ಮುಂಬೈ ಪರ ಒಂದು ಸೀಸನ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ 5 ಆಟಗಾರರು; 17 ವರ್ಷಗಳ ದಾಖಲೆ ಮುರಿದ ಸೂರ್ಯಕುಮಾರ್
ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಸೂರ್ಯಕುಮಾರ್ ಯಾದವ್ 2025ರ ಐಪಿಎಲ್ನಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. 15 ವರ್ಷಗಳ ಹಳೆಯ ದಾಖಲೆ ಮುರಿಯುವ ಮೂಲಕ ಗಮನ ಸೆಳೆದಿದ್ದಾರೆ.
(1 / 5)
ಸೂರ್ಯಕುಮಾರ್ ಯಾದವ್ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸಕ್ತ ಋತುವಿನಲ್ಲಿ ಅವರು 14 ಪಂದ್ಯಗಳಲ್ಲಿ 32 ಸಿಕ್ಸರ್ ಬಾರಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಅರ್ಧಶತಕದ ಇನ್ನಿಂಗ್ಸ್ನಲ್ಲಿ ಸೂರ್ಯ ಈ ದಾಖಲೆ ನಿರ್ಮಿಸಿದ್ದಾರೆ. ಜೈಪುರ ಮೈದಾನದಲ್ಲಿ ಅವರು 39 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್ಗಳೊಂದಿಗೆ 57 ರನ್ ಗಳಿಸಿದರು.
(PTI)(2 / 5)
ಸನತ್ ಜಯಸೂರ್ಯ ಅವರ 17 ವರ್ಷಗಳ ಹಿಂದಿನ ದಾಖಲೆಯನ್ನು ಸೂರ್ಯ ಮುರಿದಿದ್ದಾರೆ. ಶ್ರೀಲಂಕಾದ ಮಾಜಿ ಲೆಜೆಂಡ್ ಜಯಸೂರ್ಯ 2008ರ ಐಪಿಎಲ್ ಉದ್ಘಾಟನಾ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ಪರ 31 ಸಿಕ್ಸರ್ಗಳನ್ನು ಬಾರಿಸಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. ಇದೀಗ ಈ ಒಂದು ಸೀಸನ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಎಂಬ ಹೆಗ್ಗಳಿಕೆಗೆ ಸೂರ್ಯ ಪಾತ್ರರಾಗಿದ್ದಾರೆ.
(X)(3 / 5)
ಇಶಾನ್ ಕಿಶನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಐಪಿಎಲ್ 2020ರಲ್ಲಿ ಮುಂಬೈ ಇಂಡಿಯನ್ಸ್ ಪರ 30 ಸಿಕ್ಸರ್ಗಳನ್ನು ಬಾರಿಸಿದ್ದರು.
(BCCI)(4 / 5)
ವೆಸ್ಟ್ ಇಂಡೀಸ್ನ ಮಾಜಿ ಆಲ್ರೌಂಡರ್ ಕೀರನ್ ಪೊಲಾರ್ಡ್ 2013ರ ಐಪಿಎಲ್ ಋತುವಿನಲ್ಲಿ ಮುಂಬೈ ಪರ 29 ಸಿಕ್ಸರ್ಗಳನ್ನು ಬಾರಿಸಿ ದಾಖಲೆ ನಿರ್ಮಿಸಿದ್ದರು.
(X)ಇತರ ಗ್ಯಾಲರಿಗಳು