ಐಪಿಎಲ್​ನಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಟಾಪ್-5 ಆಟಗಾರರು; ಚರಿತ್ರೆ ಸೃಷ್ಟಿಸಿದ ಕೊಹ್ಲಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಐಪಿಎಲ್​ನಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಟಾಪ್-5 ಆಟಗಾರರು; ಚರಿತ್ರೆ ಸೃಷ್ಟಿಸಿದ ಕೊಹ್ಲಿ

ಐಪಿಎಲ್​ನಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಟಾಪ್-5 ಆಟಗಾರರು; ಚರಿತ್ರೆ ಸೃಷ್ಟಿಸಿದ ಕೊಹ್ಲಿ

ಐಪಿಎಲ್​ನಲ್ಲಿ 63ನೇ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ಟಾಪ್ 5 ಆಟಗಾರರ ಪಟ್ಟಿ ಇಲ್ಲಿದೆ.

ಆರ್​ಸಿಬಿ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ ಐಪಿಎಲ್​​ನಲ್ಲಿ ಅತಿ ಹೆಚ್ಚು ಅರ್ಧಶತಕ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 263 ಐಪಿಎಲ್​ನಲ್ಲಿ ಪಂದ್ಯಗಳಲ್ಲಿ ಒಟ್ಟು 63 ಅರ್ಧಶತಕ ಬಾರಿಸಿದ್ದಾರೆ. 2025ರ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೊನೆಯ ಲೀಗ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಈ ದಾಖಲೆ ನಿರ್ಮಿಸಿದರು. ಕೊಹ್ಲಿ 30 ಎಸೆತಗಳಲ್ಲಿ ಹತ್ತು ಬೌಂಡರಿಗಳೊಂದಿಗೆ 54 ರನ್ ಗಳಿಸಿದರು. ಐಪಿಎಲ್​ ಇತಿಹಾಸದಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.
icon

(1 / 5)

(AP)

ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 184 ಪಂದ್ಯಗಳಲ್ಲಿ 62 ಅರ್ಧಶತಕ ಗಳಿಸಿದ್ದಾರೆ. ಇವರು ಎರಡನೇ ಸ್ಥಾನ ಪಡೆದಿದ್ದಾರೆ. ವಾರ್ನರ್​ರನ್ನು ಹಿಂದಿಕ್ಕಿದ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
icon

(2 / 5)

ಮಾಜಿ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಧವನ್ 222 ಐಪಿಎಲ್ ಪಂದ್ಯಗಳಲ್ಲಿ 51 ಅರ್ಧಶತಕ ಗಳಿಸಿದ್ದಾರೆ.
icon

(3 / 5)

(X)

ಐಪಿಎಲ್​​ನಲ್ಲಿ ಇದುವರೆಗೆ 270 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ, 48 ಅರ್ಧಶತಕ ಬಾರಿಸಿದ್ದಾರೆ. ಪ್ರಸ್ತುತ ನಾಲ್ಕನೇ ಸ್ಥಾನ ಪಡೆದಿದ್ದಾರೆ.
icon

(4 / 5)

(ANI)

ಕೆಎಲ್ ರಾಹುಲ್ ಜಂಟಿಯಾಗಿ 5ನೇ ಸ್ಥಾನದಲ್ಲಿದ್ದಾರೆ. 145 ಪಂದ್ಯಗಳಲ್ಲಿ 40 ಅರ್ಧಶತಕಗಳನ್ನು ಗಳಿಸಿದ್ದಾರೆ. ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟರ್​ ಎಬಿ ಡಿವಿಲಿಯರ್ಸ್ ಕೂಡ 5ನೇ ಸ್ಥಾನದಲ್ಲೇ ಇದ್ದಾರೆ. 184 ಐಪಿಎಲ್ ಪಂದ್ಯಗಳಲ್ಲಿ 40 ಅರ್ಧಶತಕಗಳನ್ನು ಗಳಿಸಿದ್ದಾರೆ.
icon

(5 / 5)

(PTI)

Prasanna Kumar PN

TwittereMail
ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು