ಚೊಚ್ಚಲ ಐಪಿಎಲ್ ಪಂದ್ಯವಾಡಿ ವೈಭವ್ ಸೂರ್ಯವಂಶಿ ದಾಖಲೆ; ಮೊದಲ ಎಸೆತವನ್ನೇ ಸಿಕ್ಸರ್‌ಗಟ್ಟಿದ 14 ವರ್ಷದ ಪೋರ
- ರಾಜಸ್ಥಾನ ರಾಯಲ್ಸ್ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಐಪಿಎಲ್ ಪದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆ ಮೂಲಕ ಈ ಹಿಂದೆ 16 ವರ್ಷ 157 ದಿನಗಳ ವಯಸ್ಸಿನಲ್ಲಿ ಪದಾರ್ಪಣೆ ಮಾಡಿದ್ದ ಪ್ರಯಾಸ್ ರಾಯ್ ಬರ್ಮನ್ ಅವರ ದಾಖಲೆ ಹಿಂದಿಕ್ಕಿದ್ದಾರೆ.
- ರಾಜಸ್ಥಾನ ರಾಯಲ್ಸ್ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಐಪಿಎಲ್ ಪದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆ ಮೂಲಕ ಈ ಹಿಂದೆ 16 ವರ್ಷ 157 ದಿನಗಳ ವಯಸ್ಸಿನಲ್ಲಿ ಪದಾರ್ಪಣೆ ಮಾಡಿದ್ದ ಪ್ರಯಾಸ್ ರಾಯ್ ಬರ್ಮನ್ ಅವರ ದಾಖಲೆ ಹಿಂದಿಕ್ಕಿದ್ದಾರೆ.
(2 / 8)
ವೈಭವ್ ಸೂರ್ಯವಂಶಿ: ವೈಭವ್ ಸೂರ್ಯವಂಶಿ 14 ವರ್ಷ 23 ದಿನಗಳಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದರು. ಇದರೊಂದಿಗೆ ಆಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ವೈಭವ್ ಪಾತ್ರರಾಗಿದ್ದಾರೆ. ಅವರು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಸ್ಥಾನ ಪಡೆದರು. ಐಪಿಎಲ್ ಹರಾಜಿನಲ್ಲಿ ರಾಯಲ್ಸ್ ತಂಡ ಸೂರ್ಯವಂಶಿ ಅವರನ್ನು 1 ಕೋಟಿ 10 ಲಕ್ಷ ರೂ.ಗೆ ಖರೀದಿಸಿತ್ತು.
(3 / 8)
ಪ್ರಯಾಸ್ ರೇ ಬರ್ಮನ್: ವೈಭವ್‌ಗಿಂತ ಮೊದಲು, ಐಪಿಎಲ್‌ನಲ್ಲಿ ಅತ್ಯಂತ ಕಿರಿಯ ಆಟಗಾರನಾಗಿ ಪದಾರ್ಪಣೆ ಮಾಡಿದ ದಾಖಲೆ ಅಂಕುರ್ ರೇ ಬರ್ಮನ್ ಹೆಸರಿನಲ್ಲಿತ್ತು, ಅವರು 16 ವರ್ಷ ಮತ್ತು 157 ದಿನಗಳಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಂದು ಪಂದ್ಯದಲ್ಲಿ ಆಡಿ 19 ರನ್ ಗಳಿಸಿದರು.
(4 / 8)
ಮುಜೀಬ್ ಉರ್ ರೆಹಮಾನ್: ಅಫ್ಘಾನಿಸ್ತಾನದ ಮುಜೀಬ್ ಉರ್ ರೆಹಮಾನ್ 17 ವರ್ಷ 11 ದಿನಗಳಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದರು. ಅವರು 2018ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್) ಪರ ಆಡುವ ಮೂಲಕ ತಮ್ಮ ಚೊಚ್ಚಲ ಪಂದ್ಯವನ್ನು ಆಡಿದರು.
(5 / 8)
ರಿಯಾನ್ ಪರಾಗ್: ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರರ ಪಟ್ಟಿಯಲ್ಲಿ ರಿಯಾನ್ ಪರಾಗ್ ಸೇರಿದ್ದಾರೆ. ಅಲ್ಲದೆ, ತಮ್ಮ ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಗಳಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪರಾಗ್ ಪಾತ್ರರಾದರು. 2019ರ ಐಪಿಎಲ್ ವೇಳೆ ಪರಾಗ್ ಅವರನ್ನು ರಾಜಸ್ಥಾನ್ 20 ಲಕ್ಷ ರೂ.ಗೆ ಖರೀದಿಸಿತು. ಪರಾಗ್ 17 ವರ್ಷ 152 ದಿನಗಳಲ್ಲಿ ತಮ್ಮ ಮೊದಲ ಐಪಿಎಲ್ ಪಂದ್ಯ ಆಡಿದರು.
(PTI)(6 / 8)
ಪ್ರದೀಪ್ ಸಾಂಗ್ವಾನ್: ಪ್ರದೀಪ್ ಸಂಗ್ವಾನ್ 17 ವರ್ಷ 179 ದಿನಗಳಲ್ಲಿ ಮೊದಲ ಐಪಿಎಲ್ ಪಂದ್ಯವನ್ನು ಆಡಿದರು. ಐಪಿಎಲ್‌ನ ಚೊಚ್ಚಲ ಆವೃತ್ತಿಯಲ್ಲೇ ಇವರು ದಾಖಲೆ ಮಾಡಿದ್ದರು.
(7 / 8)
ವೈಭವ್ ಸೂರ್ಯವಂಶಿ ತಮ್ಮ ಮೊದಲ ಐಪಿಎಲ್ ಪಂದ್ಯದಲ್ಲೇ ಎದುರಿಸಿದ ಮೊದಲ ಎಸೆತವನ್ನು ಸಿಕ್ಸರ್‌ಗಟ್ಟಿ ದಾಖಲೆ ನಿರ್ಮಿಸಿದರು. ಈ ಸಾಧನೆ ಮಾಡಿದ 10ನೇ ಆಟಗಾರ ಎನಿಸಿಕೊಂಡರು.
(REUTERS)ಇತರ ಗ್ಯಾಲರಿಗಳು