ಡಬ್ಲ್ಯುಟಿಸಿಯಲ್ಲಿ ಅತಿ ಹೆಚ್ಚು ಪಂದ್ಯ ಗೆದ್ದ ಟಾಪ್ 5 ನಾಯಕರು ಯಾರು; ರೋಹಿತ್ ಶರ್ಮಾಗಿಂತ ಕೊಹ್ಲಿ ಯಶಸ್ವಿ ಕ್ಯಾಪ್ಟನ್
- ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೂರನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಮುಹೂರ್ತ ನಿಗದಿಯಾಗಿದೆ. ಡಬ್ಲ್ಯುಟಿಸಿ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ಟಾಪ್ -5 ನಾಯಕರ ಪಟ್ಟಿ ಇಲ್ಲಿ ಕೊಡಲಾಗಿದೆ. ಈ ಬಾರಿ ಆಸ್ಟ್ರೇಲಿಯಾ ತಂಡವನ್ನು ಫೈನಲ್‌ಗೆ ಮುನ್ನಡೆಸಿದ ಪ್ಯಾಟ್ ಕಮಿನ್ಸ್ ಅಗ್ರ ಸ್ಥಾನ ಪಡೆದಿದ್ದಾರೆ.
- ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೂರನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಮುಹೂರ್ತ ನಿಗದಿಯಾಗಿದೆ. ಡಬ್ಲ್ಯುಟಿಸಿ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ಟಾಪ್ -5 ನಾಯಕರ ಪಟ್ಟಿ ಇಲ್ಲಿ ಕೊಡಲಾಗಿದೆ. ಈ ಬಾರಿ ಆಸ್ಟ್ರೇಲಿಯಾ ತಂಡವನ್ನು ಫೈನಲ್‌ಗೆ ಮುನ್ನಡೆಸಿದ ಪ್ಯಾಟ್ ಕಮಿನ್ಸ್ ಅಗ್ರ ಸ್ಥಾನ ಪಡೆದಿದ್ದಾರೆ.
(1 / 7)
ಡಬ್ಲ್ಯುಟಿಸಿಯ ಮೂರನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಫೈನಲ್ ಸ್ಥಾನವನ್ನು ಭದ್ರಪಡಿಸಿವೆ. ಈವರೆಗೆ ನಡೆದ ಮೂರು ಆವೃತ್ತಿಯಲ್ಲಿ ಯಾವ ನಾಯಕ ಯಶಸ್ವಿ ಗಳಿಸಿದ್ದಾರೆ ಎಂಬುದನ್ನು ಮುಂದೆ ನೋಡೋಣ.
(AP)(2 / 7)
ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ನಾಯಕರಾಗಿದ್ದಾರೆ. ವೇಗದ ಬೌಲರ್ ಇದುವರೆಗೆ ಡಬ್ಲ್ಯುಟಿಸಿಯಲ್ಲಿ 33 ಪಂದ್ಯಗಳಿಗೆ ನಾಯಕತ್ವ ವಹಿಸಿದ್ದಾರೆ, ಅದರಲ್ಲಿ ಆಸ್ಟ್ರೇಲಿಯಾ ತಂಡ 20 ಪಂದ್ಯಗಳಲ್ಲಿ ಗೆದ್ದು 7 ರಲ್ಲಿ ಸೋತಿದೆ. ಅದೇ ಸಮಯದಲ್ಲಿ, 6 ಟೆಸ್ಟ್‌ಗಳು ಡ್ರಾದಲ್ಲಿ ಕೊನೆಗೊಂಡಿವೆ.
(AFP)(3 / 7)
ಬೆನ್ ಸ್ಟೋಕ್ಸ್: ಇಂಗ್ಲೆಂಡ್ ತಂಡದ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಡಬ್ಲ್ಯುಟಿಸಿಯಲ್ಲಿ 29 ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸಿದ್ದಾರೆ. ಅವರ ನಾಯಕತ್ವದಲ್ಲಿ ತಂಡವು 17 ಟೆಸ್ಟ್‌ಗಳಲ್ಲಿ ಗೆಲುವು ಕಂಡಿದೆ. 11 ಬಾರಿ ಸೋಲನ್ನು ಎದುರಿಸಿದೆ. ಒಂದು ಪಂದ್ಯ ಡ್ರಾ ಆಗಿತ್ತು.
(AFP)(4 / 7)
ವಿರಾಟ್ ಕೊಹ್ಲಿ: ಈ ಪಟ್ಟಿಯಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಡಬ್ಲ್ಯುಟಿಸಿಯಲ್ಲಿ 22 ಟೆಸ್ಟ್‌ಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದ ಕೊಹ್ಲಿ 14 ಪಂದ್ಯಗಳಲ್ಲಿ ಗೆದ್ದಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಭಾರತವು ಚಾಂಪಿಯನ್‌ಶಿಪ್‌ನಲ್ಲಿ ಏಳು ಪಂದ್ಯಗಳಲ್ಲಿ ಸೋತಿದೆ. ಒಂದರಲ್ಲಿ ಡ್ರಾ ಸಾಧಿಸಿದೆ.
(AP)(5 / 7)
ರೋಹಿತ್ ಶರ್ಮಾ: ಈ ಪಟ್ಟಿಯಲ್ಲಿ ಭಾರತದ ಹಾಲಿ ನಾಯಕ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು ಡಬ್ಲ್ಯುಟಿಸಿಯಲ್ಲಿ 24 ಟೆಸ್ಟ್‌ಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ. 12 ಬಾರಿ ಗೆಲುವಿನ ರುಚಿ ಅನುಭವಿಸಿದರೆ, 9 ಪಂದ್ಯಗಳಲ್ಲಿ ತಂಡ ಸೋತಿದೆ. ಮೂರು ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ.
(AFP)(6 / 7)
ಜೋ ರೂಟ್: ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಅನುಭವಿ ಬ್ಯಾಟರ್ ಡಬ್ಲ್ಯುಟಿಸಿಯಲ್ಲಿ 32 ಟೆಸ್ಟ್‌ಗಳಲ್ಲಿ ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಿದ್ದರು. ಕೇವಲ 12 ಬಾರಿ ತಂಡ ಗೆದ್ದಿದೆ. ರೂಟ್ ನಾಯಕತ್ವದಲ್ಲಿ ತಂಡ 13 ಬಾರಿ ಸೋಲನುಭವಿಸಿದರೆ, 7 ಪಂದ್ಯಗಳು ಡ್ರಾಗೊಂಡವು.
(REUTERS)ಇತರ ಗ್ಯಾಲರಿಗಳು