ಐಪಿಎಲ್‌ನಲ್ಲಿ ಯಾವ ದೇಶದ ಆಟಗಾರರು ಎಷ್ಟು ಶತಕ ಸಿಡಿಸಿದ್ದಾರೆ; ರಿಷಭ್ ಪಂತ್ ಬಾರಿಸಿದ್ದು 110ನೇ ಶತಕ, ಭಾರತದ ಸ್ಥಾನ ಎಷ್ಟು?
ಐಪಿಎಲ್ ಇತಿಹಾಸದಲ್ಲಿ ಇದುವರೆಗೆ 110 ಶತಕಗಳು ದಾಖಲಾಗಿವೆ. ಐಪಿಎಲ್‌ನಲ್ಲಿ ಯಾವ ದೇಶದ ಆಟಗಾರರು ಎಷ್ಟು ಶತಕಗಳನ್ನು ಗಳಿಸಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ನಿಮಗೂ ಇರಬಹುದು. ಈ ಕುತೂಹಲಕಾರಿ ಪಟ್ಟಿ ಇಲ್ಲಿದೆ. ಸಹಜವಾಗಿ ಇಲ್ಲಿ ಭಾರತೀಯರು ಅಗ್ರಸ್ಥಾನದಲ್ಲಿದ್ದಾರೆ.
(1 / 6)
ಐಪಿಎಲ್ 2025ರ ಕೊನೆಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಅದ್ಭುತ ಶತಕ ಬಾರಿಸಿದರು. ಅವರು 61 ಎಸೆತಗಳಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್‌ಗಳೊಂದಿಗೆ ಅಜೇಯ 118 ರನ್ ಗಳಿಸಿದರು. ಇದು ಪಂತ್ ಅವರ ಐಪಿಎಲ್ ವೃತ್ತಿಜೀವನದ ಎರಡನೇ ಶತಕ. ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಒಟ್ಟಾರೆ 110ನೇ ಶತಕವಾಗಿದೆ. ಐಪಿಎಲ್‌ನಲ್ಲಿ ಅತಿ ಹೆಚ್ಚು, ಅಂದರೆ 56 ಶತಕಗಳನ್ನು ಬಾರಿಸಿದ ಭಾರತೀಯ ಆಟಗಾರರು ಮೊದಲ ಸ್ಥಾನದಲ್ಲಿದ್ದಾರೆ.
(PTI)(2 / 6)
ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾದ ಆಟಗಾರರು ಐಪಿಎಲ್‌ನಲ್ಲಿ 18 ಶತಕಗಳನ್ನು ಗಳಿಸಿದ್ದಾರೆ. ಆಸ್ಟ್ರೇಲಿಯಾದ ಮಿಚೆಲ್ ಮಾರ್ಷ್ ಇತ್ತೀಚೆಗೆ ಗುಜರಾತ್ ಟೈಟನ್ಸ್ ವಿರುದ್ಧ 117 ರನ್ ಗಳಿಸಿದ್ದರು. ಮಾರ್ಷ್ ಎಲ್ಎಸ್‌ಜಿ ತಂಡದ ಆಟಗಾರ.
(PTI)(3 / 6)
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂಗ್ಲೆಂಡ್ ಆಟಗಾರರು ಈವರೆಗೆ 14 ಶತಕಗಳನ್ನು ಗಳಿಸಿದ್ದಾರೆ. ಇಂಗ್ಲೆಂಡ್ ಬ್ಯಾಟರ್ ಜೋಸ್ ಬಟ್ಲರ್ ಒಬ್ಬರೇ ಐಪಿಎಲ್‌ನಲ್ಲಿ ಏಳು ಶತಕಗಳನ್ನು ಗಳಿಸಿದ್ದಾರೆ.
(4 / 6)
ದಕ್ಷಿಣ ಆಫ್ರಿಕಾದ ಆಟಗಾರರು ಐಪಿಎಲ್‌ನಲ್ಲಿ 10 ಶತಕಗಳನ್ನು ಬಾರಿಸಿದ್ದಾರೆ. ಐಪಿಎಲ್ 2025ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ದಕ್ಷಿಣ ಆಫ್ರಿಕಾದ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ ಅಜೇಯ 105 ರನ್ ಗಳಿಸಿದ್ದಾರೆ. ಕ್ಲಾಸೆನ್ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದಾರೆ.
(PTI)(5 / 6)
ವೆಸ್ಟ್ ಇಂಡೀಸ್ ತಂಡ ಐದನೇ ಸ್ಥಾನದಲ್ಲಿದೆ. ವೆಸ್ಟ್ ಇಂಡೀಸ್ ಆಟಗಾರರು ಐಪಿಎಲ್‌ನಲ್ಲಿ ಎಂಟು ಶತಕಗಳನ್ನು ಗಳಿಸಿದ್ದಾರೆ. ವೆಸ್ಟ್ ಇಂಡಸ್ ಮಾಜಿ ಬ್ಯಾಟರ್ ಕ್ರಿಸ್ ಗೇಲ್ ಒಬ್ಬರೇ 6 ಶತಕಗಳನ್ನು ಬಾರಿಸಿದ್ದಾರೆ.
(X)(6 / 6)
ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ಜಂಟಿಯಾಗಿ ಆರನೇ ಸ್ಥಾನದಲ್ಲಿವೆ. ನ್ಯೂಜಿಲೆಂಡ್ ಮತ್ತು ಶ್ರೀಲಂಕಾದ ಆಟಗಾರರು ಐಪಿಎಲ್‌ನಲ್ಲಿ ಈವರೆಗೆ ತಲಾ ಎರಡು ಶತಕಗಳನ್ನು ಗಳಿಸಿದ್ದಾರೆ. ನ್ಯೂಜಿಲೆಂಡ್‌ನ ಮಾಜಿ ಕ್ರಿಕೆಟಿಗ ಬ್ರೆಂಡನ್ ಮೆಕಲಮ್ ಐಪಿಎಲ್ ಇತಿಹಾಸದಲ್ಲಿ ಮೊದಲ ಶತಕ ಬಾರಿಸಿದ್ದಾರೆ. 2008ರ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲಿ ಆರ್‌ಸಿಬಿ ತಂಡದ ವಿರುದ್ಧ ಮೆಕಲಮ್ 73 ಎಸೆತಗಳಲ್ಲಿ ಅಜೇಯ 158 ರನ್ ಬಾರಿಸಿದ್ದರು. ಆಗ ಅವರು ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿದ್ದರು.
(X)ಇತರ ಗ್ಯಾಲರಿಗಳು