BGT 2024: ಅತಿ ಹೆಚ್ಚು ರನ್ ಗಳಿಸಿದ ಟಾಪ್-5 ಬ್ಯಾಟರ್ಗಳು; ಮೂವರು ಭಾರತೀಯರಿಗೆ ಸ್ಥಾನ
- Most Runs in BGT 2024: ಪ್ರಸ್ತುತ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಫಿ 2024ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು ಯಾರು? ಟಾಪ್ -5 ಬ್ಯಾಟರ್ಗಳ ಪಟ್ಟಿಯಲ್ಲಿ ಮೂವರು ಭಾರತೀಯರು ಇದ್ದಾರೆ.
- Most Runs in BGT 2024: ಪ್ರಸ್ತುತ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಫಿ 2024ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು ಯಾರು? ಟಾಪ್ -5 ಬ್ಯಾಟರ್ಗಳ ಪಟ್ಟಿಯಲ್ಲಿ ಮೂವರು ಭಾರತೀಯರು ಇದ್ದಾರೆ.
(1 / 6)
ಬಾರ್ಡರ್ ಗವಾಸ್ಕರ್ ಟ್ರೋಫಿ 2025 ಸರಣಿಯಲ್ಲಿ ನಡೆದ ಮೂರು ಪಂದ್ಯಗಳ ಪೈಕಿ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳು ತಲಾ ಒಂದು ಪಂದ್ಯ ಗೆದ್ದಿವೆ. ಆದರೆ, ಈ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್-5 ಆಟಗಾರರ ಯಾರು? ಈ ಪಟ್ಟಿ ಇಲ್ಲಿದೆ. (AFP)
(2 / 6)
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಪರ್ತ್‌ನಲ್ಲಿ ಇನ್ನಿಂಗ್ಸ್ ಆರಂಭಿಸುವ ಅವಕಾಶ ಪಡೆದ ಕೆಎಲ್ ರಾಹುಲ್, ಟೀಮ್ ಇಂಡಿಯಾ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈ ಸರಣಿಯಲ್ಲಿ ರಾಹುಲ್ 3 ಪಂದ್ಯಗಳ 6 ಇನ್ನಿಂಗ್ಸ್ಗಳಲ್ಲಿ 47ರ ಬ್ಯಾಟಿಂಗ್ ಸರಾಸರಿಯಲ್ಲಿ 235 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಅಲ್ಲದೆ, ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ್ದಾರೆ.(AP)
(3 / 6)
ಕಳೆದ 2 ವರ್ಷಗಳಿಂದ ಭಾರತ ತಂಡವನ್ನು ಕಾಡುತ್ತಿರುವ ಟ್ರಾವಿಸ್ ಹೆಡ್, ಪ್ರಸಕ್ತ ಬಿಜಿಟಿ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಡಿರುವ 3 ಟೆಸ್ಟ್ ಪಂದ್ಯಗಳಲ್ಲಿ 81.80 ಸರಾಸರಿಯಲ್ಲಿ 409 ರನ್ ಗಳಿಸಿದ್ದಾರೆ. ಇವರನ್ನು ಬಿಟ್ಟರೆ ಯಾವುದೇ ಬ್ಯಾಟ್ಸ್‌ಮನ್ 300 ರನ್ ಗಡಿ ಮುಟ್ಟಲು ಸಾಧ್ಯವಾಗಿಲ್ಲ.(AFP)
(4 / 6)
ಟೀಮ್ ಇಂಡಿಯಾದ ಮತ್ತೊಬ್ಬ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ 193 ರನ್ ಗಳಿಸಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಪರ್ತ್ ಟೆಸ್ಟ್‌ನಲ್ಲಿ ಶತಕ ಗಳಿಸಿದ್ದ ಅವರು, ಕೊನೆಯ 2 ಟೆಸ್ಟ್‌ಗಳಲ್ಲಿ ನೀರಸ ಪ್ರದರ್ಶನ ನೀಡಿದ್ದಾರೆ. 38.60ರ ಬ್ಯಾಟಿಂಗ್ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ.(AP)
(5 / 6)
ಈ ಪಟ್ಟಿಯಲ್ಲಿ ನಿತೀಶ್ ರೆಡ್ಡಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಒಂದೇ ಒಂದು ಅರ್ಧಶತಕ ಸಿಡಿಸಿದಿದ್ದರೂ ನಿತೀಶ್ 44.75ರ ಬ್ಯಾಟಿಂಗ್ ಸರಾಸರಿಯಲ್ಲಿ 179 ರನ್ ಗಳಿಸಿದ್ದಾರೆ.(BCCI-X)
(6 / 6)
ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಅಲೆಕ್ಸ್ ಕ್ಯಾರಿ 162 ರನ್‌ಗಳೊಂದಿಗೆ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಅಲ್ಲದೆ, 2ನೇ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಕೂಡ ಹೌದು. ವಿರಾಟ್ ಕೊಹ್ಲಿ (126) ಮತ್ತು ಸ್ಟೀವ್ ಸ್ಮಿತ್ (124) ಗಿಂತ ಹೆಚ್ಚು ರನ್ ಗಳಿಸಿದ್ದಾರೆ. ಕ್ರಮವಾಗಿ 6 ಮತ್ತು 7ನೇ ಸ್ಥಾನದಲ್ಲಿದ್ದಾರೆ. ಮೆಲ್ಬೋರ್ನ್ ಟೆಸ್ಟ್ ನಂತರ ಅಂಕಿ-ಅಂಶಗಳು ಬದಲಾಗಬಹುದು.(AFP)
ಇತರ ಗ್ಯಾಲರಿಗಳು