ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸಲು, ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿ ಈ 7 ಬಗೆಯ ಸೊಪ್ಪು ತರಕಾರಿ
ಚಳಿಗಾಲದಲ್ಲಿ ಲಭ್ಯವಿರುವ 7 ರೀತಿಯ ಸೊಪ್ಪು ತರಕಾರಿಗಳಳನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನವಿದೆ. ಪೋಷಕಾಂಶಗಳಿಂದ ಸಮೃದ್ಧವಾಗಿರುವ ಈ ಸೊಪ್ಪು ತರಕಾರಿಗಳನ್ನು ತಿನ್ನುವುದರಿಂದ ನಿಮ್ಮನ್ನು ಅನೇಕ ರೀತಿಯ ರೋಗಗಳಿಂದ ದೂರವಿರಿಸುತ್ತದೆ. ಚಳಿಯ ವಾತಾವರಣದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
(1 / 10)
ನೀವು ಆರೋಗ್ಯವಂತರಾಗಿರಲು ಆಹಾರದಲ್ಲಿ ಸೊಪ್ಪು ತರಕಾರಿಗಳನ್ನು ಸೇರಿಸುವುದು ಮುಖ್ಯ. ವಿಶೇಷವಾಗಿ ಚಳಿಗಾಲದಲ್ಲಿ ಸೇವಿಸಬೇಕು. ಈ ಸೊಪ್ಪು ತರಕಾರಿಗಳನ್ನು ತಿನ್ನುವುದರಿಂದ ಹೃದಯದ ಆರೋಗ್ಯಕ್ಕೂ ಉತ್ತಮ. ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಸೊಪ್ಪು ತರಕಾರಿಗಳು ದೇಹದ ರಕ್ತದ ಪ್ರಮಾಣವನ್ನು ಹೆಚ್ಚಿಸುತ್ತವೆ. ಯಾವ ಸೊಪ್ಪು ತರಕಾರಿಗಳು ತಿನ್ನಬೇಕು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
(2 / 10)
ಬತುವಾ ಒಂದು ಎಲೆಗಳ ತರಕಾರಿಯಾಗಿದ್ದು, ಇದು ದೇಹದಲ್ಲಿ ರಕ್ತವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ವಿಟಮಿನ್ ಎ, ಬಿ, ಸಿ, ಕಬ್ಬಿಣ ಮತ್ತು ಕ್ಯಾಲ್ಸಿಯಂನಿಂದ ಸಮೃದ್ಧವಾಗಿದೆ. ನಾರಿನಂಶ ಅಧಿಕವಾಗಿದ್ದು, ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ಅಷ್ಟೇ ಅಲ್ಲ ರೋಗನಿರೋಧಕ ಶಕ್ತಿ ಹೆಚ್ಚಿಸಲೂ ಕೂಡ ಸಹಾಯ ಮಾಡುತ್ತದೆ.
(3 / 10)
ಚಳಿಗಾಲದಲ್ಲಿ ಸಬ್ಬಸಿಗೆ ಸೊಪ್ಪು ಹೇರಳವಾಗಿ ಲಭ್ಯವಿದೆ. ಇದನ್ನು ತಿನ್ನುವುದರಿಂದ ಹೊಟ್ಟೆಯ ವಾಯು ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಅಲ್ಲದೆ, ಈ ಎಲೆಗಳಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಆದ್ದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಚಳಿಗಾಲದಲ್ಲಿ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದು ಕಡಿಮೆ ಕ್ಯಾಲೊರಿಗಳನ್ನು ಹೊಂದಿದ್ದು, ಪೋಷಕಾಂಶಗಳಿಂದ ಸಮೃದ್ಧವಾಗಿದೆ.
(4 / 10)
ಸಾಸಿವೆ ಸೊಪ್ಪಿನಲ್ಲಿ ವಿಟಮಿನ್ ಎ, ಕೆ ಮತ್ತು ಕಬ್ಬಿಣ, ಜೊತೆಗೆ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದರಲ್ಲಿ ವಿಟಮಿನ್ ಕೆ ಅಧಿಕವಾಗಿದ್ದು, ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಮೂಳೆಗಳು ಗಟ್ಟಿಯಾಗಿರಲು ಕೂಡ ಸಹಕಾರಿ. ಅಲ್ಲದೆ ಇದು ದೇಹದಲ್ಲಿ ಕ್ಯಾನ್ಸರ್ ಗೆಡ್ಡೆ ರೂಪುಗೊಳ್ಳದಂತೆ ತಡೆಯುತ್ತದೆ.
(5 / 10)
ಚಳಿಗಾಲದ ತಿಂಗಳುಗಳಲ್ಲಿ ಮೆಂತ್ಯ ಸೊಪ್ಪನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ. ಇದು ಮಧುಮೇಹಿಗಳಿಗೆ ಮಾತ್ರವಲ್ಲದೆ ಹೃದ್ರೋಗಿಗಳಿಗೂ ಪ್ರಯೋಜನಕಾರಿಯಾಗಿದೆ. ಮೆಂತ್ಯ ಸೊಪ್ಪಿನಲ್ಲಿ ವಿಟಮಿನ್ ಎ, ಸಿ, ಇ, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಪ್ರೋಟೀನ್ ಮತ್ತು ಫೈಬರ್‌ನಲ್ಲಿ ಸಮೃದ್ಧವಾಗಿದೆ. ಅಲ್ಲದೆ ಮೆಂತ್ಯ ಸೊಪ್ಪು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದ್ದು, ಜೀರ್ಣಕ್ರಿಯೆಗೂ ಸಹಕಾರಿಯಾಗಿದೆ.
(6 / 10)
ಅಮರಂಥ್ ಎಲೆ ಎಂದು ಕರೆಯಲ್ಪಡುವ ಈ ಹರಿವೆ ಸೊಪ್ಪು ಪೋಷಕಾಂಶಗಳ ಶಕ್ತಿ ಕೇಂದ್ರವಾಗಿದೆ. ಇದರ ಎಲೆಗಳು ಹಸಿರು, ನೇರಳೆ ಅಥವಾ ಕೆಂಪು ಬಣ್ಣದ್ದಾಗಿದ್ದು, ಈ ಸೊಪ್ಪು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿಯೋ ಅಷ್ಟೇ ರುಚಿಕರವೂ ಹೌದು. ಚಳಿಗಾಲದಲ್ಲಿ ಮಲಬದ್ಧತೆಯಿಂದ ಬಳಲುತ್ತಿರುವವರು ಈ ಸೊಪ್ಪಿನ ಖಾದ್ಯ ಸೇವಿಸುವುದರಿಂದ ಪರಿಹಾರ ಪಡೆಯಬಹುದು. ಕರುಳಿನ ಆರೋಗ್ಯಕ್ಕೂ ಇದು ಪ್ರಯೋಜನಕಾರಿಯಾಗಿದೆ.
(7 / 10)
ಪಾಲಕ್ ಸೊಪ್ಪಿನ ಖಾದ್ಯ ಅಥವಾ ಸಲಾಡ್ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ. ಕ್ಯಾಲ್ಸಿಯಂ ಮತ್ತು ಕಬ್ಬಿಣದ ಜೊತೆಗೆ, ಪ್ರೋಟೀನ್‍ನಿಂದ ಪಾಲಕ್ ಸೊಪ್ಪು ಸಮೃದ್ಧವಾಗಿದೆ. ಪಾಲಕ್ ಸೊಪ್ಪಿನಲ್ಲಿ ಆಂಟಿಆಕ್ಸಿಡೆಂಟ್, ವಿಟಮಿನ್, ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಫಾಲಿಕ್ ಆಮ್ಲ ಇದ್ದು, ಇವು ಹೃದಯದ ಆರೋಗ್ಯಕ್ಕೆ ತುಂಬಾ ಸಹಕಾರಿ. ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಪಾಲಕ್ ಸೇವಿಸುವುದು ಅತ್ಯಗತ್ಯ.
(8 / 10)
ಮೂಲಂಗಿಗಿಂತ ಮೂಲಂಗಿ ಸೊಪ್ಪು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ. ಅವುಗಳಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್‍ಗಳು, ಸೋಡಿಯಂ, ಕಬ್ಬಿಣ, ಮೆಗ್ನೀಸಿಯಮ್, ವಿಟಮಿನ್ ಎ, ಬಿ ಮತ್ತು ಸಿ ನಂತಹ ಪೋಷಕಾಂಶಗಳಿವೆ. ಇದು ದೇಹವನ್ನು ಅನೇಕ ರೋಗಗಳಿಂದ ದೂರವಿರಿಸಲು ಸಹಾಯ ಮಾಡುತ್ತದೆ.
(9 / 10)
ಗಮನಿಸಿ: ಈ ಮಾಹಿತಿಯು ಸಾಮಾನ್ಯ ಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ.
(Canva)ಇತರ ಗ್ಯಾಲರಿಗಳು