ಐಸಿಸಿ ವರ್ಷದ ಟಿ20 ತಂಡಕ್ಕೆ ರೋಹಿತ್ ಶರ್ಮಾ ನಾಯಕ; ವಿರಾಟ್‌ ಕೊಹ್ಲಿ ಇಲ್ಲ, 11ರ ಪೈಕಿ ಭಾರತದ ನಾಲ್ವರಿಗೆ ಸ್ಥಾನ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಐಸಿಸಿ ವರ್ಷದ ಟಿ20 ತಂಡಕ್ಕೆ ರೋಹಿತ್ ಶರ್ಮಾ ನಾಯಕ; ವಿರಾಟ್‌ ಕೊಹ್ಲಿ ಇಲ್ಲ, 11ರ ಪೈಕಿ ಭಾರತದ ನಾಲ್ವರಿಗೆ ಸ್ಥಾನ

ಐಸಿಸಿ ವರ್ಷದ ಟಿ20 ತಂಡಕ್ಕೆ ರೋಹಿತ್ ಶರ್ಮಾ ನಾಯಕ; ವಿರಾಟ್‌ ಕೊಹ್ಲಿ ಇಲ್ಲ, 11ರ ಪೈಕಿ ಭಾರತದ ನಾಲ್ವರಿಗೆ ಸ್ಥಾನ

  • ಐಸಿಸಿ ವರ್ಷದ ಟಿ20 ತಂಡವನ್ನು ಪ್ರಕಟಿಸಿದೆ. 2024ರ ತಂಡದಲ್ಲಿ ಭಾರತ ತಂಡದಿಂದ ದಾಖಲೆಯ ನಾಲ್ವರು ಕ್ರಿಕೆಟಿಗರು ಸ್ಥಾನ ಪಡೆದಿದ್ದಾರೆ. ಉಳಿದಂತೆ ಆಸ್ಟ್ರೇಲಿಯಾ, ಇಂಗ್ಲೆಂಡ್, ಪಾಕಿಸ್ತಾನ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ಅಫ್ಘಾನಿಸ್ತಾನ ಮತ್ತು ಶ್ರೀಲಂಕಾದ ತಲಾ ಒಬ್ಬರು ಕ್ರಿಕೆಟಿಗರು ಕಾಣಿಸಿಕೊಂಡಿದ್ದಾರೆ.

ಐಸಿಸಿ ವರ್ಷದ ಟಿ20 ತಂಡವನ್ನು ಪ್ರಕಟಿಸಿದೆ. 2024 ರ ವರ್ಷದ ತಂಡದಲ್ಲಿ ನಾಲ್ವರು ಭಾರತೀಯ ಕ್ರಿಕೆಟಿಗರು ಸ್ಥಾನ ಪಡೆದಿದ್ದಾರೆ. ಒಟ್ಟು 11 ಸದಸ್ಯರ ತಂಡದಲ್ಲಿ ಭಾರತದ ನಾಲ್ವರು ಕಾಣಿಸಿಕೊಂಡರೆ, ಇತರ ದೇಶಗಳ ತಂಡಗಳಿಂದ ತಲಾ ಒಬ್ಬರು ಮಾತ್ರ ಸ್ಥಾನ ಪಡೆದಿದ್ದಾರೆ. (ಚಿತ್ರ ಕೃಪೆ: ರಾಯಿಟರ್ಸ್)
icon

(1 / 8)

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ಐಸಿಸಿ ವರ್ಷದ ಟಿ20 ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅವರ ನಾಯಕತ್ವದಲ್ಲಿ ಭಾರತ ತಂಡ ಕಳೆದ ವರ್ಷ ಟಿ20 ವಿಶ್ವಕಪ್ ಗೆದ್ದಿತ್ತು. ಒಂದು ದಶಕಕ್ಕೂ ಹೆಚ್ಚು ಸಮಯದ ನಂತರ ಟೀಮ್ ಇಂಡಿಯಾ ಮತ್ತೊಮ್ಮೆ ಐಸಿಸಿ ಟ್ರೋಫಿಯನ್ನು ಎತ್ತಿ ಹಿಡಿಯಿತು. ಹೀಗಾಗಿ ಐಸಿಸಿಯು ಶರ್ಮಾರನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ. ಫೋಟೋ: ಎಎನ್‌ಐ
icon

(2 / 8)

ತಂಡದಲ್ಲಿ ರೋಹಿತ್ ಶರ್ಮಾ ಅವರಲ್ಲದೆ, ಭಾರತದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ, ವೇಗಿಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಕೂಡ ಇದ್ದಾರೆ. ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ ಜಸ್ಪ್ರೀತ್ ಬುಮ್ರಾ ಯಶಸ್ವಿ ಬೌಲಿಂಗ್‌ ಮೂಲಕ ಭಾರತ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಅರ್ಷದೀಪ್ ಸಿಂಗ್ ಕೂಡ ಬಹುತೇಕ ಎಲ್ಲಾ ಪಂದ್ಯಗಳಲ್ಲಿ ವಿಕೆಟ್ ಪಡೆದಿದ್ದರು. ಫೋಟೋ - ಎಎಫ್‌ಪಿ.
icon

(3 / 8)

ಟಿ20 ವಿಶ್ವಕಪ್ ಫೈನಲ್‌ನಲ್ಲಿ ಕ್ಲಾಸೆನ್ ಅವರನ್ನು ಔಟ್ ಮಾಡುವ ಮೂಲಕ ಪಂದ್ಯಕ್ಕೆ ತಿರುವು ನೀಡಿದ ಹಾರ್ದಿಕ್ ಪಾಂಡ್ಯ ಕೂಡ ತಂಡದಲ್ಲಿದ್ದಾರೆ. ಚುಟುಕು ಸ್ವರೂಪದಲ್ಲಿ ಪಾಂಡ್ಯ ಅತ್ಯುತ್ತಮ ಆಲ್‌ರೌಂಡರ್‌ ಆಗಿದ್ದಾರೆ.
icon

(4 / 8)

(PTI)

ಅರ್ಷದೀಪ್ ಸಿಂಗ್ ಇತ್ತೀಚೆಗೆ ಭಾರತೀಯ ಕ್ರಿಕೆಟ್‌ನ ಟಿ20 ಸ್ವರೂಪದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಅವರು ಯುಜ್ವೇಂದ್ರ ಚಹಲ್ ಅವರನ್ನು ಹಿಂದಿಕ್ಕಿದ್ದಾರೆ. ಐಸಿಸಿ ವರ್ಷದ ಟಿ20 ತಂಡದಲ್ಲಿ ಇದೀಗ ಅವರು ಬುಮ್ರಾ ಜೊತೆಗೆ ಸ್ಥಾನ ಪಡೆದಿದ್ದಾರೆ. ಫೋಟೋ - ಎಎಫ್‌ಪಿ.
icon

(5 / 8)

ಬುಮ್ರಾ 2024ರ ಟಿ20 ವಿಶ್ವಕಪ್‌ನಲ್ಲಿ 15 ವಿಕೆಟ್‌ಗಳನ್ನು ಪಡೆದು ಅದ್ಭುತ ಪ್ರದರ್ಶನ ನೀಡಿದ್ದರು. ಇದೇ ವೇಳೆ ಅರ್ಷದೀಪ್ ಸಿಂಗ್‌ 17 ವಿಕೆಟ್‌ಗಳೊಂದಿಗೆ ಟೂರ್ನಿಯ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು.
icon

(6 / 8)

(REUTERS)

ICC ವರ್ಷದ ಟಿ20 ತಂಡ 2024: ರೋಹಿತ್ ಶರ್ಮಾ (ನಾಯಕ), ಟ್ರಾವಿಸ್ ಹೆಡ್, ಫಿಲ್ ಸಾಲ್ಟ್, ಬಾಬರ್ ಆಜಮ್, ನಿಕೋಲಸ್ ಪೂರನ್ (ವಿಕೆಟ್‌ ಕೀಪರ್), ಸಿಕಂದರ್ ರಾಜಾ, ಹಾರ್ದಿಕ್ ಪಾಂಡ್ಯ, ರಶೀದ್ ಖಾನ್, ವನಿಂದು ಹಸರಂಗ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್.
icon

(7 / 8)

ಇನ್ನಷ್ಟು ಕ್ರೀಡಾ ಸುದ್ದಿಗಳಿಗೆ ಎಚ್‌ಟಿ ಕನ್ನಡ ಸುದ್ದಿತಾಣಕ್ಕೆ ಭೇಟಿ ನೀಡಿ
icon

(8 / 8)

ಇತರ ಗ್ಯಾಲರಿಗಳು