ಕನ್ನಡ ಸುದ್ದಿ  /  Photo Gallery  /  Cricket News Suryakumar Yadav Comeback To Mumbai Indians Gets Delay As Batter Fails To Regain Fitness In Nca Ipl Jra

ಇನ್ನೂ ಫಿಟ್‌ ಆಗದ ಸೂರ್ಯಕುಮಾರ್‌ ಯಾದವ್;‌ ಮುಂಬೈ ಇಂಡಿಯನ್ಸ್‌ಗೆ ಸೂರ್ಯೋದಯ ಇನ್ನಷ್ಟು ತಡ

  • ಐಪಿಎಲ್ 2024ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸತತ ಎರಡು ಸೋಲುಗಳಿಂದ ಸಂಕಷ್ಟಕ್ಕೆ ಸಿಲುಕಿದೆ. ಈ ನಡುವೆ ಶೀಘ್ರದಲ್ಲೇ ತಂಡ ಸೇರಿಕೊಳ್ಳುವ ನಿರೀಕ್ಷೆಯಲ್ಲಿದ್ದ ಸೂರ್ಯಕುಮಾರ್ ಯಾದವ್, ಸಂಪೂರ್ಣ ಫಿಟ್ನೆಸ್ ಪಡೆಯಲು ವಿಫಲವಾಗಿದ್ದರಿಂದ, ಹಾರ್ದಿಕ್‌ ಪಾಂಡ್ಯ ಪಡೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಐಪಿಎಲ್ 2024ರ ಮೊದಲ ಎರಡು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಸೋಲು ಕಂಡಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ ಗೆಲುವಿನ ಹುಡುಕಾಟದಲ್ಲಿದೆ. ಈ ನಡುವೆ ಭಾರತದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್‌ ಅನುಪಸ್ಥಿತಿಯು ತಂಡದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸೂರ್ಯ ಫಿಟ್‌ ಆಗಲು ಇನ್ನು ಕೆಲವು ದಿನಗಳು ಬೇಕಾಗಿದ್ದು, ಮುಂದಿನ ಕೆಲವು ಪಂದ್ಯಗಳಿಗೆ ಅವರು ಅಲಭ್ಯರಾಗಲಿದ್ದಾರೆ.
icon

(1 / 5)

ಐಪಿಎಲ್ 2024ರ ಮೊದಲ ಎರಡು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಸೋಲು ಕಂಡಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ ಗೆಲುವಿನ ಹುಡುಕಾಟದಲ್ಲಿದೆ. ಈ ನಡುವೆ ಭಾರತದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್‌ ಅನುಪಸ್ಥಿತಿಯು ತಂಡದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸೂರ್ಯ ಫಿಟ್‌ ಆಗಲು ಇನ್ನು ಕೆಲವು ದಿನಗಳು ಬೇಕಾಗಿದ್ದು, ಮುಂದಿನ ಕೆಲವು ಪಂದ್ಯಗಳಿಗೆ ಅವರು ಅಲಭ್ಯರಾಗಲಿದ್ದಾರೆ.(AFP)

ಸೂರ್ಯಕುಮಾರ್ ಯಾದವ್ ಸಂಪೂರ್ಣ ಫಿಟ್ ಆಗಲು ಇನ್ನೂ ಕೆಲವು ದಿನಗಳು ಬೇಕಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
icon

(2 / 5)

ಸೂರ್ಯಕುಮಾರ್ ಯಾದವ್ ಸಂಪೂರ್ಣ ಫಿಟ್ ಆಗಲು ಇನ್ನೂ ಕೆಲವು ದಿನಗಳು ಬೇಕಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.(AFP)

ಐಪಿಎಲ್ 2024ರ ಆವೃತ್ತಿಯಲ್ಲಿ ಸೂರ್ಯಕುಮಾರ್ ಈಗಾಗಲೇ ಎರಡು ಪಂದ್ಯಗಳನ್ನು ಕಳೆದುಕೊಂಡಿದ್ದಾರೆ. ಇನ್ನೂ ಕೆಲವು ಪಂದ್ಯಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ, ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
icon

(3 / 5)

ಐಪಿಎಲ್ 2024ರ ಆವೃತ್ತಿಯಲ್ಲಿ ಸೂರ್ಯಕುಮಾರ್ ಈಗಾಗಲೇ ಎರಡು ಪಂದ್ಯಗಳನ್ನು ಕಳೆದುಕೊಂಡಿದ್ದಾರೆ. ಇನ್ನೂ ಕೆಲವು ಪಂದ್ಯಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ, ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಕಳೆದ ವರ್ಷದ ಡಿಸೆಂಬರ್‌ ತಿಂಗಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ವೇಳೆ ಸೂರ್ಯಕುಮಾರ್ ಗಾಯಗೊಂಡಿದ್ದರು. ಈ ವರ್ಷದ ಜನವರಿಯಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ, ಈ ವರ್ಷದ ಜೂನ್‌ ತಿಂಗಳಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಗಮನದಲ್ಲಿಟ್ಟುಕೊಂಡು ಸೂರ್ಯ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಐಪಿಎಲ್‌ನಲ್ಲಿ ಕಣಕ್ಕಿಳಿಸಬಾರದು ಎಂದು ಎನ್‌ಸಿಎ ಅಭಿಪ್ರಾಯಪಟ್ಟಿದೆ.
icon

(4 / 5)

ಕಳೆದ ವರ್ಷದ ಡಿಸೆಂಬರ್‌ ತಿಂಗಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ವೇಳೆ ಸೂರ್ಯಕುಮಾರ್ ಗಾಯಗೊಂಡಿದ್ದರು. ಈ ವರ್ಷದ ಜನವರಿಯಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ, ಈ ವರ್ಷದ ಜೂನ್‌ ತಿಂಗಳಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಗಮನದಲ್ಲಿಟ್ಟುಕೊಂಡು ಸೂರ್ಯ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಐಪಿಎಲ್‌ನಲ್ಲಿ ಕಣಕ್ಕಿಳಿಸಬಾರದು ಎಂದು ಎನ್‌ಸಿಎ ಅಭಿಪ್ರಾಯಪಟ್ಟಿದೆ.(PTI)

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ತಂಡದ ಮುಂದಿನ ಪಂದ್ಯವು ಏಪ್ರಿಲ್ 1ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯಲಿದೆ. ಪ್ರಸಕ್ತ ಋತುವಿನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಮುಂಬೈ, ತವರಿನಲ್ಲಿ ಮೊದಲ ಪಂದ್ಯವಾಡಲು ಸಜ್ಜಾಗಿದೆ.
icon

(5 / 5)

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ತಂಡದ ಮುಂದಿನ ಪಂದ್ಯವು ಏಪ್ರಿಲ್ 1ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯಲಿದೆ. ಪ್ರಸಕ್ತ ಋತುವಿನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಮುಂಬೈ, ತವರಿನಲ್ಲಿ ಮೊದಲ ಪಂದ್ಯವಾಡಲು ಸಜ್ಜಾಗಿದೆ.(ANI)


IPL_Entry_Point

ಇತರ ಗ್ಯಾಲರಿಗಳು