ಫೇವರೆಟ್ ಚಿನ್ನಸ್ವಾಮಿ ಮೈದಾನದಲ್ಲಿ ಚೀಕು ದಾಖಲೆ; ದಿಗ್ಗಜ ಸಾಧಕರ ರೆಕಾರ್ಡ್ ಪಟ್ಟಿ ಸೇರಿದ ವಿರಾಟ್ ಕೊಹ್ಲಿ
- Virat Kohli Record: ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಬಾರಿಸಿದರು. ಮೂರನೇ ದಿನದಾಟದ ಕೊನೆಯ ಎಸೆತದಲ್ಲಿ ಔಟಾದ ವಿರಾಟ್, ಅದಕ್ಕೂ ಮುನ್ನ ವಿಶೇಷ ದಾಖಲೆ ಬರೆದರು.
- Virat Kohli Record: ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಬಾರಿಸಿದರು. ಮೂರನೇ ದಿನದಾಟದ ಕೊನೆಯ ಎಸೆತದಲ್ಲಿ ಔಟಾದ ವಿರಾಟ್, ಅದಕ್ಕೂ ಮುನ್ನ ವಿಶೇಷ ದಾಖಲೆ ಬರೆದರು.
(1 / 5)
ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 31ನೇ ಟೆಸ್ಟ್ ಅರ್ಧಶತಕ ಬಾರಿಸಿದರು. ಇದರೊಂದಿಗೆ ಅವರು ಪಂದ್ಯದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದರು. ಆ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಈ ವಿಶೇಷ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.(AFP)
(2 / 5)
ಬೆಂಗಳೂರಿನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 9000 ರನ್ ಗಡಿ ದಾಟಿದ್ದಾರೆ. ಈ ಮೈಲಿಗಲ್ಲನ್ನು ತಲುಪಲು ಕೊಹ್ಲಿಗೆ ಒಟ್ಟು 53 ರನ್‌ಗಳ ಅಗತ್ಯವಿತ್ತು. ಅರ್ಧಶತಕದ ಗಡಿ ದಾಟುತ್ತಿದ್ದಂತೆಯೇ ವಿರಾಟ್ ಕೊಹ್ಲಿ 9000 ರನ್ ಪೂರೈಸಿದ ನಾಲ್ಕನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು.(AFP)
(3 / 5)
ವಿರಾಟ್ ಕೊಹ್ಲಿಗಿಂತ ಮೊದಲು ಸಚಿನ್ ತೆಂಡೂಲ್ಕರ್ (15921), ರಾಹುಲ್ ದ್ರಾವಿಡ್ (13265) ಮತ್ತು ಸುನಿಲ್ ಗವಾಸ್ಕರ್ (10122) ಮಾತ್ರ ಟೆಸ್ಟ್ ಕ್ರಿಕೆಟ್ನಲ್ಲಿ 9000 ರನ್ ಗಡಿ ದಾಟಿದ್ದಾರೆ. ಭಾರತೀಯರಲ್ಲಿ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.(AP)
(4 / 5)
ಚಿನ್ನಸ್ವಾಮಿ ಮೈದಾನದಲ್ಲಿ ಕೊಹ್ಲಿ 70 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅವರು ತಮ್ಮ ಅರ್ಧಶತಕವನ್ನು ತಲುಪಲು 5 ಬೌಂಡರಿಗಳು ಮತ್ತು 1 ಸಿಕ್ಸರ್ ಬಾರಿಸಿದರು. ವಿರಾಟ್ ಕೊಹ್ಲಿ 116 ಟೆಸ್ಟ್ ಪಂದ್ಯಗಳ 197 ಇನ್ನಿಂಗ್ಸ್‌ಗಳಲ್ಲಿ 9000 ರನ್‌ಗಳ ಮೈಲಿಗಲ್ಲನ್ನು ತಲುಪಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ 9000 ರನ್ ಪೂರೈಸಿದ ವಿಶ್ವದ 18ನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.(AP)
ಇತರ ಗ್ಯಾಲರಿಗಳು