ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಯಶಸ್ವಿಯಾಗಿ ಚೇಸ್ ಮಾಡಿದ ಟಾಪ್ 5 ತಂಡಗಳು; ಆರ್‌ಸಿಬಿ 3ನೇ ಸ್ಥಾನಕ್ಕೆ ಲಗ್ಗೆ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಯಶಸ್ವಿಯಾಗಿ ಚೇಸ್ ಮಾಡಿದ ಟಾಪ್ 5 ತಂಡಗಳು; ಆರ್‌ಸಿಬಿ 3ನೇ ಸ್ಥಾನಕ್ಕೆ ಲಗ್ಗೆ

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಯಶಸ್ವಿಯಾಗಿ ಚೇಸ್ ಮಾಡಿದ ಟಾಪ್ 5 ತಂಡಗಳು; ಆರ್‌ಸಿಬಿ 3ನೇ ಸ್ಥಾನಕ್ಕೆ ಲಗ್ಗೆ

ಐಪಿಎಲ್ 2025ರ ಕೊನೆಯ ಲೀಗ್ ಪಂದ್ಯದಲ್ಲಿ ಆರ್‌ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. 227 ರನ್‌ಗಳ ಬೃಹತ್‌ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟುವ ಮೂಲಕ, ಐಪಿಎಲ್ ಇತಿಹಾಸದಲ್ಲಿ ಮೂರನೇ ಅತಿ ಹೆಚ್ಚು ಯಶಸ್ವಿ ರನ್ ಚೇಸ್ ಮಾಡಿದ ದಾಖಲೆ ನಿರ್ಮಿಸಿದರು. ಐಪಿಎಲ್‌ನಲ್ಲಿ 5 ಅತಿದೊಡ್ಡ ಯಶಸ್ವಿ ರನ್ ಚೇಸಿಂಗ್‌ ಬಗ್ಗೆ ನೋಡೋಣ.

ಪಂಜಾಬ್ ಕಿಂಗ್ಸ್ - 262 ರನ್: ಐಪಿಎಲ್‌ನಲ್ಲಿ ಅತ್ಯಧಿಕ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟಿದ ದಾಖಲೆಯನ್ನು ಪಂಜಾಬ್ ಕಿಂಗ್ಸ್ ಹೊಂದಿದೆ. 2024ರಲ್ಲಿ ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ನೀಡಿದ್ದ 262 ರನ್‌ಗಳ ಗುರಿಯನ್ನು ಕೇವಲ 2 ವಿಕೆಟ್ ಕಳೆದುಕೊಂಡು ಪಂಜಾಬ್‌ ಬೆನ್ನುಹತ್ತಿತ್ತು. ಆ ಪಂದ್ಯದಲ್ಲಿ, ಎರಡೂ ತಂಡಗಳಿಂದ ದಾಖಲೆಯ 42 ಸಿಕ್ಸರ್‌ ಸಿಡಿಸಿದ್ದವು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 6 ವಿಕೆಟ್ ನಷ್ಟಕ್ಕೆ 261 ರನ್ ಗಳಿಸಿತ್ತು. ಆ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತ್ತು. ಆ ಪಂದ್ಯದಲ್ಲಿ ಪಂಜಾಬ್‌ ತಂಡದ ಜಾನಿ ಬೈರ್‌ಸ್ಟೋ 48 ಎಸೆತಗಳಲ್ಲಿ 108 ರನ್ ಗಳಿಸಿದ್ದರು.
icon

(1 / 5)

ಸನ್‌ರೈಸರ್ಸ್ ಹೈದರಾಬಾದ್ - 247 ರನ್: ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿದೊಡ್ಡ ಯಶಸ್ವಿ ರನ್ ಚೇಸ್ ದಾಖಲೆ ಸನ್‌ರೈಸರ್ಸ್ ಹೈದರಾಬಾದ್ ಹೆಸರಿನಲ್ಲಿದೆ. ಈ ಋತುವಿನಲ್ಲಿ, ಅಂದರೆ ಐಪಿಎಲ್ 2025 ರಲ್ಲಿ, ಪಂಜಾಬ್ ಕಿಂಗ್ಸ್ ವಿರುದ್ಧ ತಂಡವು ಬೃಹತ್‌ ಗುರಿ ಬೆನ್ನಟ್ಟಿತು. 247 ರನ್ ಗಳಿಸುವ ಮೂಲಕ ಗೆದ್ದಿತು. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 245 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಎಸ್ಆರ್‌ಎಚ್ ಕೇವಲ 2 ವಿಕೆಟ್ ಕಳೆದುಕೊಂಡು 9 ಎಸೆತಗಳು ಬಾಕಿ ಇರುವಾಗಲೇ ಜಯ ಸಾಧಿಸಿತು. ಎಸ್ಆರ್‌ಎಚ್‌ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 55 ಎಸೆತಗಳಲ್ಲಿ 141 ರನ್ ಗಳಿಸಿದರು.
icon

(2 / 5)

(REUTERS)

ಆರ್‌ಸಿಬಿ- 230 ರನ್: ಐಪಿಎಲ್ ಇತಿಹಾಸದಲ್ಲಿ ಮೂರನೇ ಅತಿ ಹೆಚ್ಚು ಯಶಸ್ವಿ ರನ್ ಚೇಸ್ ಆರ್‌ಸಿಬಿ ಹೆಸರಿನಲ್ಲಿದೆ. ಐಪಿಎಲ್ 2025ರ ಕೊನೆಯ ಲೀಗ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಬೆಂಗಳೂರು ತಂಡ ಈ ಸಾಧನೆ ಮಾಡಿದ್ದಾರೆ. ಎಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಲ್ ಎಸ್ ಜಿ 3 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಆರ್‌ಸಿಬಿ ತಂಡ 4 ವಿಕೆಟ್ ನಷ್ಟಕ್ಕೆ 230 ರನ್ ಕಲೆಹಾಕಿತು. ಈ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸಿದ ಜಿತೇಶ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರು ಕೇವಲ 33 ಎಸೆತಗಳಲ್ಲಿ 85 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು.
icon

(3 / 5)

(PTI)

ರಾಜಸ್ಥಾನ್ ರಾಯಲ್ಸ್ - 226 ರನ್: ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಅತಿ ಹೆಚ್ಚು ಯಶಸ್ವಿ ರನ್ ಚೇಸ್ ಮಾಡಿದ ದಾಖಲೆಯನ್ನು ಆರ್‌ಆರ್‌ ಹೊಂದಿದೆ. 2020ರಲ್ಲಿ ಶಾರ್ಜಾದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗ ಪಂಜಾಬ್ ಕಿಂಗ್ಸ್) ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 2 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ರಾಜಸ್ಥಾನ್ 6 ವಿಕೆಟ್ ನಷ್ಟಕ್ಕೆ 226 ರನ್ ಸಿಡಿಸಿತು. ಇದು ಆ ಸಮಯದಲ್ಲಿ ಐಪಿಎಲ್ ಇತಿಹಾಸದಲ್ಲಿ ಅತಿದೊಡ್ಡ ಯಶಸ್ವಿ ರನ್ ಚೇಸ್ ಆಗಿತ್ತು. ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ರಾಜಸ್ಥಾನ್ ಪರ 85 ರನ್ ಗಳಿಸಿದರು.
icon

(4 / 5)

(AFP)

ರಾಜಸ್ಥಾನ್ ರಾಯಲ್ಸ್ - 224 ರನ್: ಐಪಿಎಲ್ ಇತಿಹಾಸದಲ್ಲಿ 5 ನೇ ಅತಿದೊಡ್ಡ ಯಶಸ್ವಿ ರನ್ ಚೇಸ್ ದಾಖಲೆಯನ್ನು ಕೂಡಾ ಆರ್‌ಆರ್‌ ಹೊಂದಿದೆ. 2024ರಲ್ಲಿ ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 224 ರನ್‌ಗಳ ಗುರಿಯನ್ನು ಕೊನೆಯ ಎಸೆತದಲ್ಲಿ 2 ವಿಕೆಟ್‌ಗಳು ಉಳಿದಿರುವಾಗ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 6 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿತು. ಅಂತಿಮವಾಗಿ ರಾಜಸ್ಥಾನ್ 20ನೇ ಓವರ್‌ನ ಕೊನೆಯ ಎಸೆತದಲ್ಲಿ 8 ವಿಕೆಟ್ ನಷ್ಟಕ್ಕೆ 224 ರನ್ ಕಲೆಹಾಕಿತು. ರಾಜಸ್ಥಾನ್ ಪರ ಜೋಸ್ ಬಟ್ಲರ್ 60 ಎಸೆತಗಳಲ್ಲಿ 107 ರನ್ ಸಿಡಿಸಿದರು.
icon

(5 / 5)

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.

ಇತರ ಗ್ಯಾಲರಿಗಳು