Jasprit Bumrah: ಜಸ್ಪ್ರೀತ್ ಬುಮ್ರಾ ನಾಲ್ಕನೇ ಟೆಸ್ಟ್ ಕೂಡ ಆಡಲು ಬಯಸಿದ್ದರು, ಆದರೆ..!
- Jasprit Bumrah : ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗೆ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿದೆ. ಅದಕ್ಕೆ ಕಾರಣ ಇಲ್ಲಿದೆ.
- Jasprit Bumrah : ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗೆ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿದೆ. ಅದಕ್ಕೆ ಕಾರಣ ಇಲ್ಲಿದೆ.
(1 / 6)
ತವರಿನಲ್ಲಿ ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್‌ಗಳ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ. ಟೀಂ ಇಂಡಿಯಾ ಗೆಲುವಿನಲ್ಲಿ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಫ್ಲಾಟ್ ಪಿಚ್‌ಗಳಲ್ಲಿ ತಮ್ಮ ವೇಗದ ಪ್ರತಿಭೆಯಿಂದ ಮಿಂಚಿದರು.(PTI)
(2 / 6)
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಬುಮ್ರಾ ಮೂರು ಟೆಸ್ಟ್‌ಗಳಲ್ಲಿ 17 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಪ್ರಮುಖ ವಿಕೆಟ್ ಟೇಕರ್ ಆಗಿ ಹೊರಹೊಮ್ಮಿದ್ದಾರೆ. ಎರಡನೇ ಟೆಸ್ಟ್ನಲ್ಲಿ ಮೊದಲ ಇನಿಂಗ್ಸ್ನಲ್ಲಿ ಆರು ವಿಕೆಟ್ ಪಡೆದು ಭಾರತದ ಗೆಲುವಿನ ಹಾದಿ ಸುಗಮಗೊಳಿಸಿದರು.(REUTERS)
(3 / 6)
ಫೆಬ್ರವರಿ 23 ರಿಂದ ರಾಂಚಿಯಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್‌ಗಾಗಿ ಆಯ್ಕೆದಾರರು ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಿದ್ದಾರೆ. ಬುಮ್ರಾ ಈ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಆಡಲು ಬಯಸಿದ್ದರೂ, ಅವರನ್ನು ನಾಲ್ಕನೇ ಟೆಸ್ಟ್‌ನಿಂದ ಹೊರಗಿಡಲಾಯಿತು. ಅದಕ್ಕೆ ಕಾರಣ ಇದೆ.(AP)
(4 / 6)
ಕೆಲಸದ ಹೊರೆ ನಿರ್ವಹಣೆಯ ಭಾಗವಾಗಿ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ಗೆ ಟೀಮ್ ಮ್ಯಾನೇಜ್‌ಮೆಂಟ್ ಬುಮ್ರಾಗೆ ವಿಶ್ರಾಂತಿ ನೀಡಿದೆ. ದೇಹದ ಮೇಲೆ ಒತ್ತಡ ಜಾಸ್ತಿಯಾದರೆ ಗಾಯವಾಗುವ ಅಪಾಯವಿದೆ ಎಂಬ ಭಾವನೆಯಿಂದ ವಿಶ್ರಾಂತಿ ನೀಡಲಾಗಿದೆ.(REUTERS)
(5 / 6)
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ನಂತರ ಐಪಿಎಲ್ 2024ರ ಸೀಸನ್ ನಡೆಯಲಿದೆ. ಅದರ ನಂತರ ಜೂನ್‌ನಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ವಿಶ್ವಕಪ್‌ನಲ್ಲಿ ಭಾರತ ತಂಡದ ಪ್ರಮುಖ ವೇಗಿಯಾಗಿದ್ದು, ಗಾಯವಾಗದಂತೆ ನೋಡಿಕೊಳ್ಳುವುದು ಈಗ ಅಗತ್ಯವಾಗಿದೆ.(AFP)
ಇತರ ಗ್ಯಾಲರಿಗಳು