ಆಸ್ಟ್ರೇಲಿಯಾ ವಿರುದ್ಧ ಸೆಂಚುರಿ ಸಿಡಿಸಿದ ಭಾರತದ 2ನೇ ಕಿರಿಯ ಆಟಗಾರ; ಕಪಿಲ್ ದೇವ್ ಹಿಂದಿಕ್ಕಿದ ನಿತೀಶ್ ರೆಡ್ಡಿ
- Nitish Kumar Reddy Record: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಶತಕ ಬಾರಿಸುವ ಮೂಲಕ 21 ವರ್ಷದ ನಿತೀಶ್ ರೆಡ್ಡಿ ಅವರು ದಿಗ್ಗಜ ಕಪಿಲ್ ದೇವ್ ದಾಖಲೆಯನ್ನು ಮುರಿದಿದ್ದಾರೆ.
- Nitish Kumar Reddy Record: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಶತಕ ಬಾರಿಸುವ ಮೂಲಕ 21 ವರ್ಷದ ನಿತೀಶ್ ರೆಡ್ಡಿ ಅವರು ದಿಗ್ಗಜ ಕಪಿಲ್ ದೇವ್ ದಾಖಲೆಯನ್ನು ಮುರಿದಿದ್ದಾರೆ.
(1 / 5)
ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಯುವ ಆಟಗಾರ ನಿತೀಶ್ ಕುಮಾರ್ ಟೆಸ್ಟ್ ಕ್ರಿಕೆಟ್ನಲ್ಲಿ ಚೊಚ್ಚಲ ಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ. 176 ಎಸೆತಗಳಲ್ಲಿ 10 ಬೌಂಡರಿ, 1 ಸಿಕ್ಸರ್ ಸಹಿತ 105 ರನ್ ಗಳಿಸಿ ಅಜೇಯರಾಗಿದ್ದಾರೆ.
(AFP)(2 / 5)
8ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಸೆಂಚುರಿ ಸಿಡಿಸಿದ ನಿತೀಶ್ ಅವರು, 8 ಅಥವಾ ಅದಕ್ಕಿಂತ ಕೆಳ ಕ್ರಮಾಂಕದಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಸಿಡಿಸಿದ ಭಾರತದ ಎರಡನೇ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
(AFP)(3 / 5)
ನಿತೀಶ್ಗೂ ಮುನ್ನ 2002ರಲ್ಲಿ ಸೇಂಟ್ಜೋನ್ಸ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 20 ವರ್ಷ 148 ದಿನಗಳ ವಯಸ್ಸಿನಲ್ಲಿ ಶತಕ ಬಾರಿಸಿದ ಭಾರತದ ಅಜಯ್ ರಾತ್ರಾ ಮೊದಲ ಸ್ಥಾನದಲ್ಲಿದ್ದಾರೆ. ಇವರು ಟೆಸ್ಟ್ನಲ್ಲಿ 8 ಅಥವಾ ಅದಕ್ಕಿಂತ ಕೆಳ ಕ್ರಮಾಂಕದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಭಾರತೀಯ ಬ್ಯಾಟ್ಸ್ಮನ್ ಆಗಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ ನಿತೀಶ್ ರೆಡ್ಡಿ ವಯಸ್ಸು 21 ವರ್ಷ 214 ದಿನಗಳು. ಇವರು ಕಪಿಲ್ ದಾಖಲೆಯನ್ನು ಮುರಿದಿದ್ದಾರೆ.
(AFP)(4 / 5)
1982ರಲ್ಲಿ 23 ವರ್ಷ ಮತ್ತು 24 ದಿನಗಳ ವಯಸ್ಸಿನಲ್ಲಿ ಕಪಿಲ್ ದೇವ್ ಕಾನ್ಪುರದಲ್ಲಿ ಇಂಗ್ಲೆಂಡ್ ವಿರುದ್ಧ 8ನೇ ಅಥವಾ ಅದಕ್ಕಿಂತ ಕೆಳ ಕ್ರಮಾಂಕದಲ್ಲಿ ಶತಕ ಗಳಿಸಿದ 3ನೇ ಕಿರಿಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
(AP)ಇತರ ಗ್ಯಾಲರಿಗಳು