Photos: ಮಂಗಳೂರು ಬಂದರಿಗೆ ಬಂದ ಐಷಾರಾಮಿ ಹಡಗಿನಲ್ಲಿ ಮತದಾನ ಜಾಗೃತಿ
- ಮಂಗಳೂರು ನಗರಕ್ಕೆ ಹತ್ತಿರದ ಪಣಂಬೂರು ಬಂದರಿಗೆ ಎಂಎಸ್ ಸೆವೆನ್ಸ್ ನ್ಯಾವಿಗೇಟರ್ ಐಷಾರಾಮಿ ಪ್ರವಾಸಿಗರ ಹಡಗು ಆಗಮಿಸಿದೆ. ಅದರಲ್ಲಿ ಆಗಮಿಸಿದ ಪ್ರವಾಸಿಗರಿಗಾಗಿ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನವನ್ನು ಆಯೋಜಿಸಲಾಯಿತು.

(2 / 6)
ಈ ಕುರಿತು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಮುಖ್ಯಸ್ಥರೂ ಆಗಿರುವ ಡಾ.ಆನಂದ್ ಮಾತನಾಡಿ, ಪ್ರಜಾಪ್ರಭುತ್ವದ ಭದ್ರ ಬುನಾದಿ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಅರ್ಹ ಮತದಾರರೆಲ್ಲರೂ ಮತದಾನದ ಮಹತ್ವ ಅರಿತು ತಪ್ಪದೇ ಹಕ್ಕು ಚಲಾಯಿಸಬೇಕು ಎಂದರು.
(3 / 6)
ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಆಡಳಿತ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು. ಮತದಾನದ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.
(4 / 6)
ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನಮಗೆ ನೀಡಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.
(5 / 6)
ಬಂದರು ಮಂಡಳಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಅವರ ಕುಟುಂಬದವರಿಗೆ ಮತದಾನದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿ ಮತದಾನದ ಪ್ರತಿಜ್ಞೆ ಭೋಧಿಸಿದರು.
ಇತರ ಗ್ಯಾಲರಿಗಳು