ಟಿ20 ಕ್ರಿಕೆಟ್‌ನಲ್ಲಿ 6ನೇ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್; ವಿಶ್ವದ ನಂಬರ್ 1 ಬ್ಯಾಟರ್ ದಾಖಲೆ
- ಸೂರ್ಯಕುಮಾರ್ ಯಾದವ್ ಸ್ಫೋಟಕ ಶತಕದ ನೆರವಿಂದ ಮುಂಬೈ ಇಂಡಿಯನ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆಕರ್ಷಕ ಬ್ಯಾಟಿಂಗ್ ನಡೆಸಿದ ವಿಶ್ವದ ನಂಬರ್ ವನ್ ಟಿ20 ಬ್ಯಾಟರ್, ಪ್ರಸಕ್ತ ಆವೃತ್ತಿಯಲ್ಲಿ ಮೊದಲ ಶತಕ ಹಾಗೂ ಐಪಿಎಲ್‌ನಲ್ಲಿ ಎರಡನೇ ಶತಕ ಬಾರಿಸಿದರು. ಇದರೊಂದಿಗೆ ಹಲವು ದಾಖಲೆ ನಿರ್ಮಿಸಿದರು.

(1 / 6)
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಸನ್‌ರೈಸರ್ಸ್, 8 ವಿಕೆಟ್ ಕಳೆದುಕೊಂಡು 173 ರನ್ ಕಲೆ ಹಾಕಿತು. ಇದಕ್ಕೆ ಪ್ರತಿಯಾಗಿ 17.2 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿದ ಮುಂಬೈ ಗೆದ್ದು ಬೀಗಿತು.(AFP)
(2 / 6)
ಪಂದ್ಯದಲ್ಲಿ ವಿಶ್ವದ ನಂಬರ್ ವನ್ ಟಿ20 ಬ್ಯಾಟರ್ ಸೂರ್ಯಕುಮಾರ್ ಯಾದವ್, ಆಕರ್ಷಕ ಶತಕ ಸಿಡಿಸಿ ಮಿಂಚಿದರು. ಇದು ಐಪಿಎಲ್‌ನಲ್ಲಿ ಅವರ ಎರಡನೇ ಶತಕ. (PTI)
(3 / 6)
200ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಸೂರ್ಯ, ಕೇವಲ 51 ಎಸೆತಗಳಲ್ಲಿ 12 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ ಸಹಿತ 102 ರನ್ ಗಳಿಸಿದರು. ಸಿಕ್ಸರ್‌ನೊಂದಿಗೆ ಶತಕ ಪೂರೈಸುವುದಲ್ಲದೆ ತಂಡವನ್ನು ಗೆಲುವಿನ ದಡ ಸೇರಿಸಿದರು. ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಇದು ಅವರ ಆರನೇ ಶತಕ. (PTI)
(4 / 6)
ಸೂರ್ಯಕುಮಾರ್ ಯಾದವ್, ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಎರಡು ಶತಕ ಸಿಡಿಸಿದ ಎರಡನೇ ಬ್ಯಾಟರ್ ಎನಿಸಿಕೊಂಡರು. ರೋಹಿತ್ ಶರ್ಮಾ ಮೊದಲ ಆಟಗಾರ.(PTI)
(5 / 6)
ಭಾರತೀಯರ ಪೈಕಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಲ್ಲಿದೆ. ಕಿಂಗ್ 9 ಶತಕ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ 6 ಶತಕಗಳೊಂದಿಗೆ ಜಂಟಿಯಾಗಿ ಮೂರನೇ ಸ್ಥಾನದಲ್ಲಿದ್ದಾರೆ. ರೋಹಿತ್ 8 ಶತಕ ಸಹಿತ ಎರಡನೇ ಸ್ಥಾನದಲ್ಲಿದ್ದರೆ, ರುತುರಾಜ್ ಗಾಯಕ್ವಾಡ್ ಹಾಗೂ ಕೆಎಲ್ ರಾಹುಲ್ ತಲಾ 6 ಶತಕಗಳೊಂದಿಗೆ ಸೂರ್ಯ ಜೊತೆ ಮೂರನೇ ಸ್ಥಾನ ಪಡೆದಿದ್ದಾರೆ.(PTI)
ಇತರ ಗ್ಯಾಲರಿಗಳು