ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸೂಕ್ತ ಬಿ.ಟೆಕ್ ಇಂಜಿನಿಯರಿಂಗ್ ಕೋರ್ಸ್‌ಗಳಿವು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸೂಕ್ತ ಬಿ.ಟೆಕ್ ಇಂಜಿನಿಯರಿಂಗ್ ಕೋರ್ಸ್‌ಗಳಿವು

ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸೂಕ್ತ ಬಿ.ಟೆಕ್ ಇಂಜಿನಿಯರಿಂಗ್ ಕೋರ್ಸ್‌ಗಳಿವು

  • ಸರ್ಕಾರಿ ಉದ್ಯೋಗಕ್ಕಾಗಿ ಹಲವರು ಹಾತೊರೆಯುತ್ತಾರೆ. ಉದ್ಯೋಗ ಭದ್ರತೆ, ಉತ್ತಮ ಸಂಬಳ ಸೇರಿದಂತೆ ಇನ್ನೊಂದಷ್ಟು ಪ್ರಯೋಜನಗಳು ಸರ್ಕಾರಿ ನೌಕರಿಯಲ್ಲಿ ಸಿಗುತ್ತದೆ. ಅನೇಕ B.Tech ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗ ಬಯಸುತ್ತಾರೆ. ಸರ್ಕಾರಿ ಉದ್ಯೋಗಗಳಿಗೆ ಸೂಕ್ತವಾಗುವ B.Tech ಕೋರ್ಸ್ ಅಥವಾ ಎಂಜಿನಿಯರಿಂಗ್‌ ಶಾಖೆಗಳ ಮಾಹಿತಿ ಇಲ್ಲಿದೆ.

ಸರ್ಕಾರಿ ಉದ್ಯೋಗಗಳು ಉದ್ಯೋಗ ಭದ್ರತೆ, ಉತ್ತಮ ಸಂಬಳ ಮತ್ತು ಇತರ ಸೌಲಭ್ಯಗಳನ್ನು ನೀಡುತ್ತವೆ ಎಂಬ ಕಾರಣದಿಂದಾಗಿ ಅನೇಕ ಬಿ.ಟೆಕ್ ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗಗಳನ್ನು ಪಡೆಯಲು ಬಯಸುತ್ತಾರೆ. ನೀವು ಬಿ.ಟೆಕ್ ಕೋರ್ಸ್ ಅಥವಾ ಎಂಜಿನಿಯರಿಂಗ್‌ ಮಾಡುವ ನಿರ್ಧಾರಕ್ಕೆ ಬಂದಿದ್ದರೆ, ಇವು ಭಾರತದ ಉನ್ನತ ಎಂಜಿನಿಯರಿಂಗ್ ಶಾಖೆಗಳಾಗಿವೆ. ಬುದ್ಧಿವಂತಿಕೆಯಿಂದ ನಿಮಗೆ ಸೂಕ್ತವಾಗುವ ಬಿ.ಟೆಕ್ ಕೋರ್ಸ್ ಆಯ್ಕೆ ಮಾಡಿಕೊಳ್ಳಿ.
icon

(1 / 5)

ಸಿವಿಲ್ ಎಂಜಿನಿಯರಿಂಗ್: ಸಿವಿಲ್ ಎಂಜಿನಿಯರಿಂಗ್ ಅತ್ಯಂತ ಜನಪ್ರಿಯ ಎಂಜಿನಿಯರಿಂಗ್ ಶಾಖೆಗಳಲ್ಲಿ ಒಂದಾಗಿದೆ. ದೇಶದಲ್ಲಿ ಸ್ಮಾರ್ಟ್ ಮೂಲಸೌಕರ್ಯಕ್ಕೆ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ, ವಿವಿಧ ಸರ್ಕಾರಿ ಉದ್ಯೋಗಗಳು ಲಭ್ಯವಿದೆ. ಭಾರತೀಯ ಎಂಜಿನಿಯರಿಂಗ್ ಸೇವೆ (IES), ಲೋಕೋಪಯೋಗಿ ಇಲಾಖೆ (PWD), ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI), ರೈಲ್ವೆ (IRSE), ಮುನ್ಸಿಪಲ್ ಕಾರ್ಪೊರೇಷನ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಿವಿಲ್ ಎಂಜಿನಿಯರ್‌ಗಳಿಗೆ ಬೇಡಿಕೆ ಇದೆ.
icon

(2 / 5)

ಮೆಕ್ಯಾನಿಕಲ್ ಎಂಜಿನಿಯರಿಂಗ್: ಇದು ಮತ್ತೊಂದು ಜನಪ್ರಿಯ ಎಂಜಿನಿಯರಿಂಗ್ ಶಾಖೆಯಾಗಿದ್ದು ಸಾಕಷ್ಟು ಸರ್ಕಾರಿ ಉದ್ಯೋಗಾವಕಾಶಗಳನ್ನು ನೀಡುತ್ತದೆ. ಇದು ಯಂತ್ರೋಪಕರಣಗಳ ವಿನ್ಯಾಸ, ನಿರ್ಮಾಣ ಮತ್ತು ತಯಾರಿಕೆಗೆ ಸಂಬಂಧಿಸಿದೆ. ವಿದ್ಯಾರ್ಥಿಗಳು ರಕ್ಷಣಾ, ರೈಲ್ವೆ ಮತ್ತು ಸಾರ್ವಜನಿಕ ವಲಯ ಮತ್ತು ಆರ್‌ಆರ್‌ಬಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಕೋರ್ಸ್‌ ಮಾಡಿದವರು ಭಾರತೀಯ ರೈಲ್ವೆ, ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL), ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO), ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ಸೇರಿದಂತೆ ವಿವಿಧ ವಲಯಗಳಲ್ಲಿ ಉದ್ಯೋಗ ಮಾಡಬಹುದು,
icon

(3 / 5)

ಎಲೆಕ್ಟ್ರಿಕಲ್ ಎಂಜಿನಿಯರಿಂಗ್: ವಿದ್ಯುತ್ ಮತ್ತು ಇಂಧನ ಕ್ಷೇತ್ರಕ್ಕೆ ಕೊಡುಗೆ ನೀಡುವಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರ್‌ಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಇದು ಸರ್ಕಾರಿ ಇಲಾಖೆಗಳಲ್ಲಿ ಅವರಿಗೆ ಹೆಚ್ಚಿನ ಮೌಲ್ಯವನ್ನು ನೀಡುತ್ತದೆ. ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಅತ್ಯಂತ ಹಳೆಯ ಎಂಜಿನಿಯರಿಂಗ್ ಶಾಖೆಗಳಲ್ಲಿ ಒಂದಾಗಿದೆ. ಪ್ರತಿಯೊಂದು ವಿಭಾಗದಲ್ಲೂ ವಿದ್ಯುತ್ ಎಂಜಿನಿಯರ್‌ಗಳ ಅಗತ್ಯವಿದೆ. ಹೀಗಾಗಿ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ (PGCIL), ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ (NTPC), ರಾಜ್ಯ ವಿದ್ಯುತ್ ಮಂಡಳಿಗಳು, ISRO & DRDO, BHEL ಮತ್ತು ONGC ಮೊದಲಾದೆಡೆ ಉದ್ಯೋಗ ಪಡೆಯಬಹುದು.
icon

(4 / 5)

ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ (ಸಿಎಸ್ಇ) ಮತ್ತು ಮಾಹಿತಿ ತಂತ್ರಜ್ಞಾನ: ಸಿಎಸ್ಇ ಮತ್ತು ಐಟಿ ಪದವೀಧರರಿಗೆ ಸರ್ಕಾರಿ ಉದ್ಯೋಗಗಳಿಗೆ ಹೆಚ್ಚಿನ ಬೇಡಿಕೆಯಿದೆ. ವಿದ್ಯಾರ್ಥಿಗಳು ಸೈಬರ್ ಸೆಕ್ಯುರಿಟಿ ವಿಶ್ಲೇಷಕ, ಸಾಫ್ಟ್‌ವೇರ್ ಡೆವಲಪರ್, ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ಡೇಟಾ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸಿಎಸ್ಇ ಮತ್ತು ಐಟಿ ಪದವೀಧರರು ಇಸ್ರೋ ಸೇರಬಹುದು. ಉದ್ಯೋಗಗಳು - ರಾಷ್ಟ್ರೀಯ ಮಾಹಿತಿ ಕೇಂದ್ರ, ಇಸ್ರೋ ಮತ್ತು DRDO, ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು RBI, ಸೈಬರ್ ಭದ್ರತೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯಗಳು, UPSC ಮತ್ತು SSC ಆಧಾರಿತ ಐಟಿ ಉದ್ಯೋಗಗಳನ್ನು ನಿರ್ವಹಿಸಬಹುದು.
icon

(5 / 5)

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.

ಇತರ ಗ್ಯಾಲರಿಗಳು