ಕೊನೆಯ 10 ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಸಿಡಿಸಿದ ಟಾಪ್-5 ಭಾರತದ ಆಟಗಾರರು
- Most Runs in ODI: ಕಳೆದ 10 ಏಕದಿನ ಇನ್ನಿಂಗ್ಸ್‌ಗಳಲ್ಲಿ ಭಾರತ ಕ್ರಿಕೆಟ್ ತಂಡದ ಪರ ಅತ್ಯಧಿಕ ಹೆಚ್ಚು ರನ್ ಗಳಿಸಿದ ಟಾಪ್-5 ಬ್ಯಾಟರ್ಗಳ ಪಟ್ಟಿ ಇಲ್ಲಿದೆ.
- Most Runs in ODI: ಕಳೆದ 10 ಏಕದಿನ ಇನ್ನಿಂಗ್ಸ್‌ಗಳಲ್ಲಿ ಭಾರತ ಕ್ರಿಕೆಟ್ ತಂಡದ ಪರ ಅತ್ಯಧಿಕ ಹೆಚ್ಚು ರನ್ ಗಳಿಸಿದ ಟಾಪ್-5 ಬ್ಯಾಟರ್ಗಳ ಪಟ್ಟಿ ಇಲ್ಲಿದೆ.
(1 / 8)
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ನಂತರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದೆ. ಅದಕ್ಕಾಗಿ ಭಾರತ ತಂಡ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. 2023ರಲ್ಲಿ ಐಸಿಸಿ ಏಕದಿನ ವಿಶ್ವಕಪ್ ಸೋತಿದ್ದ ಟೀಮ್ ಇಂಡಿಯಾ, ಇದೀಗ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಪಣತೊಟ್ಟಿದೆ.
(2 / 8)
2023ರ ವಿಶ್ವಕಪ್ ನಂತರ ಹೆಚ್ಚಾಗಿ ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿಯದ ಭಾರತೀಯ ಆಟಗಾರರು ಹಲವು ತಿಂಗಳ ನಂತರ ಮತ್ತೆ ಆ ಫಾರ್ಮೆಟ್ ಕಡೆಗೆ ವಾಲುತ್ತಿದ್ದಾರೆ. ಇದೇ ವೇಳೆ ಕಳೆದ 10 ಏಕದಿನ ಇನ್ನಿಂಗ್ಸ್‌ಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್-5 ಭಾರತದ ಬ್ಯಾಟ್ಸ್ಮನ್ಗಳು ಯಾರು ಎಂಬುದನ್ನು ನೋಡೋಣ.
(3 / 8)
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ವಿಶ್ರಾಂತಿ ಪಡೆಯುತ್ತಾರೆ ಎನ್ನಲಾಗುತ್ತಿರುವ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಅವರು ಕಳೆದ 10 ಇನ್ನಿಂಗ್ಸ್‌ಗಳಲ್ಲಿ 383 ರನ್ ಗಳಿಸಿದ್ದು, 5ನೇ ಸ್ಥಾನದಲ್ಲಿದ್ದಾರೆ.
(4 / 8)
ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಕಳೆದ 10 ಏಕದಿನ ಇನ್ನಿಂಗ್ಸ್‌ಗಳಲ್ಲಿ 392 ರನ್ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
(5 / 8)
ಭಾರತ ತಂಡದ ನಾಯಕ ರೋಹಿತ್ ಶರ್ಮಾ 489 ರನ್‌ಗಳೊಂದಿಗೆ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಶ್ರೇಯಸ್ ಅಯ್ಯರ್ ಅವರಿಗಿಂತ ಕೇವಲ ಒಂದು ರನ್ನಿಂದ ಹಿಂದುಳಿದಿದ್ದಾರೆ.
(6 / 8)
ಭಾರತೀಯ ಏಕದಿನ ತಂಡದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಶ್ರೇಯಸ್ ಅಯ್ಯರ್ ಅವರು 490 ರನ್‌ಗಳೊಂದಿಗೆ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
(7 / 8)
ಕಳೆದ 10 ಏಕದಿನ ಇನ್ನಿಂಗ್ಸ್‌ಗಳಲ್ಲಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರನ್ ಮೆಷಿನ್ ವಿರಾಟ್ ಕೊಹ್ಲಿ 564 ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
ಇತರ ಗ್ಯಾಲರಿಗಳು