ಏಕದಿನ ಕ್ರಿಕೆಟ್‌ನಲ್ಲಿ 11ನೇ ಶತಕ ಸಿಡಿಸಿದ ಸ್ಮೃತಿ ಮಂಧಾನ; ಹರ್ಮನ್‌ಪ್ರೀತ್ ಕೌರ್ ದಾಖಲೆ ಮುರಿದ ಸಿಕ್ಸರ್ ಕ್ವೀನ್
ಶ್ರೀಲಂಕಾದಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಮಹಿಳಾ ತಂಡದ ವಿರುದ್ಧ ಸ್ಮೃತಿ ಮಂಧಾನಾ ಆಕರ್ಷಕ ಶತಕ ಬಾರಿಸಿದ್ದಾರೆ. ಅಬ್ಬರಿಸಿದ ಮಂಧಾನ, 15 ಬೌಂಡರಿ ಮತ್ತು 2 ಸಿಕ್ಸರ್ ಸಹಿತ 101 ಎಸೆತಗಳಲ್ಲಿ 116 ರನ್ ಗಳಿಸಿದರು. ಇದರೊಂದಿಗೆ ಹಲವು ದಾಖಲೆ ನಿರ್ಮಿಸಿದ್ದಾರೆ.
(1 / 5)
ಇದು ಏಕದಿನ ಕ್ರಿಕೆಟ್‌ನಲ್ಲಿ ಸ್ಮೃತಿ ಮಂಧಾನಾ ಅವರ 11ನೇ ಶತಕವಾಗಿದೆ. ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಮಂಧಾನ ಮೂರನೇ ಸ್ಥಾನದಲ್ಲಿದ್ದಾರೆ. 15 ಶತಕಗಳನ್ನು ಗಳಿಸಿದ ಮೆಗ್ ಲ್ಯಾನಿಂಗ್ (ಆಸ್ಟ್ರೇಲಿಯಾ) ಮೊದಲ ಸ್ಥಾನದಲ್ಲಿದ್ದು, ನ್ಯೂಜಿಲೆಂಡ್ ತಂಡದ ಸುಜೀ ಬೇಟ್ಸ್ 13 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
(2 / 5)
ವನಿತೆಯರ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಹೆಚ್ಚು ಶತಕ ಬಾರಿಸಿದ ಆಟಗಾರ್ತಿ ಮಂಧಾನಾ. ಮಂಧಾನಾ ನಂತರದ ಸ್ಥಾಣದಲ್ಲಿ ಮಾಜಿ ಆಟಗಾರ್ತಿ ಮಿಥಾಲಿ ರಾಜ್ ಆರು ಏಕದಿನ ಶತಕಗಳನ್ನು ಗಳಿಸಿದ್ದಾರೆ.
(3 / 5)
ಶ್ರೀಲಂಕಾ ವಿರುದ್ಧದ ಇನ್ನಿಂಗ್ಸ್ ಮೂಲಕ ಸ್ಮೃತಿ ಮಂಧಾನಾ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. ಮಹಿಳಾ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರ್ತಿಯರ ಪಟ್ಟಿಯಲ್ಲಿ ಮಂಧಾನಾ ಅವರು ಹರ್ಮನ್‌ಪ್ರೀತ್ ಕೌರ್ ಅವರನ್ನು ಹಿಂದಿಕ್ಕಿದರು.
(4 / 5)
ಇದೀಗ ಮಂಧಾನಾ 54 ಸಿಕ್ಸರ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಹರ್ಮನ್‌ಪ್ರೀತ್ ಕೌರ್ 52 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. 20 ಸಿಕ್ಸರ್‌ಗಳೊಂದಿಗೆ ರಿಚಾ ಘೋಷ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ಇತರ ಗ್ಯಾಲರಿಗಳು