ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್-5 ನಾಯಕರಿವರು; ಅನಿಲ್ ಕುಂಬ್ಳೆ ದಾಖಲೆ ಮುರಿದ ಪ್ಯಾಟ್ ಕಮಿನ್ಸ್
- ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ -5 ನಾಯಕರ ಪಟ್ಟಿಯಲ್ಲಿ ಮೂವರು ಭಾರತೀಯರಿದ್ದಾರೆ. ಅನಿಲ್ ಕುಂಬ್ಳೆ ದಾಖಲೆಯನ್ನು ಪ್ಯಾಟ್ ಕಮಿನ್ಸ್ ಮುರಿದಿದ್ದಾರೆ.
- ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ -5 ನಾಯಕರ ಪಟ್ಟಿಯಲ್ಲಿ ಮೂವರು ಭಾರತೀಯರಿದ್ದಾರೆ. ಅನಿಲ್ ಕುಂಬ್ಳೆ ದಾಖಲೆಯನ್ನು ಪ್ಯಾಟ್ ಕಮಿನ್ಸ್ ಮುರಿದಿದ್ದಾರೆ.
(1 / 7)
2025ರ ಐಪಿಎಲ್‌ನಲ್ಲಿ ಸನ್ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮಿನ್ಸ್ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 19 ರನ್ಗೆ 3 ವಿಕೆಟ್ ಕಬಳಿಸುವ ಮೂಲಕ ಐಪಿಎಲ್‌ನಲ್ಲಿ ನೂತನ ದಾಖಲೆ ಬರೆದಿದ್ದಾರೆ.
(AP)(2 / 7)
ಮೂರು ವಿಕೆಟ್ ಉರುಳಿಸುವ ಮೂಲಕ ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಾಯಕರ ಪಟ್ಟಿಯಲ್ಲಿ ದಿಗ್ಗಜರನ್ನು ಹಿಂದಿಕ್ಕಿದ್ದಾರೆ. ಅನಿಲ್ ಕುಂಬ್ಳೆ ಅವರನ್ನು ಕಮಿನ್ಸ್ ಹಿಂದಿಕ್ಕಿದ್ದಾರೆ.
(AFP)(3 / 7)
ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಾಯಕರ ಪಟ್ಟಿಯಲ್ಲಿ ಕಮಿನ್ಸ್ 3ನೇ ಸ್ಥಾನಕ್ಕೆ ತಲುಪಿದ್ದಾರೆ. ನಾಯಕನಾಗಿ ಈವರೆಗೆ 27 ಪಂದ್ಯಗಳಲ್ಲಿ 31 ವಿಕೆಟ್ ಪಡೆದಿದ್ದಾರೆ. ಅಗ್ರಸ್ಥಾನ ಯಾರಿಗೆ?
(AFP)(4 / 7)
ಭಾರತದ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರನ್ನು ಕಮಿನ್ಸ್ 4ನೇ ಸ್ಥಾನಕ್ಕೆ ತಳ್ಳಿದ್ದಾರೆ. ಐಪಿಎಲ್‌ನಲ್ಲಿ ಕುಂಬ್ಳೆ ನಾಯಕನಾಗಿ 36 ಪಂದ್ಯಗಳಲ್ಲಿ 30 ವಿಕೆಟ್ ಪಡೆದಿದ್ದರು. 2010 ಮತ್ತು 2011ರಲ್ಲಿ ಆರ್‌ಸಿಬಿ ತಂಡದ ನಾಯಕತ್ವ ವಹಿಸಿದ್ದರು.
(AFP)(5 / 7)
ಸ್ಪಿನ್ನರ್ ಆರ್ ಅಶ್ವಿನ್ 5ನೇ ಸ್ಥಾನದಲ್ಲಿದ್ದಾರೆ. ಅಶ್ವಿನ್ 28 ಪಂದ್ಯಗಳಲ್ಲಿ 25 ವಿಕೆಟ್ ಪಡೆದಿದ್ದು, 2018-19ರ ಐಪಿಎಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗ ಪಂಜಾಬ್ ಕಿಂಗ್ಸ್) ನಾಯಕತ್ವ ವಹಿಸಿದ್ದರು. ಪ್ರಸ್ತುತ ಸಿಎಸ್ಕೆ ತಂಡದ ಭಾಗವಾಗಿದ್ದಾರೆ.
(X)(6 / 7)
ಐಪಿಎಲ್‌ನಲ್ಲಿ ನಾಯಕನಾಗಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಶೇನ್ ವಾರ್ನ್ ಹೆಸರಿನಲ್ಲಿದೆ. ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ವಾರ್ನ್ 55 ಪಂದ್ಯಗಳಲ್ಲಿ 57 ವಿಕೆಟ್ ಪಡೆದಿದ್ದಾರೆ. 2008 ರಿಂದ 2011 ರವರೆಗೆ ರಾಜಸ್ಥಾನ್ ರಾಯಲ್ಸ್ ನಾಯಕತ್ವ ವಹಿಸಿದ್ದರು.
(X)ಇತರ ಗ್ಯಾಲರಿಗಳು