ಟಿ20 ಕ್ರಿಕೆಟ್ನಲ್ಲಿ ಮತ್ತೊಂದು ಚರಿತ್ರೆ ಸೃಷ್ಟಿಸಿದ ವಿರಾಟ್ ಕೊಹ್ಲಿ; ಡೇವಿಡ್ ವಾರ್ನರ್ ವಿಶ್ವದಾಖಲೆ ಪುಡಿಪುಡಿ
- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ ಚರಿತ್ರೆ ಸೃಷ್ಟಿಸಿದ್ದಾರೆ. ಡೇವಿಡ್ ವಾರ್ನರ್ ದಾಖಲೆ ಮುರಿದು ಈ ಸಾಧನೆ ಮಾಡಿದ್ದಾರೆ.
- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ ಚರಿತ್ರೆ ಸೃಷ್ಟಿಸಿದ್ದಾರೆ. ಡೇವಿಡ್ ವಾರ್ನರ್ ದಾಖಲೆ ಮುರಿದು ಈ ಸಾಧನೆ ಮಾಡಿದ್ದಾರೆ.
(1 / 9)
2025ರ ಐಪಿಎಲ್ನಲ್ಲಿ 4ನೇ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ ಅವರು ಐತಿಹಾಸಿಕ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ 50ರ ಗಡಿ ದಾಟಿದ ಬೆನ್ನಲ್ಲೇ ಚರಿತ್ರೆ ಸೃಷ್ಟಿಸಿದ್ದಾರೆ.
(PTI)(2 / 9)
ಚಂಢೀಗಡದ ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಕೊಹ್ಲಿ ಅಜೇಯ 73 ರನ್ ಬಾರಿಸಿದರು. ಅವರ ಈ ಇನ್ನಿಂಗ್ಸ್ನಲ್ಲಿ 7 ಬೌಂಡರಿ, 1 ಸಿಕ್ಸರ್ ಇತ್ತು.
(AFP)(3 / 9)
ಆರ್ಸಿಬಿಗೆ ಗೆಲುವು ತಂದುಕೊಟ್ಟ ಕೊಹ್ಲಿ, ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು 50 ಪ್ಲಸ್ ಸ್ಕೋರ್ ಮಾಡಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದೀರ್ಘಕಾಲದಿಂದ ಡೇವಿಡ್ ವಾರ್ನರ್ ಹೆಸರಿನಲ್ಲಿದ್ದ ದಾಖಲೆ ಮುರಿದು ಈ ಸಾಧನೆ ಮಾಡಿದ್ದಾರೆ.
(PTI)(4 / 9)
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವರ್ಣರಂಜಿತ ಲೀಗ್‌ನಲ್ಲಿ ಕಿಂಗ್ ಕೊಹ್ಲಿ ಅತಿ ಹೆಚ್ಚು 50 ಪ್ಲಸ್ ಸ್ಕೋರ್ (67 ಫಿಫ್ಟಿ ಪ್ಲಸ್) ಮಾಡಿದ ಬ್ಯಾಟ್ಸ್‌ಮನ್ ಆಗಿದ್ದಾರೆ. ಅವರು 59 ಅರ್ಧಶತಕ ಮತ್ತು 8 ಶತಕ ಬಾರಿಸಿದ್ದಾರೆ.
(PTI)(5 / 9)
ಇದಕ್ಕೂ ಮೊದಲು ಡೇವಿಡ್ ವಾರ್ನರ್ 66 ಬಾರಿ (4 ಶತಕ ಸೇರಿ) ಈ ಸಾಧನೆ ಮಾಡಿದ್ದರು. ಕೊಹ್ಲಿ, ವಾರ್ನರ್ ನಂತರ ಶಿಖರ್ ಧವನ್ 53 ಸಲ, ರೋಹಿತ್ ಶರ್ಮಾ 45 ಬಾರಿ, ಕೆಎಲ್ ರಾಹುಲ್, 43 ಮತ್ತು ಎಬಿ ಡಿವಿಲಿಯರ್ಸ್ 43 ಬಾರಿ 50 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ.
(PTI)(6 / 9)
ಕೊಹ್ಲಿ ಒಟ್ಟಾರೆ ಟಿ20 ಕ್ರಿಕೆಟ್ನಲ್ಲಿ 110 ಬಾರಿ 50 ಅಥವಾ ಅದಕ್ಕಿಂತ ಹೆಚ್ಚಿನ ರನ್ ಗಳಿಸಿದ್ದಾರೆ. ಇದರೊಂದಿಗೆ ಇಷ್ಟೇ 50 ಪ್ಲಸ್ ಸ್ಕೋರ್ ಮಾಡಿರುವ ಕ್ರಿಸ್ ಗೇಲ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಇಬ್ಬರು ಜಂಟಿ 2ನೇ ಸ್ಥಾನದಲ್ಲಿದ್ದಾರೆ. ಅಗ್ರಸ್ಥಾನದಲ್ಲಿ ಡೇವಿಡ್ ವಾರ್ನರ್ (116 ಫಿಫ್ಟಿ ಪ್ಲಸ್ ಸ್ಕೋರ್) ಸ್ಥಾನ ಪಡೆದಿದ್ದಾರೆ.
(PTI)(7 / 9)
ಕೊಹ್ಲಿ 407 ಟಿ20ಗಳ 390 ಇನ್ನಿಂಗ್ಸ್ಗಳಲ್ಲಿ 101 ಅರ್ಧಶತಕ, 9 ಶತಕ ಸಿಡಿಸಿದ್ದರೆ, ಗೇಲ್ 463 ಪಂದ್ಯಗಳ 455 ಇನ್ನಿಂಗ್ಸ್ಗಳಲ್ಲಿ 88 ಅರ್ಧಶತಕ, 22 ಶತಕ ಬಾರಿಸಿದ್ದಾರೆ. ಇನ್ನೊಂದು ಅರ್ಧಶತಕ ಬಾರಿಸಿದರೆ ಕೊಹ್ಲಿ, ಗೇಲ್ ಅವರನ್ನು ಹಿಂದಿಕ್ಕಲಿದ್ದಾರೆ.
(PTI)(8 / 9)
ಐಪಿಎಲ್ನ 37ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಆರ್ಸಿಬಿ 18.5 ಓವರ್ಗಳಲ್ಲೇ ಜಯದ ನಗೆ ಬೀರಿತು. 3 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು.
(PTI)ಇತರ ಗ್ಯಾಲರಿಗಳು