ಭಾರತದ ವಿರುದ್ಧ ಅತಿ ಹೆಚ್ಚು ಟೆಸ್ಟ್ ಶತಕ ಸಿಡಿಸಿದ ಸ್ಟೀವ್ ಸ್ಮಿತ್; ಜೋ ರೂಟ್ ದಾಖಲೆ ಬ್ರೇಕ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಭಾರತದ ವಿರುದ್ಧ ಅತಿ ಹೆಚ್ಚು ಟೆಸ್ಟ್ ಶತಕ ಸಿಡಿಸಿದ ಸ್ಟೀವ್ ಸ್ಮಿತ್; ಜೋ ರೂಟ್ ದಾಖಲೆ ಬ್ರೇಕ್

ಭಾರತದ ವಿರುದ್ಧ ಅತಿ ಹೆಚ್ಚು ಟೆಸ್ಟ್ ಶತಕ ಸಿಡಿಸಿದ ಸ್ಟೀವ್ ಸ್ಮಿತ್; ಜೋ ರೂಟ್ ದಾಖಲೆ ಬ್ರೇಕ್

  • Steve Smith: ಭಾರತ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಸ್ಟೀವ್ ಸ್ಮಿತ್‌ ಆಕರ್ಷಕ ಶತಕ ಬಾರಿಸಿದ್ದಾರೆ. ಇದರೊಂದಿಗೆ ಬಲಿಷ್ಠ ಭಾರತ ತಂಡದ ವಿರುದ್ಧ ಮಹತ್ವದ ದಾಖಲೆ ನಿರ್ಮಿಸಿದ್ದಾರೆ.

ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಸ್ಟೀವ್ ಸ್ಮಿತ್ ಶತಕ ಬಾರಿಸಿದ್ದಾರೆ. ಪರಿಣಾಮವಾಗಿ, ಅವರು ಹಲವಾರು ವೈಯಕ್ತಿಕ ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ವೇಳೆ ಜೋ ರೂಟ್ ಅವರನ್ನು ಹಿಂದಿಕ್ಕುವ ಮೂಲಕ ಸ್ಮಿತ್ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದಾರೆ.
icon

(1 / 5)

(AFP)

ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಸ್ಟೀವ್ ಸ್ಮಿತ್ 167 ಎಸೆತಗಳಲ್ಲಿ ಶತಕ ಬಾರಿಸಿದ್ದಾರೆ. ಇದು ಟೆಸ್ಟ್ ವೃತ್ತಿಜೀವನದಲ್ಲಿ ಸ್ಮಿತ್ ಅವರ 34ನೇ ಶತಕವಾಗಿದೆ. ಸ್ಮಿತ್ 113 ಟೆಸ್ಟ್ ಪಂದ್ಯಗಳ 201 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
icon

(2 / 5)

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ದಾಖಲೆ ಸ್ಟೀವ್ ಸ್ಮಿತ್ ಹೆಸರಿನಲ್ಲಿದೆ. ಇದು ಭಾರತ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಮಿತ್ ಬಾರಿಸಿದ 11ನೇ ಶತಕವಾಗಿದೆ. ಟೀಮ್ ಇಂಡಿಯಾ ವಿರುದ್ಧ 43 ಇನ್ನಿಂಗ್ಸ್‌ಗಳಲ್ಲಿ ಸ್ಮಿತ್ 11 ಶತಕಗಳನ್ನು ಬಾರಿಸಿದ್ದಾರೆ. ಆ ಮೂಲಕ ಜೋ ರೂಟ್ ಅವರ ದಾಖಲೆಯನ್ನು ಸ್ಮಿತ್ ಮುರಿದಿದ್ದಾರೆ. ಜೋ ರೂಟ್ ಭಾರತದ ವಿರುದ್ಧ 55 ಇನ್ನಿಂಗ್ಸ್‌ಗಳಲ್ಲಿ ಆಡಿ 10 ಟೆಸ್ಟ್ ಶತಕಗಳನ್ನು ಗಳಿಸಿದ್ದಾರೆ. ಅವರನ್ನು ಈಗ ಸ್ಮಿತ್‌ ಹಿಂದಿಕ್ಕಿದ್ದಾರೆ. ಗ್ಯಾರಿ ಸೋಬರ್ಸ್, ವಿವಿಯನ್ ರಿಚರ್ಡ್ಸ್ ಮತ್ತು ರಿಕಿ ಪಾಂಟಿಂಗ್ ಜಂಟಿ ಮೂರನೇ ಸ್ಥಾನದಲ್ಲಿದ್ದಾರೆ. ಈ ಮೂವರು ಸ್ಟಾರ್ ಆಟಗಾರರು ಭಾರತದ ವಿರುದ್ಧ ಎಂಟು ಟೆಸ್ಟ್ ಶತಕಗಳನ್ನು ಗಳಿಸಿದ್ದಾರೆ.
icon

(3 / 5)

(AP)

ಬಾರ್ಡರ್-ಗವಾಸ್ಕರ್ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಸಾರ್ವಕಾಲಿಕ ದಾಖಲೆಯನ್ನು ಸ್ಟೀವ್ ಸ್ಮಿತ್ ಹೊಂದಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅವರು ಈವರೆಗೆ ಒಟ್ಟು 10 ಶತಕಗಳನ್ನು ಗಳಿಸಿದ್ದಾರೆ. ಈ ವಿಷಯದಲ್ಲಿ ಸ್ಮಿತ್ ವಿರಾಟ್ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ಅವರನ್ನು ಕೂಡಾ ಹಿಂದಿಕ್ಕಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೊಹ್ಲಿ ಮತ್ತು ಸಚಿನ್ ತಲಾ ಒಂಬತ್ತು ಶತಕಗಳನ್ನು ಗಳಿಸಿದ್ದಾರೆ.
icon

(4 / 5)

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಸ್ಮಿತ್ ಈಗ ಇಬ್ಬರನ್ನು ಹಿಂದಿಕ್ಕಿದ್ದಾರೆ. ಇಂಗ್ಲೆಂಡ್‌ನ ಅಲಿಸ್ಟೇರ್ ಕುಕ್ (33) ಮತ್ತು ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ (33) ಅವರನ್ನು ಹಿಂದಿಕ್ಕಿದ್ದಾರೆ. ಯೂನಿಸ್ ಖಾನ್ (34), ಸುನಿಲ್ ಗವಾಸ್ಕರ್ (34), ಬ್ರಿಯಾನ್ ಲಾರಾ (34) ಮತ್ತು ಮಹೇಲಾ ಜಯವರ್ಧನೆ (34) ಅವರೊಂದಿಗೆ ಜಂಟಿಯಾಗಿ ಏಳನೇ ಸ್ಥಾನದಲ್ಲಿದ್ದಾರೆ. ಸಕ್ರಿಯ ಕ್ರಿಕೆಟಿಗರಲ್ಲಿ ಅತಿ ಹೆಚ್ಚು ಟೆಸ್ಟ್ ಶತಕಗಳ ವಿಷಯದಲ್ಲಿ ಸ್ಟೀವ್ ಸ್ಮಿತ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿದ್ದಾರೆ. 36 ಶತಕ ಬಾರಿಸಿರುವ ಜೋ ರೂಟ್ ಅಗ್ರಸ್ಥಾನದಲ್ಲಿದ್ದು, ಸ್ಮಿತ್ ಎರಡನೇ ಸ್ಥಾನದಲ್ಲಿದ್ದಾರೆ.
icon

(5 / 5)

ಇತರ ಗ್ಯಾಲರಿಗಳು