ಐಪಿಎಲ್ನಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ಆಟಗಾರರಿವರು; ಸಿಎಸ್ಕೆ ವಿರುದ್ಧ ಗುಡುಗಿದ ಶೆಫರ್ಡ್ಗೆ ಎಷ್ಟನೆ ಸ್ಥಾನ?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿಯ ರೊಮಾರಿಯೊ ಶೆಫರ್ಡ್ ಸುನಾಮಿ ಬ್ಯಾಟಿಂಗ್ಗೆ ಐಪಿಎಲ್ ರೆಕಾರ್ಡ್ಗಳು ಧೂಳಿಪಟಗೊಂಡಿವೆ. ಕೇವಲ 14 ಎಸೆತಗಳಲ್ಲೇ ಅರ್ಧಶತಕ ಬಾರಿಸಿ ಚರಿತ್ರೆ ಸೃಷ್ಟಿಸಿದ್ದಾರೆ. ಹಾಗಾದರೆ ವೇಗದ ಅರ್ಧಶತಕ ಬಾರಿಸಿದ ಆಟಗಾರರು ಯಾರು? ಇಲ್ಲಿದೆ ಪಟ್ಟಿ.
(1 / 5)
ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ರೊಮಾರಿಯೊ ಶೆಫರ್ಡ್ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಶೆಫರ್ಡ್, ಐಪಿಎಲ್ನಲ್ಲಿ ಆರ್ಸಿಬಿ ಪರ ವೇಗವಾಗಿ ಅರ್ಧಶತಕ ಗಳಿಸಿದ ಆಟಗಾರ ಎನಿಸಿಕೊಂಡರು. ಹಾಗೆಯೇ ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಜಂಟಿ 2ನೇ ಆಟಗಾರನೂ ಆಗಿದ್ದಾರೆ.
(PTI)(2 / 5)
ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಶೆಫರ್ಡ್ ಜಂಟಿ 2ನೇ ಸ್ಥಾನದಲ್ಲಿದ್ದಾರೆ. 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಕೆಎಲ್ ರಾಹುಲ್, ಪ್ಯಾಟ್ ಕಮಿನ್ಸ್ ಅವರೊಂದಿಗೆ ಜಂಟಿಯಾಗಿ ಶೆಫರ್ಡ್ ನಂತರ ಎರಡನೇ ಸ್ಥಾನದಲ್ಲಿದ್ದಾರೆ.
(PTI)(3 / 5)
2023ರಲ್ಲಿ ಕೆಕೆಆರ್ ವಿರುದ್ಧ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ರಾಜಸ್ಥಾನ್ ರಾಯಲ್ಸ್ನ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಐಪಿಎಲ್ನಲ್ಲಿ ಅತಿ ವೇಗದ ಅರ್ಧಶತಕದ ದಾಖಲೆಯನ್ನು ಹೊಂದಿದ್ದಾರೆ.
(Surjeet Yadav)(4 / 5)
ಐಪಿಎಲ್ನಲ್ಲಿ ಅತಿ ವೇಗದ ಅರ್ಧಶತಕದ ದಾಖಲೆಯಲ್ಲಿ ಜಂಟಿ ಎರಡನೇ ಸ್ಥಾನದಲ್ಲಿರುವ ರಾಹುಲ್ 14 ಎಸೆತಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದರು. ರಾಹುಲ್ 2018ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಪರ ಅತಿ ವೇಗದ ಅರ್ಧಶತಕ ಗಳಿಸಿದರು.
(Surjeet)ಇತರ ಗ್ಯಾಲರಿಗಳು