ಡಬ್ಲ್ಯುಟಿಸಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್-5 ಆಟಗಾರರು; ಭಾರತದವರೇ ಮೂವರು
- WTC 2025: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್-5 ಆಟಗಾರರ ಪಟ್ಟಿಯಲ್ಲಿ ಮೂವರು ಭಾರತೀಯರಿದ್ದಾರೆ. ಆದರೆ, ಅಗ್ರಸ್ಥಾನ ಪಡೆದಿರುವುದು ಇಂಗ್ಲೆಂಡ್ ಆಟಗಾರ.
- WTC 2025: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್-5 ಆಟಗಾರರ ಪಟ್ಟಿಯಲ್ಲಿ ಮೂವರು ಭಾರತೀಯರಿದ್ದಾರೆ. ಆದರೆ, ಅಗ್ರಸ್ಥಾನ ಪಡೆದಿರುವುದು ಇಂಗ್ಲೆಂಡ್ ಆಟಗಾರ.
(1 / 5)
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಹೊಂದಿದ್ದಾರೆ. ಪ್ರಬಲ ಆಲ್‌ರೌಂಡರ್ ಸ್ಟೋಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 53 ಟೆಸ್ಟ್ ಪಂದ್ಯಗಳಲ್ಲಿ 83 ಸಿಕ್ಸರ್ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ.
(AP)(2 / 5)
ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಎರಡನೇ ಸ್ಥಾನದಲ್ಲಿದ್ದಾರೆ. ಪಂತ್ ಇದುವರೆಗೆ ಡಬ್ಲ್ಯುಟಿಸಿಯಲ್ಲಿ 34 ಪಂದ್ಯಗಳಲ್ಲಿ 56 ಸಿಕ್ಸರ್ ಬಾರಿಸಿದ್ದಾರೆ.
(AFP)(3 / 5)
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೂಡ ಡಬ್ಲ್ಯುಟಿಸಿಯಲ್ಲಿ 56 ಸಿಕ್ಸರ್ ಬಾರಿಸಿದ್ದಾರೆ. ರೋಹಿತ್ 40 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ.
(AFP)(4 / 5)
ಭಾರತದ ಯುವ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ 4ನೇ ಸ್ಥಾನದಲ್ಲಿದ್ದಾರೆ. ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 19 ಪಂದ್ಯಗಳಲ್ಲಿ ಆಡಿದ 39 ಸಿಕ್ಸರ್ ಬಾರಿಸಿದ್ದಾರೆ.
(AFP)ಇತರ ಗ್ಯಾಲರಿಗಳು