Fastest Fifty: ಟೆಸ್ಟ್ ಕ್ರಿಕೆಟ್​​ನಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಯಾರ ಹೆಸರಲ್ಲಿದೆ? ಇಲ್ಲಿದೆ ಆಟಗಾರರ ಪಟ್ಟಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Fastest Fifty: ಟೆಸ್ಟ್ ಕ್ರಿಕೆಟ್​​ನಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಯಾರ ಹೆಸರಲ್ಲಿದೆ? ಇಲ್ಲಿದೆ ಆಟಗಾರರ ಪಟ್ಟಿ

Fastest Fifty: ಟೆಸ್ಟ್ ಕ್ರಿಕೆಟ್​​ನಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಯಾರ ಹೆಸರಲ್ಲಿದೆ? ಇಲ್ಲಿದೆ ಆಟಗಾರರ ಪಟ್ಟಿ

  • Fastest Fifty in Tests Cricket: ಐದು ದಿನಗಳ ಕಾಲ ನಡೆಯುವ ಟೆಸ್ಟ್ ಪಂದ್ಯದಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ಆಟಗಾರರು ಯಾರು? ಈ ಪಟ್ಟಿಯಲ್ಲಿ ಭಾರತದ ಆಟಗಾರರು ಯಾರಿದ್ದಾರೆ? ಇಲ್ಲಿದೆ ವಿವರ.

ಟೆಸ್ಟ್ ಕ್ರಿಕೆಟ್​​ ಆಡಲು ತುಂಬಾ ತಾಳ್ಮೆ ಬೇಕು. ಟಿ20ಐ ಕ್ರಿಕೆಟ್​ನಂತೆ ಹೊಡಿಬಡಿ ಆಟಕ್ಕಿಲ್ಲ ಜಾಗವಿಲ್ಲ. ಐದು ದಿನಗಳ ಕಾಲ ನಡೆಯುವ ಟೆಸ್ಟ್​ ಪಂದ್ಯದಲ್ಲಿ ರಕ್ಷಣಾತ್ಮಕ ಆಟಕ್ಕೆ ಹೆಚ್ಚು ನೀಡಬೇಕು. ಅಂತಹ ಆಟದಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ಆಟಗಾರರ ಪಟ್ಟಿ ಹೇಗಿದೆ ಎಂಬುದನ್ನು ಈ ಮುಂದೆ ನೋಡೋಣ.
icon

(1 / 10)

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಮಿಸ್ಬಾ ಉಲ್ ಹಕ್ ಹೆಸರು ಮೊದಲ ಸ್ಥಾನದಲ್ಲಿದೆ. 2014ರಲ್ಲಿ ಅಬುಧಾಬಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಮಿಸ್ಬಾ 21 ಎಸೆತಗಳಲ್ಲಿ ಅರ್ಧಶತಕ ಗಳಿಸಿ ವಿಶ್ವದಾಖಲೆ ನಿರ್ಮಿಸಿದ್ದರು.
icon

(2 / 10)

ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಅವರು 2017ರಲ್ಲಿ ಪಾಕಿಸ್ತಾನ ವಿರುದ್ಧ 23 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು.
icon

(3 / 10)

ದಕ್ಷಿಣ ಆಫ್ರಿಕಾದ ಮಾಜಿ ಆಲ್‌ರೌಂಡರ್ ಜಾಕ್ ಕಾಲಿಸ್ ಮತ್ತು ಇಂಗ್ಲೆಂಡ್‌ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಜಂಟಿಯಾಗಿ ಮೂರನೇ ಸ್ಥಾನದಲ್ಲಿದ್ದಾರೆ. ಇಬ್ಬರೂ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.
icon

(4 / 10)

2014ರಲ್ಲಿ ನ್ಯೂಜಿಲೆಂಡ್ ವಿರುದ್ಧ 25 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದ ವೆಸ್ಟ್ ಇಂಡೀಸ್​​ನ ಮಾಜಿ ಆಟಗಾರ ಶೇನ್ ಶಿಲ್ಲಿಂಗ್ ಫೋರ್ಡ್ ನಾಲ್ಕನೇ ಸ್ಥಾನದಲ್ಲಿದ್ದಾರೆ.
icon

(5 / 10)

ಪಾಕಿಸ್ತಾನದ ಮಾಜಿ ಆಲ್​ರೌಂಡರ್ ಶಾಹಿದ್ ಅಫ್ರಿದಿ, ಬಾಂಗ್ಲಾದೇಶದ ಮೊಹಮ್ಮದ್ ಅಶ್ರಫುಲ್, ಸೌತ್ ಆಫ್ರಿಕಾದ ಡೇಲ್ ಸ್ಟೇನ್ ಜಂಟಿಯಾಗಿ 5ನೇ ಸ್ಥಾನದಲ್ಲಿದ್ದಾರೆ. ಮೂವರು 26 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.
icon

(6 / 10)

ಆರನೇ ಸ್ಥಾನದಲ್ಲಿ ಪಾಕಿಸ್ತಾನದ ಮಾಜಿ ಬ್ಯಾಟ್ಸ್‌ಮನ್ ಯೂಸುಫ್ ಯೋಹಾನಾ ಇದ್ದಾರೆ. ಅವರು 2003ರಲ್ಲಿ ಟೆಸ್ಟ್‌ನಲ್ಲಿ 27 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದರು.
icon

(7 / 10)

ವೆಸ್ಟ್ ಇಂಡೀಸ್‌ನ ಅರ್ನೆಸ್ಟ್ ಆಲ್ಬರ್ಟ್ ವಿವಿಯನ್ ವಿಲಿಯಮ್ಸ್, ಕ್ರಿಸ್ ಗೇಲ್, ಭಾರತದ ರಿಷಭ್ ಪಂತ್, ನ್ಯೂಜಿಲೆಂಡ್‌ನ ಕಾಲಿನ್ ಗ್ರಾಂಡ್​ಹೋಮ್, ಇಂಗ್ಲೆಂಡ್‌ನ ಇಯಾನ್ ಬೋಥಮ್ ಜಂಟಿಯಾಗಿ 7ನೇ ಸ್ಥಾನದಲ್ಲಿದ್ದಾರೆ. ಇವರು 28 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.
icon

(8 / 10)

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರೂಸ್ ಯಾರ್ಡ್ಲಿ, ಭಾರತದ ರಿಷಭ್ ಪಂತ್, ನ್ಯೂಜಿಲೆಂಡ್‌ನ ಟಿಮ್ ಸೌಥಿ ಜಂಟಿಯಾಗಿ 8ನೇ ಸ್ಥಾನದಲ್ಲಿದ್ದಾರೆ. ಇಬ್ಬರೂ 29 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು.
icon

(9 / 10)

ಕ್ಷಣ ಕ್ಷಣದ ಕ್ರಿಕೆಟ್ ಸುದ್ದಿಗಳ ಅಪ್ಡೇಟ್ಸ್​ಗಾಗಿ ಹಿಂದೂಸ್ತಾನ್ ಟೈಮ್ಸ್ ಕನ್ನಡ ಓದಿ.
icon

(10 / 10)

ಇತರ ಗ್ಯಾಲರಿಗಳು