Karnataka Election: 14 ಕ್ಷೇತ್ರಗಳಲ್ಲಿ ಕಣದಲ್ಲಿದ್ದಾರೆ ಅಪ್ಪ ಮಕ್ಕಳು; ನಾಳೆ ಒಟ್ಟಿಗೆ ರಿಸಲ್ಟ್, ಇಲ್ಲಿವೆ ಅವರ ಫೋಟೋಸ್
- Father and Children candidates: ಇಡೀ ದೇಶದ ಚಿತ್ತ ಕರ್ನಾಟಕ ವಿಧಾನಸಭೆ ಚುನಾವಣೆಯತ್ತ ಇದೆ. ನಾಳೆ ( ಮೇ 13) ಫಲಿತಾಂಶ ಪ್ರಕಟವಾಗುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಜಿದ್ದಾಜಿದ್ದಿ ಏರ್ಪಟ್ಟಿದೆ. ಈ ಬಾರಿ ಚುನಾವಣೆಯ ಮತ್ತೊಂದು ವಿಶೇಷವೇನೆಂದರೆ 14 ಕ್ಷೇತ್ರಗಳಲ್ಲಿ ಅಪ್ಪ-ಮಕ್ಕಳು ಕಣದಲ್ಲಿದ್ದಾರೆ. ಯಾರಿಗೆ ಸಿಹಿ-ಯಾರಿಗೆ ಕಹಿ ಎಂಬುದು ನಾಳೆ ತಿಳಿಯಲಿದೆ.

(1 / 8)
ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧಿಸಿದ್ದಾರೆ.
(2 / 8)
ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕಿ ರೂಪಾ ಕಲಾ ಶಶಿಧರ್ ಅವರು ಸ್ಪರ್ಧಿಸುತ್ತಿದ್ದರೆ, ಅವರ ತಂದೆ ಕೆ.ಎಚ್.ಮುನಿಯಪ್ಪ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರದಿಂದ ಕಣಕ್ಕೆ ಧುಮುಕಿದ್ದಾರೆ.
(3 / 8)
ಜಿ.ಟಿ.ದೇವೇಗೌಡ ಅವರು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದರೆ, ಅವರ ಮಗ ಹರೀಶ್‌ಗೌಡ ಜಿ.ಡಿ ಅವರು ಹುಣಸೂರು ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.
(4 / 8)
ದಾವಣಗೆರೆ ದಕ್ಷಿಣದಿಂದ ಕಾಂಗ್ರೆಸ್ ಹಿರಿಯ ಮುತ್ಸದ್ಧಿ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರದಿಂದ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಅಖಾಡಕ್ಕೆ ಇಳಿದಿದ್ದಾರೆ.
(5 / 8)
ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದಿಂದ ಅವರ ಪುತ್ರಿ ಸೌಮ್ಯ ರೆಡ್ಡಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ.
(6 / 8)
ಮಡಿಕೇರಿಯಲ್ಲಿ ಕಾಂಗ್ರೆಸ್ನಿಂದ ಮಂಥರ್‌ಗೌಡ ಕಣದಲ್ಲಿದ್ದು, ಅವರ ತಂದೆ ಎ.ಮಂಜು ಅವರು ಜೆಡಿಎಸ್ನಿಂದ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಅಖಾಡಕ್ಕೆ ಇಳಿದಿದ್ದಾರೆ.
(7 / 8)
ಕಾಂಗ್ರೆಸ್ ಹಿರಿಯ ನಾಯಕ ಎಂ.ಕೃಷ್ಣಪ್ಪ ಅವರು ವಿಜಯನಗರ ಕ್ಷೇತ್ರದಿಂದ ಹಾಗೂ ಅವರ ಪುತ್ರ ಪ್ರಿಯಾಕೃಷ್ಣ ಅವರು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ಇತರ ಗ್ಯಾಲರಿಗಳು