ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಟಾಪ್-10 ಭಾರತದ ಬ್ಯಾಟರ್ಸ್; ವಿರಾಟ್ ಕೊಹ್ಲಿಗೆ ಯಾವ ಸ್ಥಾನ?
ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದು, 123 ಪಂದ್ಯಗಳಲ್ಲಿ 9230 ರನ್ ಗಳಿಸಿದ್ದಾರೆ. ಅವರ ಖಾತೆಯಲ್ಲಿ 30 ಶತಕಗಳಿವೆ. ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಭಾರತದ ಟಾಪ್-10 ಬ್ಯಾಟರ್ಗಳ ಪಟ್ಟಿ ನೋಡೋಣ.
(1 / 10)
ಟೀಮ್ ಇಂಡಿಯಾ ಪರ ಅತ್ಯಧಿಕ ಶತಕ ಸಿಡಿಸಿದವರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ, ಅವರನ್ನು 'ಕ್ರಿಕೆಟ್ ದೇವರು' ಎಂದು ಕರೆಯಲಾಗುತ್ತದೆ. ಟೆಸ್ಟ್ ಶತಕಗಳ ವಿಷಯದಲ್ಲಿ ಸಚಿನ್ ಭಾರತಕ್ಕೆ ಮಾತ್ರವಲ್ಲ, ವಿಶ್ವದಲ್ಲೇ ಅತ್ಯಧಿಕ ಶತಕ ಸಿಡಿಸಿದ ಆಟಗಾರ, ಅವರ ಖಾತೆಯಲ್ಲಿ 51 ಶತಕಗಳಿವೆ.
(2 / 10)
ರಾಹುಲ್ ದ್ರಾವಿಡ್ 36 ಶತಕಗಳೊಂದಿಗೆ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಭಾರತದ ಎರಡನೇ ಬ್ಯಾಟ್ಸ್ಮನ್ ಆಗಿದ್ದಾರೆ. ಅತಿ ಹೆಚ್ಚು ಟೆಸ್ಟ್ ಶತಕಗಳ ವಿಷಯದಲ್ಲಿ ದ್ರಾವಿಡ್ ವಿಶ್ವದ 7ನೇ ಸ್ಥಾನದಲ್ಲಿದ್ದಾರೆ.
(4 / 10)
ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ಈ ಸ್ವರೂಪದಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಭಾರತೀಯರಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 30 ಶತಕ ಬಾರಿಸಿದ್ದಾರೆ.
(ANI Picture Service Wire)(5 / 10)
ಸ್ಫೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಟೆಸ್ಟ್ ಪಂದ್ಯಗಳಲ್ಲಿ 23 ಶತಕ ಬಾರಿಸಿದ್ದಾರೆ. ಅತಿ ಹೆಚ್ಚು ಶತಕ ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ಅವರು ಐದನೇ ಸ್ಥಾನದಲ್ಲಿದ್ದಾರೆ.
(6 / 10)
ಮೊಹಮ್ಮದ್ ಅಜರುದ್ದೀನ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 22 ಶತಕಗಳನ್ನು ಸಿಡಿಸಿದ್ದಾರೆ. ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ಅವರು ಆರನೇ ಸ್ಥಾನದಲ್ಲಿದ್ದಾರೆ.
(7 / 10)
ಟೆಸ್ಟ್ ಕ್ರಿಕೆಟ್ನ ಸ್ಪೆಷಲಿಸ್ಟ್ ಬ್ಯಾಟರ್ ಚೇತೇಶ್ವರ ಪೂಜಾರ 19 ಶತಕಗಳೊಂದಿಗೆ ಈ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದಾರೆ.
(8 / 10)
ದಿಲೀಪ್ ವೆಂಗ್ಸರ್ಕರ್ ಟೆಸ್ಟ್ ಕ್ರಿಕೆಟ್ನಲ್ಲಿ 17 ಶತಕ ಬಾರಿಸಿದ್ದಾರೆ. 116 ಟೆಸ್ಟ್ ಪಂದ್ಯಗಳಲ್ಲಿ 42.13ರ ಸರಾಸರಿಯಲ್ಲಿ 6868 ರನ್ ಗಳಿಸಿದ್ದಾರೆ.
(9 / 10)
ವಿವಿಎಸ್ ಲಕ್ಷ್ಮಣ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 17 ಶತಕಗಳನ್ನು ಬಾರಿಸಿದ್ದಾರೆ. 134 ಟೆಸ್ಟ್ ಪಂದ್ಯಗಳಲ್ಲಿ 225 ಇನ್ನಿಂಗ್ಸ್ಗಳಲ್ಲಿ 45.97 ಸರಾಸರಿಯಲ್ಲಿ 8781 ರನ್ ಗಳಿಸಿದ್ದಾರೆ.
ಇತರ ಗ್ಯಾಲರಿಗಳು