Kukke Champa shashti: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ಶುರು: ಲಕ್ಷ ದೀಪೋತ್ಸವ, ಬ್ರಹ್ಮ ರಥೋತ್ಸವ ವಿವರ ಇಲ್ಲಿದೆ
- ಕರ್ನಾಟಕದ ಪ್ರಮುಖ ನಾಗಕ್ಷೇತ್ರಗಳಲ್ಲಿ ಒಂದಾದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ(Kukke subramanya)ದಲ್ಲಿ ಈಗ ಚಂಪಾಷಷ್ಠಿ ಸಡಗರ. ಭಾನುವಾರ ಕೊಪ್ಪರಿಗೆ ದೇವರು ಏರುವ ಮೂಲಕ ಧಾರ್ಮಿಕ ಚಟುವಟಿಕಗಳು ಆರಂಭಗೊಂಡಿವೆ. ಇನ್ನು ವಾರ ಕಾಲ ರಥೋತ್ಸವಗಳು, ಲಕ್ಷದೀಪೋತ್ಸವ ಸಹಿತ ನಾನಾ ಕಾರ್ಯಕ್ರಮಗಳು ಕಳೆಗಟ್ಟಲಿವೆ. ಇಲ್ಲಿದೆ ಅಲ್ಲಿನ ಚಿತ್ರನೋಟ..
- ಕರ್ನಾಟಕದ ಪ್ರಮುಖ ನಾಗಕ್ಷೇತ್ರಗಳಲ್ಲಿ ಒಂದಾದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ(Kukke subramanya)ದಲ್ಲಿ ಈಗ ಚಂಪಾಷಷ್ಠಿ ಸಡಗರ. ಭಾನುವಾರ ಕೊಪ್ಪರಿಗೆ ದೇವರು ಏರುವ ಮೂಲಕ ಧಾರ್ಮಿಕ ಚಟುವಟಿಕಗಳು ಆರಂಭಗೊಂಡಿವೆ. ಇನ್ನು ವಾರ ಕಾಲ ರಥೋತ್ಸವಗಳು, ಲಕ್ಷದೀಪೋತ್ಸವ ಸಹಿತ ನಾನಾ ಕಾರ್ಯಕ್ರಮಗಳು ಕಳೆಗಟ್ಟಲಿವೆ. ಇಲ್ಲಿದೆ ಅಲ್ಲಿನ ಚಿತ್ರನೋಟ..
(1 / 8)
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 10 ರಿಂದ ಕುಕ್ಕೆ ಚಂಪಾಷಷ್ಠಿ ಮಹೋತ್ಸವ" ಆರಂಭಗೊಂಡಿದೆ. ದೇವರು ಕೊಪ್ಪರಿಗೆ ಏರುವುದರ ಮೂಲಕ ಜಾತ್ರೆ ಆರಂಭವಾಗಿದೆ. ಈಗಾಗಲೇ ಭಕ್ತರು ಕುಕ್ಕೆಗೆ ಆಗಮಿಸುತ್ತಿದ್ದಾರೆ.
(2 / 8)
ಚಂಪಾಷಷ್ಠಿ ಅಂಗವಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.12ರಂದು ಲಕ್ಷದೀಪೋತ್ಸವ, ಡಿ.16ರಂದು ಚೌತಿ ಹೂವಿನ ತೇರಿನ ಉತ್ಸವ ನಡೆಯಲಿವೆ. ಇದಕ್ಕಾಗಿ ತಯಾರಿಯೂ ಜೋರಾಗಿದೆ. ನಡೆದಿದೆ. (Namma Subrahmanya )
(3 / 8)
ಚಂಪಾಷಷ್ಠಿ ಭಾಗವಾಗಿ ಪ್ರಮುಖವಾಗಿ ನಡೆಯುವುದು ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ. ಡಿ.17ರಂದು ಪಂಚಮಿ ರಥೋತ್ಸವ ಡಿ.18 ರಂದು ಬೆಳಗ್ಗೆ "ಚಂಪಾಷಷ್ಠಿ" ಬ್ರಹ್ಮರಥೋತ್ಸವ ಡಿ.19 ರಂದು ಅವಭ್ರಥೋತ್ಸವ ಮತ್ತು ನೌಕವಿಹಾರಡಿ.24 ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೆ ಸಮಾಪನಗೊಳ್ಳಲಿದೆ. ಅಂದು ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನೆರವೇರಲಿದೆ. ಹಾಗೂ ಪುರುಷರಾಯ, ಹೊಸಳಿಗಮ್ಮ ಹಾಗೂ ಪರಿವಾರ ದೈವಗಳ ನಡಾವಳಿ ನಡೆಯಲಿವೆ.
(4 / 8)
ಕುಕ್ಕೆ ಸುಬ್ರಮಣ್ಯ ದೇವರನ್ನು ಬೆಳಕಿಗೆ ತಂದಂತಹ ಪ್ರತೀತಿ ಇರುವ ಮಲೆಕುಡಿಯ ಆದಿವಾಸಿ ಜನಾಂಗದವರು ಚಂಪಾಷಷ್ಠಿ ವೇಳೆಯಲ್ಲಿ ವಿಶಿಷ್ಟವಾಗಿ ಬೆತ್ತದಿಂದ ಬ್ರಹ್ಮರಥವನ್ನು ನಿರ್ಮಿಸುವುದು ಪಾರಂಪರಿಕ ವಾಡಿಕೆಯಾಗಿದೆ. ಬೃಹತ್ ಬ್ರಹ್ಮರಥವನ್ನು ಪ್ರತ್ಯೇಕವಾಗಿ ಹಗ್ಗಗಳ ಬಳಕೆ ಇಲ್ಲದೆ ಬರೀ ಬಿದುರು ಮತ್ತು ಬೆತ್ತದಲ್ಲಿ ಕೌಶಲ್ಯಕರವಾಗಿ ನಿರ್ಮಿಸುವುದು ಇದರ ವಿಶಿಷ್ಟತೆ
(5 / 8)
ಹೂವಿನಂತೆ ಬೆತ್ತ ಸುರಿದು, ಯಾವುದೇ ಗಂಟುಗಳಿಲ್ಲದೆ, ಹಗ್ಗ ಬಳಸದೆ ಬೆತ್ತದಿಂದ ರಥ ರಚಿಸುವುದನ್ನು ನೋಡುವುದೇ ಒಂದು ಆನಂದ. ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ವೇಳೆ ಸುಬ್ರಹ್ಮಣ್ಯ ಕ್ಷೇತ್ರದ ಮೂಲ ನಿವಾಸಿಗಳ ಕೈಚಳಕದಲ್ಲಿ ಬೆತ್ತದ ತೇರು ಸುಂದರ ಕಲಾಕೃತಿಯಂತೆ ನಿರ್ಮಾಣಗೊಳ್ಳುತ್ತಿದೆ.ನಾಗರಾಧನೆಗೆ ಪ್ರಸಿದ್ಧಿ ಪಡೆದ ಪುಣ್ಯಕ್ಷೇತ್ರ ಕುಕ್ಕೆಯಲ್ಲಿ ಚಂಪಾಷಷ್ಠಿಗೆ ಚಾಲನೆ ದೊರಕಿದೆ. ಇಲ್ಲಿನ ಮೂಲ ನಿವಾಸಿಗಳಾದ ಮಲೆಕುಡಿಯರಿಂದ ಬೆತ್ತದ ರಥ ನಿರ್ಮಾಣ ನಡೆಯುತ್ತಿದೆ. ಭಾರೀ ಗಾತ್ರದ ಬೆತ್ತವನ್ನು ಎಂಟು ಆಕಾರದಲ್ಲಿ ರಥದ ಮೇಲ್ಭಾಗಕ್ಕೆ ಬಿಗಿದು, ರಥದ ಅಟ್ಟೆಯನ್ನು ಬಿದಿರು ಹಾಗೂ ಬೆತ್ತಗಳಿಂದ ರಚಿಸುತ್ತಾರೆ. ಇಲ್ಲಿ ಯಾವುದೇ ಗಂಟುಗಳನ್ನು ಹಾಕುವುದಿಲ್ಲ. ಬೆತ್ತವನ್ನು ಹೂವಿನಂತೆ ಪೋಣಿಸಿ ರಥವನ್ನು ಗಟ್ಟಿ ಮಾಡಲಾಗುತ್ತದೆ. ತೇರನ್ನೇರುವ ವೇಳೆ ರಥದ ಸುತ್ತ ಪತಾಕೆಗಳಿಂದ ಅಲಂಕರಿಸುತ್ತಾರೆ. ರಥ ನಿಮಾಣ ಕಾರ್ಯದಲ್ಲಿ ಯುವಕರು, ವೃದ್ಧರು ಉತ್ಸಾಹದಿಂದ ಭಾಗವಹಿಸುತ್ತಾರೆ. 20 ಯುವಕರು, 30 ಹಿರಿಯರ ಸಹಿತ 50 ಜನ ಬೆತ್ತದ ರಥ ನಿರ್ಮಿಸಿದ್ದಾರೆ.
(6 / 8)
ಲಕ್ಷದೀಪೋತ್ಸವದಂದು ಕಾಶಿಕಟ್ಟೆ ದೇಗುಲದ ಮುಂದೆ ಜನಪದೀಯ ಶೈಲಿಯಲ್ಲಿ ರಚಿಸುವ ಚಲಿಸಲಾಗದ ಗುರ್ಜಿ ರಥದಿಂದ ಹಿಡಿದು ಪಂಚಮಿ, ಬ್ರಹ್ಮರಥಗಳು ಮನಸೂರೆಗೊಳಿಸುತ್ತವೆ. ಮಾರ್ಗಶಿರ ಶುದ್ಧ ಪೌರ್ಣಮಿಯಂದು ಸಹಸ್ರ ನಾಮಾರ್ಚನೆ ಬಳಿಕ ದೇಗುಲದ ಪ್ರಧಾನ ಅರ್ಚಕರು ಶುಭಮುಹೂರ್ತದಲ್ಲಿ ಬ್ರಹ್ಮರಥ ನಿರ್ಮಾಣಕ್ಕೆ ಚಾಲನೆ ನೀಡುತ್ತಾರೆ. ರಥ ಮುಹೂರ್ತದ ಬಳಿಕ ಮಲೆಕುಡಿಯರು ವೀಳ್ಯ ಸ್ವೀಕರಿಸಿ ಕಾಡಿಗೆ ತೆರಳುತ್ತಾರೆ. ರಥ ನಿರ್ಮಾಣಕ್ಕೆ ಬೇಕಿರುವ ಬೆತ್ತ ಸಂಗ್ರಹಿಸಿ, ಬ್ರಹ್ಮರಥವನ್ನು ಕಟ್ಟಲು ಆರಂಭಿಸುತ್ತಾರೆ. ನಾಡಿನ ಇತರೆ ದೇವಸ್ಥಾನಗಳಲ್ಲಿ ರಥವನ್ನು ಹಗ್ಗಗಳಿಂದ ರಚಿಸಿದರೆ, ಸುಬ್ರಹ್ಮಣ್ಯದಲ್ಲಿ ಕೇವಲ ಬಿದಿರು, ಮರದ ಹಲಗೆ ಹಾಗೂ ಬೆತ್ತವನ್ನು ಬಳಸಿ ಕೌಶಲಭರಿತವಾಗಿ ನಿರ್ಮಿಸುವುದು ವಿಶೇಷ.
(7 / 8)
ಚಂಪಾ ಷಷ್ಠಿ ಅಂಗವಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾನುವಾರ ದೇವರಿಗೆ ನಾನಾ ಪೂಜೆಗಳು ನೆರವೇರಿದವು. ಈ ಮೂಲಕ ಈ ವರ್ಷದ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರಕಿತು.
ಇತರ ಗ್ಯಾಲರಿಗಳು