ಭುವನೇಶ್ವರ್ ಕುಮಾರ್ ಐತಿಹಾಸಿಕ ದಾಖಲೆ; ಈ ಸಾಧನೆ ಮಾಡಿದ ಭಾರತದ ಮೊದಲ ವೇಗಿ
- Bhuvneshwar Kumar: 2025ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುವ ಮೂಲಕ ಭುವನೇಶ್ವರ್ ಕುಮಾರ್ ಇತಿಹಾಸ ನಿರ್ಮಿಸಿದ್ದಾರೆ.
- Bhuvneshwar Kumar: 2025ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುವ ಮೂಲಕ ಭುವನೇಶ್ವರ್ ಕುಮಾರ್ ಇತಿಹಾಸ ನಿರ್ಮಿಸಿದ್ದಾರೆ.
(1 / 9)
ಐಪಿಎಲ್ 2025ರ 28ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (RR) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಮೈದಾನಕ್ಕೆ ಇಳಿಯುವ ಮೂಲಕ ಭುವನೇಶ್ವರ್ ಕುಮಾರ್ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.
(2 / 9)
ದಾಖಲೆ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ಕೆತ್ತಿರುವ ಭುವನೇಶ್ವರ್ ಕುಮಾರ್ ಮೆಗಾ ಹರಾಜಿನಲ್ಲಿ 10.75 ಕೋಟಿ ರೂಪಾಯಿಗೆ ಆರ್‌ಸಿಬಿ ಸೇರಿದ್ದರು. ಐಪಿಎಲ್ನಲ್ಲಿ ಈವರೆಗೂ 5 ವಿಕೆಟ್ ಕಬಳಿಸಿರುವ ಭುವಿ, ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
(REUTERS)(3 / 9)
ರಾಜಸ್ಥಾನ್ ವಿರುದ್ಧ ಕಣಕ್ಕಿಳಿಯುತ್ತಿದ್ದಂತೆ ಟಿ20 ಕ್ರಿಕೆಟ್‌ನಲ್ಲಿ 300ಕ್ಕೂ ಹೆಚ್ಚು ಪಂದ್ಯಗಳನ್ನಾಡಿದ ಭಾರತದ ಮೊದಲ ವೇಗಿ (ಬೌಲಿಂಗ್ ಆಲ್ರೌಂಡರ್ ಸೇರಿದಂತೆ) ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚುಟುಕು ಸ್ವರೂಪದಲ್ಲಿ 315 ವಿಕೆಟ್ ಕಿತ್ತಿದ್ದಾರೆ.
(PTI)(4 / 9)
2022ರಲ್ಲಿ ಭಾರತ ಪರ ಕೊನೆಯ ಬಾರಿಗೆ ಆಡಿದ ಭುವನೇಶ್ವರ್ 87 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಟೀಮ್ ಇಂಡಿಯಾ ಪರ 90 ವಿಕೆಟ್ ಕಬಳಿಸಿದ್ದಾರೆ. ತಮ್ಮ ಪದಾರ್ಪಣೆ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 4 ಓವರ್ಗೆ 9 ರನ್ ನೀಡಿ 3 ವಿಕೆಟ್ ಕಿತ್ತು ಕನಸಿನ ಆರಂಭ ಪಡೆದಿದ್ದರು.
(PTI)(5 / 9)
ಭುವನೇಶ್ವರ್ 2009ರ ಚಾಂಪಿಯನ್ಸ್ ಲೀಗ್‌ನಲ್ಲಿ ಆರ್‌ಸಿಬಿ ಪರ ಟಿ20ಗೆ ಪದಾರ್ಪಣೆ ಮಾಡಿದ್ದರು. 2011ರಲ್ಲಿ ಪುಣೆ ವಾರಿಯರ್ಸ್ ತಂಡದ ಪರ ಐಪಿಎಲ್‌ಗೆ ಡೆಬ್ಯೂ ಮಾಡಿದ್ದರು. 2013ರವರೆಗೆ ಅದೇ ತಂಡದಲ್ಲಿ ಮುಂದುವರೆದಿದ್ದರು. 2014ರಲ್ಲಿ ಎಸ್ಆರ್ಹೆಚ್ ತಂಡದ ಪಾಲಾದರು.
(PTI)(6 / 9)
ಇನ್ನು ಎಸ್ಆರ್ಹೆಚ್ ತಂಡದ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಭುವಿ, ಐಪಿಎಲ್ 2025 ರ ಮೆಗಾ-ಹರಾಜಿನಲ್ಲಿ ಆರ್‌ಸಿಬಿಗೆ ಮರಳಿದರು. ಅತಿ ಹೆಚ್ಚು ಟಿ20 ಪಂದ್ಯ ಆಡಿದ ಭಾರತೀಯ ವೇಗಿಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಎರಡನೇ ಸ್ಥಾನದಲ್ಲಿದ್ದಾರೆ.
(PTI)(7 / 9)
291 ಟಿ20 ಪಂದ್ಯಗಳನ್ನು ಆಡಿರುವ ಮುಂಬೈ ಇಂಡಿಯನ್ಸ್ (MI) ನಾಯಕ ಪಾಂಡ್ಯ ತಮ್ಮ ಚೊಚ್ಚಲ ಪಂದ್ಯದಿಂದಲೂ ಟಿ20ಐ ತಂಡದಲ್ಲಿ ನಿಯಮಿತ ಆಟಗಾರರಾಗಿದ್ದಾರೆ. ಅವರು ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕತ್ವವನ್ನೂ ವಹಿಸಿದ್ದಾರೆ.
(AP)(8 / 9)
ಟೀಮ್ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಮೂರನೇ ಸ್ಥಾನದಲ್ಲಿದ್ದು, 234 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ.
(REUTERS)ಇತರ ಗ್ಯಾಲರಿಗಳು