WTC Standings: ಬಾಕ್ಸಿಂಗ್ ಡೇ ಟೆಸ್ಟ್ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿ ಹೇಗಿದೆ; ಭಾರತದ ಹಾದಿ ಕಠಿಣ
- ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 184 ರನ್‌ಗಳಿಂದ ಸೋಲು ಕಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 2-1 ಅಂತರದೊಂದಿಗೆ ಮುನ್ನಡೆ ಸಾಧಿಸಿದೆ. ಈ ಸೋಲು-ಗೆಲುವಿನ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ, ಆಸೀಸ್ ತನ್ನ ಅಂಕಗಳನ್ನು ಹೆಚ್ಚಿಸಿಕೊಂಡಿದೆ.
- ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 184 ರನ್‌ಗಳಿಂದ ಸೋಲು ಕಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 2-1 ಅಂತರದೊಂದಿಗೆ ಮುನ್ನಡೆ ಸಾಧಿಸಿದೆ. ಈ ಸೋಲು-ಗೆಲುವಿನ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ, ಆಸೀಸ್ ತನ್ನ ಅಂಕಗಳನ್ನು ಹೆಚ್ಚಿಸಿಕೊಂಡಿದೆ.
(1 / 6)
ಪಾಕಿಸ್ತಾನ ವಿರುದ್ಧ ಜಯ ಸಾಧಿಸುವ ಮೂಲಕ ದಕ್ಷಿಣ ಆಫ್ರಿಕಾ ಈಗಾಗಲೇ WTC ಫೈನಲ್ ಸ್ಥಾನವನ್ನು ಕಾಯ್ದಿರಿಸಿದೆ. ಹರಿಣಗಳ ತಂಡವು 66.67 ಶೇಕಡಾ ಪಿಸಿಟಿಯೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
(AP)(2 / 6)
ದಕ್ಷಿಣ ಆಫ್ರಿಕಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯುವುದರೊಂದಿಗೆ ಟೀಮ್ ಇಂಡಿಯಾದ ಮೇಲೆ ಒತ್ತಡ ಹೆಚ್ಚಾಗಿದೆ. ಇತ್ತ ಆಸೀಶ್ ವಿರುದ್ಧದ ನಾಲ್ಕನೇ ಟೆಸ್ಟ್ ಸೋತ ಟೀಮ್ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ.
(AFP)(3 / 6)
ಭಾರತ ವಿರುದ್ಧದ ನಾಲ್ಕನೇ ಟೆಸ್ಟ್ ಗೆಲುವಿನ ನಂತರ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ ಎರಡನೇ ಸ್ಥಾನದಲ್ಲಿ ಮುಂದುವರೆದಿದೆ. ಆಸೀಸ್ 16 ಪಂದ್ಯಗಳಲ್ಲಿ 61.46 ಪಿಸಿಟಿಯೊಂದಿಗೆ 118 ಅಂಕಗಳನ್ನು ಹೊಂದಿದೆ.
(AP)(4 / 6)
ಭಾರತ ತಂಡವು 18 ಪಂದ್ಯಗಳಿಂದ 9ರಲ್ಲಿ ಗೆಲುವು ಸಾಧಿಸಿ 114 ಅಂಕಗಳನ್ನು ಹೊಂದಿದೆ. ಆದರೆ, ಶೇಕಡಾ 52.78 ಪಿಸಿಟಿಯಿಂದಾಗಿ ಮೂರನೇ ಸ್ಥಾನದಲ್ಲಿದೆ.
(5 / 6)
ನ್ಯೂಜಿಲೆಂಡ್ ತಂಡವು 14 ಪಂದ್ಯಗಳಲ್ಲಿ 48.21 ಸರಾಸರಿಯಲ್ಲಿ 81 ಅಂಕಗಳೊಂದಿಗೆ ಲೀಗ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಶ್ರೀಲಂಕಾ 11 ಪಂದ್ಯಗಳಲ್ಲಿ 45.45ರ ಸರಾಸರಿಯಲ್ಲಿ 60 ಅಂಕಗಳನ್ನು ಗಳಿಸಿದೆ. ಆದರೆ ಈ ತಂಡಗಳು ಡಬ್ಲ್ಯುಟಿಸಿ ಫೈನಲ್ ಪ್ರವೇಶಿಸುವ ಅವಕಾಶಗಳನ್ನು ಕಳೆದುಕೊಂಡಿದೆ.
(6 / 6)
ನಾಲ್ಕನೇ ಟೆಸ್ಟ್ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡ ಡಬ್ಲ್ಯುಟಿಸಿ ಫೈನಲ್‌ಗೆ ಇನ್ನಷ್ಟು ಹತ್ತಿರವಾಗಿದೆ. ಮುಂದೆ ಐದನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ನಾಲ್ಕನೇ ಟೆಸ್ಟ್‌ನಲ್ಲಿ ಕನಿಷ್ಠ ಡ್ರಾ ಸಾಧಿಸಿದ್ದರೂ ಭಾರತದ ಮುಂದಿನ ಹಾದಿ ತುಸು ಸುಲಭವಾಗುತ್ತಿತ್ತು. ಈಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ದುರ್ಗಮವಾಗಿದೆ. ಅಲ್ಲದೆ ಬಾರ್ಡರ್-ಗವಾಸ್ಕರ್ ಟ್ರೋಫಿ ತನ್ನಲ್ಲೇ ಉಳಿಸಿಕೊಳ್ಳಲು ಸಿಡ್ನಿ ಟೆಸ್ಟ್ ಗೆಲ್ಲಲೇಬೇಕಾಗಿದೆ.
(AFP)ಇತರ ಗ್ಯಾಲರಿಗಳು