ಏಕದಿನ ಕ್ರಿಕೆಟ್​ನಲ್ಲಿ ಮತ್ತೊಂದು ಇತಿಹಾಸ ನಿರ್ಮಿಸಿದ ಶುಭ್ಮನ್ ಗಿಲ್; ಸಚಿನ್, ವಿರಾಟ್, ಧವನ್ ದಾಖಲೆ ಬ್ರೇಕ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಏಕದಿನ ಕ್ರಿಕೆಟ್​ನಲ್ಲಿ ಮತ್ತೊಂದು ಇತಿಹಾಸ ನಿರ್ಮಿಸಿದ ಶುಭ್ಮನ್ ಗಿಲ್; ಸಚಿನ್, ವಿರಾಟ್, ಧವನ್ ದಾಖಲೆ ಬ್ರೇಕ್

ಏಕದಿನ ಕ್ರಿಕೆಟ್​ನಲ್ಲಿ ಮತ್ತೊಂದು ಇತಿಹಾಸ ನಿರ್ಮಿಸಿದ ಶುಭ್ಮನ್ ಗಿಲ್; ಸಚಿನ್, ವಿರಾಟ್, ಧವನ್ ದಾಖಲೆ ಬ್ರೇಕ್

  • ಭಾರತದ ಪರ ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ 8 ಏಕದಿನ ಶತಕ ಪೂರ್ಣಗೊಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಶುಭ್ಮನ್ ಗಿಲ್ ಪಾತ್ರರಾಗಿದ್ದು, ದಿಗ್ಗಜರನ್ನೇ ಹಿಂದಿಕ್ಕಿದ್ದಾರೆ.

ಯಂಗ್ ಸೂಪರ್ ಸ್ಟಾರ್ ಶುಭ್ಮನ್ ಗಿಲ್ ಅವರ (101*) ಮನಮೋಹಕ ಶತಕದ ನೆರವಿನಿಂದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಶುಭಾರಂಭ ಮಾಡಿದೆ. ಈ ಸೆಂಚುರಿಯೊಂದಿಗೆ ಗಿಲ್ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.
icon

(1 / 9)

(PTI)

ಚಾಂಪಿಯನ್ಸ್ ಟ್ರೋಫಿಯ 2ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಬಾಂಗ್ಲಾದೇಶ, ತೌಹಿದ್ ಹೃದೋಯ್​ (100) ಅವರ ಶತಕದ ನೆರವಿನಿಂದ 228 ರನ್​ಗಳ ಗೌರವಯುತ ಮೊತ್ತ ದಾಖಲಿಸಿತು. ಈ ಗುರಿ ಬೆನ್ನಟ್ಟಿದ ಭಾರತ, 21 ಎಸೆತಗಳನ್ನು ಬಾಕಿ ಉಳಿಸಿ ಗೆದ್ದು ಬೀಗಿತು.
icon

(2 / 9)

(AFP)

ಆರಂಭಿಕರಾಗಿ ಕಣಕ್ಕಿಳಿದು ಗೆಲುವಿನ ತನಕ ಕ್ರೀಸ್​ನಲ್ಲೇ ಉಳಿದಿದ್ದ ಗಿಲ್, ಎದುರಿಸಿದ 129 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್ ಸಹಿತ 101 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದಕ್ಕಾಗಿ ಪಂದ್ಯಶ್ರೇಷ್ಠ ಪಡೆದ ಅವರು, ಏಕದಿನ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
icon

(3 / 9)

ಏಕದಿನ ವೃತ್ತಿಜೀವನದಲ್ಲಿ 8ನೇ ಶತಕ ಸಿಡಿಸಿದ ಶುಭ್ಮನ್ ಗಿಲ್ ವಿಶೇಷ ದಾಖಲೆಯೊಂದನ್ನು ಸಿಡಿಸುವ ಮೂಲಕ ಭಾರತೀಯ ದಿಗ್ಗಜರ ದಾಖಲೆಯನ್ನು ಮುರಿದಿದ್ದಾರೆ. ಕೊಹ್ಲಿ, ಧವನ್, ಸಚಿನ್ ಅವರನ್ನೂ ಹಿಂದಿಕ್ಕಿದ್ದಾರೆ.
icon

(4 / 9)

ಏಕದಿನ ಕ್ರಿಕೆಟ್​ನಲ್ಲಿ ಅತಿ ಕಡಿಮೆ ಇನ್ನಿಂಗ್ಸ್​​​ಗಳಲ್ಲಿ 8 ಶತಕ ಪೂರ್ಣಗೊಳಿಸಿದ ಭಾರತದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗಿಲ್ ಕೇವಲ 51 ಇನ್ನಿಂಗ್ಸ್​​ಗಳಲ್ಲಿ ಈ ಸಾಧನೆ ಮಾಡುವ ಮೂಲಕ ಧವನ್, ಕೊಹ್ಲಿ ಅವರನ್ನು ಹಿಂದಕ್ಕೆ ತಳ್ಳಿದ್ದಾರೆ.
icon

(5 / 9)

ಕಡಿಮೆ ಇನ್ನಿಂಗ್ಸ್​ಗಳಲ್ಲಿ 8 ಶತಕ ದಾಖಲಿಸಿದ್ದ ದಾಖಲೆ ಶಿಖರ್ ಧವನ್ ಹೆಸರಿನಲ್ಲಿತ್ತು. ಭಾರತದ ಪರ ಅವರು 57 ಏಕದಿನ ಇನ್ನಿಂಗ್ಸ್​ಗಳಲ್ಲಿ ಈ ದಾಖಲೆ ಬರೆದು ಅಗ್ರಸ್ಥಾನದಲ್ಲಿದ್ದರು. ಇದೀಗ ಈ ದಾಖಲೆ ಗಿಲ್ ಪಾಲಾಗಿದ್ದು, ಧವನ್ 2ನೇ ಸ್ಥಾನಕ್ಕೆ ಕುಸಿದಿದ್ದಾರೆ.
icon

(6 / 9)

ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಬ್ಯಾಟಿಂಗ್ ಸೂಪರ್​ ಸ್ಟಾರ್ ಕೊಹ್ಲಿ 68 ಇನ್ನಿಂಗ್ಸ್​ಗಳಲ್ಲಿ 8 ಶತಕ ಸಿಡಿಸಿದ್ದರು.
icon

(7 / 9)

(BCCI - X)

ಟೀಮ್ ಇಂಡಿಯಾ ಮಾಜಿ ಕೋಚ್ ಗೌತಮ್ ಗಂಭೀರ್ ಕೂಡ ಈ ಪಟ್ಟಿಯಲ್ಲಿದ್ದಾರೆ. ಅವರು 8 ಶತಕ ಪೂರೈಸಲು ತೆಗೆದುಕೊಂಡಿದ್ದ ಏಕದಿನ ಇನ್ನಿಂಗ್ಸ್​ಗಳು 98.
icon

(8 / 9)

ಇನ್ನು ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ದಿಗ್ಗಜ ಸಚಿನ್ ತೆಂಡೂಲ್ಕರ್​ ತಾನು 8 ಶತಕಗಳನ್ನು ಪೂರ್ಣಗೊಳಿಸಲು ತೆಗೆದುಕೊಂಡಿದ್ದು 111 ಇನ್ನಿಂಗ್ಸ್​ಗಳು. ಸದ್ಯ ಅವರು ಐದನೇ ಸ್ಥಾನದಲ್ಲಿದ್ದಾರೆ.
icon

(9 / 9)

ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು