ಟೆಸ್ಟ್ ಕ್ರಿಕೆಟ್​​ನಲ್ಲಿ ನಾಯಕನಾಗಿ ಅತಿ ಹೆಚ್ಚು ಶತಕ ಬಾರಿಸಿದ ಟಾಪ್​-5 ಆಟಗಾರರು; ಕೊಹ್ಲಿ ಮುಂದಿದೆ ಒಂದೇ ಒಂದು ಹೆಸರು!
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಟೆಸ್ಟ್ ಕ್ರಿಕೆಟ್​​ನಲ್ಲಿ ನಾಯಕನಾಗಿ ಅತಿ ಹೆಚ್ಚು ಶತಕ ಬಾರಿಸಿದ ಟಾಪ್​-5 ಆಟಗಾರರು; ಕೊಹ್ಲಿ ಮುಂದಿದೆ ಒಂದೇ ಒಂದು ಹೆಸರು!

ಟೆಸ್ಟ್ ಕ್ರಿಕೆಟ್​​ನಲ್ಲಿ ನಾಯಕನಾಗಿ ಅತಿ ಹೆಚ್ಚು ಶತಕ ಬಾರಿಸಿದ ಟಾಪ್​-5 ಆಟಗಾರರು; ಕೊಹ್ಲಿ ಮುಂದಿದೆ ಒಂದೇ ಒಂದು ಹೆಸರು!

  • ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​​ಗೆ ವಿದಾಯ ಹೇಳಿದ್ದರೂ ಅವರ ದಾಖಲೆಗಳ ನೆನಪುಗಳು ದಿನಕ್ಕೊಂದು ತೆರೆದುಕೊಳ್ಳುತ್ತಿವೆ. ಈ ಹಿನ್ನೆಲೆ ಟೆಸ್ಟ್​​ನಲ್ಲಿ ನಾಯಕನಾಗಿ ಅತಿ ಹೆಚ್ಚು ಶತಕ ಗಳಿಸಿದ ಟಾಪ್-5 ಬ್ಯಾಟರ್ಸ್ ಪಟ್ಟಿಯನ್ನು ಮುಂದೆ ನೋಡೋಣ.

ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ ಟೆಸ್ಟ್ ಕ್ರಿಕೆಟ್​​​ನಲ್ಲಿ ನಾಯಕನಾಗಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ಅವರು 109 ಟೆಸ್ಟ್ ಪಂದ್ಯಗಳನ್ನು ಮುನ್ನಡೆಸಿದ್ದು, 25 ಸೆಂಚುರಿ ಸಿಡಿಸಿದ್ದಾರೆ. ಈ ವೇಳೆ ಅವರ ಸರಾಸರಿ 47.84 ಆಗಿತ್ತು.
icon

(1 / 5)

ನಾಯಕನಾಗಿ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅವರು 68 ಪಂದ್ಯಗಳನ್ನು ಮುನ್ನಡೆಸಿದ್ದು, 20 ಶತಕ ಗಳಿಸಿದ್ದಾರೆ. ಅವರ ಬ್ಯಾಟಿಂಗ್ ಸರಾಸರಿ 54.80 ಆಗಿತ್ತು. ಕೊಹ್ಲಿ ಪ್ರತಿ ಮೂರು ಅಥವಾ ನಾಲ್ಕು ಪಂದ್ಯಗಳಿಗೊಂದು ಶತಕ ಸಿಡಿಸಿದ ದಾಖಲೆ ಹೊಂದಿದ್ದಾರೆ.
icon

(2 / 5)

ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 77 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದು, 19 ಶತಕ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಇವರು ಮೂರನೇ ಸ್ಥಾನ ಪಡೆದಿದ್ದಾರೆ.
icon

(3 / 5)

ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ವಾ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು 57 ಟೆಸ್ಟ್ ಪಂದ್ಯಗಳನ್ನು ಮುನ್ನಡೆಸಿದ್ದು, 15 ಶತಕ ಸಿಡಿಸಿದ್ದಾರೆ.
icon

(4 / 5)

ನಾಯಕನಾಗಿ ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದವರ ಪಟ್ಟಿಯಲ್ಲಿ ಅಲನ್ ಬಾರ್ಡರ್ 5ನೇ ಸ್ಥಾನದಲ್ಲಿದ್ದಾರೆ. ನಾಯಕನಾಗಿ 93 ಟೆಸ್ಟ್ ಪಂದ್ಯಗಳಲ್ಲಿ 15 ಸೆಂಚುರಿ ಸಿಡಿಸಿದ್ದಾರೆ.
icon

(5 / 5)

ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು