ಟೆಸ್ಟ್ ಕ್ರಿಕೆಟ್ನಲ್ಲಿ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ಟಾಪ್-5 ಆಟಗಾರರಿವರು; ಸ್ಥಾನ ಪಡೆದ ಏಕೈಕ ಭಾರತೀಯ ಕೊಹ್ಲಿ
ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ವಿದಾಯ ಹೇಳಿದರೂ ಅವರ ದಾಖಲೆಗಳು ಎಂದಿಗೂ ಅಜರಾಮರ. ಈ ಪೈಕಿ ಅವರು ನಾಯಕನಾಗಿ ಮಾಡಿರುವ ದಾಖಲೆಗಳು ಸೇರಿವೆ. ನಾಯಕನಾಗಿ ಅತ್ಯಧಿಕ ರನ್ ಗಳಿಸಿದ ಟಾಪ್-5 ಆಟಗಾರರು ಯಾರು? ಕೊಹ್ಲಿಗೆ ಎಷ್ಟನೆ ಸ್ಥಾನ? ಇಲ್ಲಿದೆ ವಿವರ.
(1 / 5)
ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ ನಾಯಕನಾಗಿ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರು ಒಟ್ಟು 109 ಟೆಸ್ಟ್ ಪಂದ್ಯಗಳಲ್ಲಿ ನಾಯಕರಾಗಿದ್ದರು. ಈ ಅವಧಿಯಲ್ಲಿ ಅವರು 47.84 ಸರಾಸರಿ ಮತ್ತು 25 ಶತಕಗಳೊಂದಿಗೆ 8659 ರನ್ ಗಳಿಸಿದ್ದಾರೆ.
(2 / 5)
ಆಸ್ಟ್ರೇಲಿಯಾದ ಅಲನ್ ಬಾರ್ಡರ್ ನಾಯಕನಾಗಿ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಷಯದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಬಾರ್ಡರ್ ನಾಯಕನಾಗಿ 93 ಟೆಸ್ಟ್ ಪಂದ್ಯಗಳಲ್ಲಿ 6623 ರನ್ ಗಳಿಸಿದ್ದಾರೆ. ಈ ವೇಳೆ 15 ಶತಕಗಳನ್ನೂ ಗಳಿಸಿದ್ದಾರೆ. ಬ್ಯಾಟಿಂಗ್ ಸರಾಸರಿ 50.95 ಆಗಿತ್ತು.
(3 / 5)
ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. 77 ಟೆಸ್ಟ್ ಪಂದ್ಯಗಳಲ್ಲಿ ನಾಯಕರಾಗಿದ್ದು, ಅವರು 19 ಶತಕಗಳೊಂದಿಗೆ 6542 ರನ್ ಗಳಿಸಿದ್ದಾರೆ. ಅವರ ಸರಾಸರಿ 51.51 ಆಗಿತ್ತು.
(4 / 5)
ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಅವರು 68 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು, ನಾಯಕನಾಗಿ 54.80 ಸರಾಸರಿಯಲ್ಲಿ 5864 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ 20 ಶತಕಗಳನ್ನೂ ಸಿಡಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಆಟಗಾರರಲ್ಲಿ ಕೊಹ್ಲಿ ಅತ್ಯಧಿಕ ಸರಾಸರಿ ಹೊಂದಿದ್ದಾರೆ.
(AP)ಇತರ ಗ್ಯಾಲರಿಗಳು