೋಹಿತ್ ಶರ್ಮಾ ಅವರನ್ನು ಗಿಲ್ ಅನ್‌ಫಾಲೋ ಮಾಡಿದ್ದಾರೆ ಎಂಬುದು ನೆಟ್ಟಿಗರ ಗಮನಕ್ಕೆ ಬಂದಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.(AP)
ಇತರ ಗ್ಯಾಲರಿಗಳು