ಏಕದಿನ ಬ್ಯಾಟಿಂಗ್ ಶ್ರೇಯಾಂಕ; ಅಗ್ರ 10ರೊಳಗೆ ಸ್ಥಾನ ಪಡೆದ ಸ್ಮೃತಿ ಮಂಧಾನ, ಹರ್ಮನ್‌ಪ್ರೀತ್ ಕೌರ್
- ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತದ ಸ್ಮೃತಿ ಮಂಧಾನ ಹಾಗೂ ಹರ್ಮನ್‌ಪ್ರೀತ್ ಕೌರ್, ಐಸಿಸಿ ಶ್ರೇಯಾಂಕದಲ್ಲಿ ಅಗ್ರ ಹತ್ತರೊಳಗೆ ಸ್ಥಾನ ಪಡೆದಿದ್ದಾರೆ. ಸರಣಿಯಲ್ಲಿ 2 ಶತಕ ಸಹಿತ 300ಕ್ಕೂ ಅಧಿಕ ರನ್ ಗಳಿಸಿದ ಸ್ಮೃತಿ, ನಾಲ್ಕನೇ ಸ್ಥಾನದಲ್ಲಿದ್ದಾರೆ. ನಾಯಕಿ ಕೌರ್ ಎರಡು ಸ್ಥಾನ ಮೇಲಕ್ಕೇರಿ 9ನೇ ಸ್ಥಾನಕ್ಕೇರಿದ್ದಾರೆ.

(1 / 6)
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಮಂಧನಾ ಎರಡು ಶತಕ ಹಾಗೂ ಒಂದು ಅರ್ಧಶತಕ ಸಹಿತ 343 ರನ್ ಗಳಿಸಿದರು. ಆ ಮೂಲಕ ಅಗ್ರ 10ರಲ್ಲಿ ಸ್ಥಾನ ಕಾಯ್ದುಕೊಂಡಿದ್ದಾರೆ.(PTI)
(3 / 6)
ದಕ್ಷಿಣ ಆಫ್ರಿಕಾದ ನಾಯಕಿ ಲಾರಾ ವೊಲ್ವಾರ್ಡ್ಟ್ ಕೂಡಾ ಭಾರತದ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದರು. ಆ ಮೂಲಕ ಮೂರು ಸ್ಥಾನ ಜಿಗಿದು ಎರಡನೇ ಸ್ಥಾನಕ್ಕೆ ಏರಿದ್ದಾರೆ. ಸದ್ಯ ನಂ.1 ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡದ ನ್ಯಾಟ್ ಸಿವರ್-ಬ್ರಂಟ್ ಅವರಿಗಿಂತ ಕೇವಲ 16 ರೇಟಿಂಗ್ ಪಾಯಿಂಟ್‌ಗಳಿಂದ ಹಿಂದಿದ್ದಾರೆ.(PTI)
(4 / 6)
ಭಾರತ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 0-3 ಅಂತರದಿಂದ ಸೋತಿತು. ಆದರೆ ವೊಲ್ವಾರ್ಡ್ಟ್ ಮಾತ್ರ ಅಬ್ಬರಿಸಿದರು. ಬೆಂಗಳೂರಿನಲ್ಲಿ ನಡೆದ ಸರಣಿಯ ಎರಡನೇ ಪಂದ್ಯದಲ್ಲಿ ಅಜೇಯ 135 ರನ್ ಗಳಿಸಿ ಮಿಂಚಿದರು. ಸರಣಿಯ ಅಂತಿಮ ಪಂದ್ಯದಲ್ಲಿ 65 ರನ್ ಗಳಿಸಿದರು.(PTI)
(5 / 6)
ದಕ್ಷಿಣ ಆಫ್ರಿಕಾ ಆಲ್‌ರೌಂಡರ್ ಮಾರಿಜಾನೆ ಕಾಪ್ ಈ ಪಟ್ಟಿಯಲ್ಲಿ ಎರಡು ಸ್ಥಾನ ಮೇಲಕ್ಕೇರಿ ಏಳನೇ ಸ್ಥಾನದಲ್ಲಿದ್ದಾರೆ. ಅವರು ಸರಣಿಯಲ್ಲಿ ಒಂದು ಶತಕ ಸಿಡಿಸಿದರು.(PTI)
ಇತರ ಗ್ಯಾಲರಿಗಳು