ಟೆಸ್ಟ್ ಕ್ರಿಕೆಟ್: ಅತಿ ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಪಡೆದ ಟಾಪ್-5 ಬೌಲರ್ಸ್ ಯಾರು; ಬುಮ್ರಾಗೆ ಎಷ್ಟನೇ ಸ್ಥಾನ?
- Jasprit Bumrah Record: ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಪಡೆದ ಬೌಲರ್ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಪಡೆದ ಟಾಪ್-5 ಬೌಲರ್ಗಳ ಪಟ್ಟಿ ಇಲ್ಲಿದೆ.
- Jasprit Bumrah Record: ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಪಡೆದ ಬೌಲರ್ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಪಡೆದ ಟಾಪ್-5 ಬೌಲರ್ಗಳ ಪಟ್ಟಿ ಇಲ್ಲಿದೆ.
(1 / 7)
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ 2ನೇ ಇನ್ನಿಂಗ್ಸ್ನಲ್ಲಿ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರು ಟೆಸ್ಟ್ ಕ್ರಿಕೆಟ್ನಲ್ಲಿ 200 ವಿಕೆಟ್ಗಳ ಸಾಧನೆ ಮಾಡಿದ್ದಾರೆ. 2018ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಬುಮ್ರಾ, ಕೇವಲ 44 ಟೆಸ್ಟ್ಗಳಲ್ಲಿ ಇನ್ನೂರು ವಿಕೆಟ್ಗಳನ್ನು ಪೂರೈಸಿ ದಾಖಲೆ ನಿರ್ಮಿಸಿದ್ದಾರೆ.
(2 / 7)
ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡಿದ್ದು ಬುಮ್ರಾರ 200ನೇ ಟೆಸ್ಟ್ ವಿಕೆಟ್. ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಕಡಿಮೆ ಪಂದ್ಯಗಳಲ್ಲಿ 200 ವಿಕೆಟ್ಗಳ ಸಾಧನೆ ಮಾಡಿರುವ ಬುಮ್ರಾ ಮತ್ತೊಂದು ಸಾಧನೆ ಕೂಡ ಮಾಡಿದ್ದಾರೆ ಎಂಬುದನ್ನು ನಾವು ತಿಳಿಯಲೇಬೇಕು. ಅಂದರೆ ಕೇವಲ 8484 ಬಾಲ್ಗಳಲ್ಲಿ ಇಷ್ಟು ವಿಕೆಟ್ ಉರುಳಿಸಿ ಗಮನ ಸೆಳೆದಿದ್ದಾರೆ. ಪ್ರಸ್ತುತ ನಾವು ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಕಡಿಮೆ ಎಸೆತದಲ್ಲಿ 200 ವಿಕೆಟ್ ಪಡೆದ ಬೌಲರ್ಗಳು ಯಾರು ಎಂಬುದನ್ನು ಈ ಮುಂದೆ ನೋಡೋಣ.
(BCCI- X)(3 / 7)
ವಕಾರ್ ಯೂನಿಸ್ - 7725 ಎಸೆತಗಳು: ಪಾಕಿಸ್ತಾನದ ಮಾಜಿ ವೇಗದ ಬೌಲರ್ ವಕಾರ್ ಯೂನಿಸ್ ಟೆಸ್ಟ್ ಕ್ರಿಕೆಟ್ನಲ್ಲಿ 200 ವಿಕೆಟ್ ಪಡೆದ ಅತ್ಯಂತ ಕಿರಿಯ ಬೌಲರ್ ಆಗಿದ್ದಾರೆ. ವಕಾರ್ 1989ರಲ್ಲಿ ಸಚಿನ್ ತೆಂಡೂಲ್ಕರ್ ಅವರೊಂದಿಗೆ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು ವಕಾರ್, 1995ರಲ್ಲಿ 200ನೇ ವಿಕೆಟ್ ಪಡೆದಿದ್ದರು. ಇವರು 7725 ಎಸೆತಗಳಲ್ಲಿ ಇನ್ನೂರು ವಿಕೆಟ್ ಪಡೆದಿದ್ದರು.
(4 / 7)
ಡೇಲ್ ಸ್ಟೇನ್- 7848 ಎಸೆತಗಳು: ಸೌತ್ ಆಫ್ರಿಕಾದ ಡೇಲ್ ಸ್ಟೇನ್ ಟೆಸ್ಟ್ ಇತಿಹಾಸದ ಅತ್ಯುತ್ತಮ ಬೌಲರ್ಗಳಲ್ಲಿ ಒಬ್ಬರು. ಹಲವು ವರ್ಷಗಳ ಕಾಲ ನಂಬರ್ 1 ಶ್ರೇಯಾಂಕದಲ್ಲಿದ್ದ ಸ್ಟೇನ್ ಟೆಸ್ಟ್ ಕ್ರಿಕೆಟ್ನಲ್ಲಿ 7,848 ಎಸೆತಗಳಲ್ಲಿ 200 ವಿಕೆಟ್ ಪೂರೈಸಿದ್ದಾರೆ. 2019ರಲ್ಲಿ ಸ್ಟೇನ್ ನಿವೃತ್ತಿ ಘೋಷಿಸಿದ್ದರು.
(5 / 7)
ಕಗಿಸೊ ರಬಾಡ - 8154 ಎಸೆತಗಳು: ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ 8154 ಎಸೆತಗಳಲ್ಲಿ 200 ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ.
(6 / 7)
ಜಸ್ಪ್ರೀತ್ ಬುಮ್ರಾ - 8484 ಎಸೆತಗಳು: ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ ಬುಮ್ರಾ. ತಮ್ಮ ವೃತ್ತಿಜೀವನದ 8484ನೇ ಎಸೆತದಲ್ಲಿ 200ನೇ ವಿಕೆಟ್ ಪಡೆದರು. ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಕಿತ್ತಿರುವ ಭಾರತದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಬುಮ್ರಾ.
ಇತರ ಗ್ಯಾಲರಿಗಳು