WPL 2024: ವಿಮೆನ್ಸ್ ಪ್ರೀಮಿಯರ್ ಲೀಗ್ ಮೊದಲ ಹಂತ ಮುಕ್ತಾಯ; ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಇರೋರು ಯಾರು?
- WPL 2024 Orange Cap: ವಿಮೆನ್ಸ್ ಪ್ರೀಮಿಯರ್ ಲೀಗ್ 2024ರ ಆವೃತ್ತಿಯ ಮೊದಲ ಹಂತ ಮುಕ್ತಾಯಗೊಂಡಿದೆ. ಬೆಂಗಳೂರಿನಲ್ಲಿ ನಡೆದ ಲೀಗ್‌ನ 11 ಪಂದ್ಯಗಳ ನಂತರ, ಪ್ರಸ್ತುತ ಡಬ್ಲ್ಯೂಪಿಎಲ್ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿ ಆರೇಂಜ್ ಕ್ಯಾಪ್ ಪಡೆದವರು ಪಟ್ಟಿ ಹೀಗಿದೆ. ಆರ್‌ಸಿಬಿ ಆಟಗಾರ್ತಿಯರು ಅಗ್ರಸ್ಥಾನದಲ್ಲಿದ್ದಾರೆ.
- WPL 2024 Orange Cap: ವಿಮೆನ್ಸ್ ಪ್ರೀಮಿಯರ್ ಲೀಗ್ 2024ರ ಆವೃತ್ತಿಯ ಮೊದಲ ಹಂತ ಮುಕ್ತಾಯಗೊಂಡಿದೆ. ಬೆಂಗಳೂರಿನಲ್ಲಿ ನಡೆದ ಲೀಗ್‌ನ 11 ಪಂದ್ಯಗಳ ನಂತರ, ಪ್ರಸ್ತುತ ಡಬ್ಲ್ಯೂಪಿಎಲ್ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿ ಆರೇಂಜ್ ಕ್ಯಾಪ್ ಪಡೆದವರು ಪಟ್ಟಿ ಹೀಗಿದೆ. ಆರ್‌ಸಿಬಿ ಆಟಗಾರ್ತಿಯರು ಅಗ್ರಸ್ಥಾನದಲ್ಲಿದ್ದಾರೆ.
(1 / 9)
ಪ್ರಸಕ್ತ ವಿಮೆನ್ಸ್ ಪ್ರೀಮಿಯರ್ ಲೀಗ್‌ನ ಮೊದಲಾರ್ಧ ಮುಗಿದಿದೆ. ಡಬ್ಲ್ಯುಪಿಎಲ್ ಪಂದ್ಯಾವಳಿಯು ಬೆಂಗಳೂರಿನಿಂದ ದೆಹಲಿಗೆ ಸ್ಥಳಾಂತರಗೊಳ್ಳುತ್ತಿದೆ. ಟೂರ್ನಿಯಲ್ಲಿ 11 ಲೀಗ್ ಪಂದ್ಯಗಳ ಬಳಿಕ, ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಈ ವರ್ಷದ ಡಬ್ಲ್ಯುಪಿಎಲ್‌ನ ಆರೆಂಜ್ ಕ್ಯಾಪ್ ಪಡೆದಿದ್ದಾರೆ. ಆರ್‌ಸಿಬಿ ನಾಯಕಿ ಆಡಿದ ಐದು ಇನ್ನಿಂಗ್ಸ್‌ಗಳಲ್ಲಿ 219 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಅರ್ಧಶತಕಗಳು ಸೇರಿವೆ. ಒಟ್ಟು 30 ಬೌಂಡರಿ ಮತ್ತು 8 ಸಿಕ್ಸರ್ ಗಳನ್ನು ಬಾರಿಸಿದ್ದಾರೆ.
(PTI)(2 / 9)
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಆರ್‌ಸಿಬಿಯ ಮತ್ತೊಬ್ಬ ಆಟಗಾರ್ತಿ ಸಬ್ಬಿನೇನಿ ಮೇಘನಾ ಎರಡನೇ ಸ್ಥಾನದಲ್ಲಿದ್ದಾರೆ. ಅವರು 5 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿ ಒಟ್ಟು 164 ರನ್ ಗಳಿಸಿದ್ದಾರೆ. 1 ಅರ್ಧಶತಕ ಗಳಿಸಿರುವ ಮೇಘನಾ ಅವರ ಗರಿಷ್ಠ ವೈಯಕ್ತಿಕ ಇನ್ನಿಂಗ್ಸ್ 53 ರನ್. ಅವರು 20 ಬೌಂಡರಿ ಮತ್ತು 3 ಸಿಕ್ಸರ್ ಸಿಡಿಸಿದ್ದಾರೆ.
(PTI)(3 / 9)
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಯುಪಿ ವಾರಿಯರ್ಸ್ ಆಲ್‌ರೌಂಡರ್ ಗ್ರೇಸ್ ಹ್ಯಾರಿಸ್ ಮೂರನೇ ಸ್ಥಾನದಲ್ಲಿದ್ದಾರೆ. ಅವರು 5 ಇನ್ನಿಂಗ್ಸ್‌ಗಳಲ್ಲಿ 158 ರನ್ ಗಳಿಸಿದ್ದಾರೆ. ಅವರು 1 ಅರ್ಧಶತಕ ಸಿಡಿಸಿದ್ದಾರೆ. ಅಜೇಯ 60 ರನ್ ಇವರ ಗರಿಷ್ಠ ಸ್ಕೋರ್. ತಮ್ಮ ಇನ್ನಿಂಗ್ಸ್‌ನಲ್ಲಿ ಅವರು 22 ಬೌಂಡರಿ ಹಾಗೂ 5 ಸಿಕ್ಸರ್ ಬಾರಿಸಿದ್ದಾರೆ.
(PTI)(4 / 9)
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಲಿಸ್ ಕ್ಯಾಪ್ಸಿ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು 3 ಇನ್ನಿಂಗ್ಸ್‌ಗಳಲ್ಲಿ 148 ರನ್ ಗಳಿಸಿದ್ದಾರೆ. ಗರಿಷ್ಠ ರನ್ 75. 1 ಅರ್ಧಶತಕ ಬಾರಿಸಿರುವ ಅವರು 17 ಬೌಂಡರಿ ಮತ್ತು 5 ಸಿಕ್ಸರ್ ಗಳಿಸಿದ್ದಾರೆ.
(PTI)(5 / 9)
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಅವರು 4 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿ 148 ರನ್ ಗಳಿಸಿದ್ದಾರೆ. ಲ್ಯಾನಿಂಗ್ ಎರಡು ಅರ್ಧಶತಕ ಗಳಿಸಿದ್ದಾರೆ. ಗರಿಷ್ಠ ವೈಯಕ್ತಿಕ ಇನ್ನಿಂಗ್ಸ್ 55 ರನ್. ಅವರು 17 ಬೌಂಡರಿ ಮತ್ತು 2 ಸಿಕ್ಸರ್ ಗಳನ್ನು ಬಾರಿಸಿದ್ದಾರೆ.
(PTI)(6 / 9)
ಯುಪಿ ವಾರಿಯರ್ಸ್ ತಂಡದ ನಾಯಕಿ ಅಲಿಸ್ಸಾ ಹೀಲಿ, 5 ಇನ್ನಿಂಗ್ಸ್‌ಗಳಲ್ಲಿ ಆಡಿ 139 ರನ್ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಅವರು 6ನೇ ಸ್ಥಾನದಲ್ಲಿದ್ದಾರೆ.
(PTI)(7 / 9)
ಆರ್‌ಸಿಬಿ ಕ್ವೀನ್ ಎಲಿಸ್ ಪೆರ್ರಿ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದಾರೆ. ಅವರು ಕೇವಲ 4 ಇನ್ನಿಂಗ್ಸ್‌ಗಳಲ್ಲಿ ಬ್ಯಾಟ್ ಬೀಸಿದರೂ 133 ರನ ಕಲೆ ಹಾಕಿದ್ದಾರೆ.
(PTI)(8 / 9)
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮತ್ತೋರ್ವ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದಾರೆ. ಅವರು 4 ಇನ್ನಿಂಗ್ಸ್ ಗಳಲ್ಲಿ ಬ್ಯಾಟಿಂಗ್ ಮಾಡಿ ಒಟ್ಟು 128 ರನ್ ಗಳಿಸಿದರು. ಎರಡು ಅರ್ಧಶತಕ ಸಿಡಿಸಿರುವ ಅವರು, 10 ಬೌಂಡರಿ ಮತ್ತು 9 ಸಿಕ್ಸರ್ ಬಾರಿಸಿದ್ದಾರೆ.
(PTI)ಇತರ ಗ್ಯಾಲರಿಗಳು