147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; ಟೀಮ್ ಇಂಡಿಯಾ ಬರೆದ ದಾಖಲೆ ಅಂತಿಂಥದ್ದಲ್ಲ!
- India vs New Zealand 1st Test: ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ನಲ್ಲಿ ಭಾರತ ತಂಡ, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ಕಂಡಿರದ ಮೈಲಿಗಲ್ಲನ್ನು ದಾಟಿದೆ.
- India vs New Zealand 1st Test: ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ನಲ್ಲಿ ಭಾರತ ತಂಡ, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ಕಂಡಿರದ ಮೈಲಿಗಲ್ಲನ್ನು ದಾಟಿದೆ.
(1 / 5)
ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ಪರಿಣಾಮ ಮುನ್ನಡೆ ಸಾಧಿಸಿದೆ. ಇದೇ ವೇಳೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ಮಾಡದ ಸಾಧನೆಯೊಂದನ್ನು ಮಾಡಿದೆ. 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು. ಆ ಮೂಲಕ ಭಾರತ ವಿಶ್ವದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿದೆ.
(2 / 5)
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು ಕ್ಯಾಲೆಂಡರ್ ವರ್ಷದಲ್ಲಿ 100 ಸಿಕ್ಸರ್ ಬಾರಿಸಿದ ಮೈಲಿಗಲ್ಲು ದಾಟಿದೆ. ಬೆಂಗಳೂರು ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಭಾರತ ಅದ್ಭುತ ದಾಖಲೆ ಬರೆದಿದೆ. 2024ರಲ್ಲಿ ರೋಹಿತ್ ಪಡೆ, ಟೆಸ್ಟ್ ಕ್ರಿಕೆಟ್ನಲ್ಲಿ 100 ಸಿಕ್ಸರ್ ಪೂರೈಸಿ ದಾಖಲೆ ಬರೆದಿದೆ.
(3 / 5)
2024ಕ್ಕೂ ಮೊದಲು ಇಂಗ್ಲೆಂಡ್ ತಂಡ ಟೆಸ್ಟ್ ಕ್ರಿಕೆಟ್ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಸಿಕ್ಸರ್ ಸಿಡಿಸಿದ ದಾಖಲೆ ಹೊಂದಿತ್ತು. ಇಂಗ್ಲೆಂಡ್ ಬ್ಯಾಟರ್ಗಳು 2022ರಲ್ಲಿ ಟೆಸ್ಟ್ನಲ್ಲಿ ಒಟ್ಟು 89 ಸಿಕ್ಸರ್ಗಳನ್ನು ಬಾರಿಸಿದ್ದರು. ಟೀಮ್ ಇಂಡಿಯಾ ಈ ವರ್ಷ ಬ್ರಿಟಿಷರಿಂದ ಆ ದಾಖಲೆಯನ್ನು ಕಸಿದುಕೊಳ್ಳುವುದರ ಜೊತೆಗೆ ಐತಿಹಾಸಿಕ ದಾಖಲೆಯನ್ನೂ ತನ್ನ ಹೆಸರಿಗೆ ಬರೆದುಕೊಂಡಿದೆ.
(4 / 5)
2024ರಲ್ಲಿ ಭಾರತ 100ಕ್ಕೂ ಹೆಚ್ಚು ಸಿಕ್ಸರ್ ಬಾರಿಸಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಒಂದು ವರ್ಷದಲ್ಲಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡಗಳ ಪಟ್ಟಿಯಲ್ಲಿ ಇಂಗ್ಲೆಂಡ್ 2ನೇ ಸ್ಥಾನದಲ್ಲಿದೆ. 2022ರಲ್ಲಿ ಇಂಗ್ಲೆಂಡ್, 89 ಸಿಕ್ಸರ್ ಬಾರಿಸಿತ್ತು. ಮೂರನೇ ಸ್ಥಾನದಲ್ಲಿಯೂ ಭಾರತ ಇದ್ದು, 2021ರಲ್ಲಿ ಭಾರತೀಯ ಬ್ಯಾಟರ್ಗಳು ಒಟ್ಟು 87 ಸಿಕ್ಸರ್ಗಳನ್ನು ಬಾರಿಸಿದ್ದಾರೆ. 2014 ಮತ್ತು 2013ರಲ್ಲಿ ಕ್ರಮವಾಗಿ ನ್ಯೂಜಿಲೆಂಡ್ 81 ಮತ್ತು 71 ಸಿಕ್ಸರ್ ಬಾರಿಸಿ ಕ್ರಮವಾಗಿ 4, 5ನೇ ಸ್ಥಾನದಲ್ಲಿದೆ.
ಇತರ ಗ್ಯಾಲರಿಗಳು