ಶಿಖರ್ ಧವನ್ ದಾಖಲೆ, ಕ್ರಿಸ್ಗೇಲ್ ವಿಶ್ವದಾಖಲೆ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ
- Virat Kohli: ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಶಿಖರ್ ಧವನ್ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ.
- Virat Kohli: ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಶಿಖರ್ ಧವನ್ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ.
(1 / 9)
ಪಾಕಿಸ್ತಾನ ವಿರುದ್ಧ ಶತಕ ಸಿಡಿಸಿ ಲಯಕ್ಕೆ ಮರಳುವುದರ ಜೊತೆಗೆ ಹಲವು ದಾಖಲೆಗಳನ್ನೂ ಪುಡಿಗಟ್ಟಿದ್ದ ವಿರಾಟ್ ಕೊಹ್ಲಿ ಅವರು ಇದೀಗ ಶಿಖರ್ ಧವನ್ ರೆಕಾರ್ಡ್ ಮೇಲೆ ಕಣ್ಣಿಟ್ಟಿದ್ದಾರೆ.
(2 / 9)
ಏಕದಿನ ಕ್ರಿಕೆಟ್ನಲ್ಲಿ 14 ಸಾವಿರ ರನ್ ಗಡಿ ದಾಟುವುದರ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 3ನೇ ಆಟಗಾರನೂ ಆಗಿದ್ದರು. ಇದೀಗ ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯನಾಗುವ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ.
(Surjeet Yadav)(3 / 9)
ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನ ಪಡೆಯಲು 52 ರನ್ಗಳ ಬೇಕಿದೆ.
(PTI)(4 / 9)
ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ 651 ರನ್ ಗಳಿಸಿರುವ ಕೊಹ್ಲಿ, ಇನ್ನು 52 ರನ್ ಬಾರಿಸಿದರೆ 701 ರನ್ ಗಳಿಸಿ ಅಗ್ರಸ್ಥಾನದಲ್ಲಿರುವ ಧವನ್ ಅವರನ್ನು ಹಿಂದಿಕ್ಕಬಹುದು.
(5 / 9)
ಸೌರವ್ ಗಂಗೂಲಿ ಮತ್ತು ರಾಹುಲ್ ದ್ರಾವಿಡ್ ಅವರೂ ಭಾರತದ ಪರ ಅತ್ಯಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿದ್ದಾರೆ. ಗಂಗೂಲಿ 665 ರನ್ ಗಳಿಸಿದ್ದರೆ, ದ್ರಾವಿಡ್ 627 ರನ್ ಗಳಿಸಿ ಕ್ರಮವಾಗಿ 2 ಮತ್ತು 4ನೇ ಸ್ಥಾನದಲ್ಲಿದ್ದಾರೆ. ಸದ್ಯ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ.
(X)(7 / 9)
ಕೊಹ್ಲಿ ಇನ್ನು 141 ರನ್ ಸಿಡಿಸಿದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆ ಮುರಿಯಲಿದ್ದಾರೆ.
(8 / 9)
ಟೂರ್ನಿ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಕ್ರಿಸ್ ಗೇಲ್ 791 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ.
(Surjeet Yadav)ಇತರ ಗ್ಯಾಲರಿಗಳು