Shivamogga Airport: ಮಲೆನಾಡು ಭಾಗದ ಜನರ ಕನಸು ಈಡೇರಿದೆ: ಶಿವಮೊಗ್ಗ ವಿಮಾನ ನಿಲ್ದಾಣದ ಫೋಟೋ ಹಂಚಿಕೊಂಡ ಬಿಎಸ್‌ವೈ
- ಬೆಂಗಳೂರು: ನಾಳೆ(ಫೆ. 27-ಸೋಮವಾರ) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈ ವಿಮಾನ ನಿಲ್ದಾಣದ ಫೋಟೋಗಳನ್ನು ತಮ್ಮ ಅಧಿಕೃತ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಕುರರಿತು ಇಲ್ಲಿದೆ ಮಾಹಿತಿ..

(1 / 5)
''ಶಿವಮೊಗ್ಗದ ವಿಮಾನ ನಿಲ್ದಾಣವು ಮಲೆನಾಡು ಭಾಗದ ಜನರ ಕನಸು ನನಸಾಗಿದೆ. ಇದು ಸಂಪರ್ಕ, ಪ್ರವಾಸೋದ್ಯಮ, ಉದ್ಯಮ ಮತ್ತು ಕರ್ನಾಟಕದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ದಾಖಲೆ ಸಮಯದಲ್ಲಿ ಪೂರ್ಣಗೊಂಡಿರುವ ವಿಮಾನ ನಿಲ್ದಾಣವನ್ನು ನಮ್ಮ ಗೌರವಾನ್ವಿತ ಪ್ರಧಾನಮಂತ್ರಿ ನರೇದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. '' ಎಂದು ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.(Verified Twitter)
(2 / 5)
ನಿನ್ನೆ(ಫೆ.25-ಶನಿವಾರ)ಯಷ್ಟೇ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ್ದ ಬಿಎಸ್‌ವೈ, ಇದೀಗ ಉದ್ಘಾಟನೆಗೆ ಸಜ್ಜಾಗಿರುವ ವಿಮಾನ ನಿಲ್ದಾಣದ ವಿಹಂಗಮ ನೋಟವನ್ನು ರಾಜ್ಯದ ಜನರಿಗೆ ತೋರಿಸಿದ್ದಾರೆ.(Verified Twitter)
(3 / 5)
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವಾಗಬೇಕು ಎಂಬುದು ಮಲೆನಾಡು ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಈ ಭಾಗದ ಜನರ ಕನಸು ಇದೀಗ ನನಸಾಗುತ್ತಿದ್ದು, ಪ್ರಧಾನಿ ಮೋದಿ ಅವರಿಂದ ಈ ವಿಮಾನ ನಿಲ್ದಾಣ ಉದ್ಘಾಟನೆಯಾಗುತ್ತಿರುವುದು ಅತ್ಯಂತ ಸಂತಸದ ಸಂಗತಿ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.(Verified Twitter)
(4 / 5)
ನಾಳೆ (ಫೆ. 27-ಸೋಮವಾರ) ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿ ಶಿವಮೊಗ್ಗಕ್ಕೆ ಬರಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಭದ್ರತಾ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.(Verified Twitter)
ಇತರ ಗ್ಯಾಲರಿಗಳು