Kannada News  /  Photo Gallery  /  Former Cm Hd Kumaraswamy Urges Minorities To Support Jds In Next Assembly Election

HD Kumaraswamy: ಐದು ವರ್ಷದಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಮರುಸ್ಥಾಪನೆ: ಎಚ್‌ಡಿಕೆ ಭರವಸೆ!

18 September 2022, 22:06 IST Nikhil Kulkarni
18 September 2022, 22:06 , IST

ಕೋಲಾರ: ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಮತ್ತು ಸರ್ವ ಜನಾಂಗದ ಶಾಂತಿಯ ತೋಟವನ್ನು ಉಳಿಸಿಕೊಳ್ಳಲು, ಜೆಡಿಎಸ್‌ ಪಕ್ಷಕ್ಕೆ ಪೂರ್ಣಾವಧಿ ಅಧಿಕಾರ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ. ಕೋಲಾರದಲ್ಲಿ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಎಚ್‌ಡಿಕೆ, ರಾಜ್ಯದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಜೆಡಿಎಸ್‌ ಬದ್ಧವಾಗಿದೆ ಎಂದು ಹೇಳಿದರು. ಎಚ್‌ಡಿ ಕುಮಾರಸ್ವಾಮಿ ಅವರ ಭಾಷಣದ ಸಾರಾಂಶವನ್ನು ನೋಡುವುದಾದರೆ...

ರಾಜ್ಯ ಬಿಜೆಪಿ ಸರ್ಕಾರ ಕೋಮುಗಳ ನಡುವೆ ದ್ವೇಷ ಭಾವನೆ ಬಿತ್ತುತ್ತಿದೆ. ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಜೆಡಿಎಸ್‌ ರಾಜ್ಯದ ಕೋಮು ಸೌಹಾರ್ದತೆ ಕಾಪಾಡಲು ಶ್ರಮಿಸುತ್ತಿದ್ದು, ಅಲ್ಪಸಂಖ್ಯಾತ ಮತದಾರರು ಈ ಬಾರಿ ಸಂಪೂರ್ಣವಾಗಿ ಜೆಡಿಎಸ್‌ನ್ನು ಬೆಂಬಲಿಸುವ ವಿಶ್ವಾಸ ಇದೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದರು.

(1 / 5)

ರಾಜ್ಯ ಬಿಜೆಪಿ ಸರ್ಕಾರ ಕೋಮುಗಳ ನಡುವೆ ದ್ವೇಷ ಭಾವನೆ ಬಿತ್ತುತ್ತಿದೆ. ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಜೆಡಿಎಸ್‌ ರಾಜ್ಯದ ಕೋಮು ಸೌಹಾರ್ದತೆ ಕಾಪಾಡಲು ಶ್ರಮಿಸುತ್ತಿದ್ದು, ಅಲ್ಪಸಂಖ್ಯಾತ ಮತದಾರರು ಈ ಬಾರಿ ಸಂಪೂರ್ಣವಾಗಿ ಜೆಡಿಎಸ್‌ನ್ನು ಬೆಂಬಲಿಸುವ ವಿಶ್ವಾಸ ಇದೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದರು.(Verified Twitter)

ಜೆಡಿಎಸ್‌ ಪಕ್ಷಕ್ಕೆ ಐದು ವರ್ಷಗಳ ಅಧಿಕಾರ ನೀಡಿದರೆ, ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇವೆ. ರಾಜ್ಯದ ಸರ್ವ ಜನಾಂಗದ ಶಾಂತಿಯ ತೋಟವನ್ನು ರಕ್ಷಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಭರವಸೆ ನೀಡಿದರು.

(2 / 5)

ಜೆಡಿಎಸ್‌ ಪಕ್ಷಕ್ಕೆ ಐದು ವರ್ಷಗಳ ಅಧಿಕಾರ ನೀಡಿದರೆ, ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇವೆ. ರಾಜ್ಯದ ಸರ್ವ ಜನಾಂಗದ ಶಾಂತಿಯ ತೋಟವನ್ನು ರಕ್ಷಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಭರವಸೆ ನೀಡಿದರು.(Verified Twitter)

ಅಲ್ಪಸಂಖ್ಯಾತ ಅದರಲ್ಲೂ ಮುಸ್ಲಿಂ ಸಮುದಾಯ ಸದ್ಯ ಆತಂಕದ ಪರಿಸ್ಥಿತಿಯಲ್ಲಿ ಬದುಕುತ್ತಿದೆ. ಮುಸ್ಲಿಂ ಸಮುದಾಯಕ್ಕೆ ತೊಂದರೆ ಎದುರಾದಾಗಲೆಲ್ಲಾ, ಜೆಡಿಎಸ್‌ ಆ ಸಮುದಾಯದೊಂದಿಗೆ ಗಟ್ಟಿಯಾಗಿ ನಿಂತಿದೆ. ಕೆಲವರು ನಮ್ಮ ಪಕ್ಷವನ್ನು ಬಿಜೆಪಿಯ ಬಿ ಟೀಂ ಎಂದು ಕರೆಯುವ ಮೂಲಕ, ಅಲ್ಪಸಂಖ್ಯಾತರ ದಿಕ್ಕು ತಪ್ಪಿಸುತ್ತಿದ್ದಾರೆ. ಮುಸ್ಲಿಂ ಸಮುದಾಯ ಇವರ ಕುತಂತ್ರಗಳಿಗೆ ಬಲಿಯಾಗಬಾರದು ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಮೇಲೆ ಎಚ್‌ಡಿಕೆ ಕಿಡಿಕಾರಿದರು.

(3 / 5)

ಅಲ್ಪಸಂಖ್ಯಾತ ಅದರಲ್ಲೂ ಮುಸ್ಲಿಂ ಸಮುದಾಯ ಸದ್ಯ ಆತಂಕದ ಪರಿಸ್ಥಿತಿಯಲ್ಲಿ ಬದುಕುತ್ತಿದೆ. ಮುಸ್ಲಿಂ ಸಮುದಾಯಕ್ಕೆ ತೊಂದರೆ ಎದುರಾದಾಗಲೆಲ್ಲಾ, ಜೆಡಿಎಸ್‌ ಆ ಸಮುದಾಯದೊಂದಿಗೆ ಗಟ್ಟಿಯಾಗಿ ನಿಂತಿದೆ. ಕೆಲವರು ನಮ್ಮ ಪಕ್ಷವನ್ನು ಬಿಜೆಪಿಯ ಬಿ ಟೀಂ ಎಂದು ಕರೆಯುವ ಮೂಲಕ, ಅಲ್ಪಸಂಖ್ಯಾತರ ದಿಕ್ಕು ತಪ್ಪಿಸುತ್ತಿದ್ದಾರೆ. ಮುಸ್ಲಿಂ ಸಮುದಾಯ ಇವರ ಕುತಂತ್ರಗಳಿಗೆ ಬಲಿಯಾಗಬಾರದು ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಮೇಲೆ ಎಚ್‌ಡಿಕೆ ಕಿಡಿಕಾರಿದರು.(Verified Twitter)

ಅಲ್ಪಸಂಖ್ಯಾತ ಸಮಾವೇಶದ ಬಳಿಕ ಕೋಲಾರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್‌ಡಿಕೆ, ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. (ಸಂಗ್ರಹ ಚಿತ್ರ)

(4 / 5)

ಅಲ್ಪಸಂಖ್ಯಾತ ಸಮಾವೇಶದ ಬಳಿಕ ಕೋಲಾರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್‌ಡಿಕೆ, ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. (ಸಂಗ್ರಹ ಚಿತ್ರ)(HT_PRINT)

ಇಬ್ಬರು ರೋಗಿಗಳ ಸಾವಿನ ಬಗ್ಗೆ ಸರಕಾರವು ವಾಸ್ತವಾಂಶಗಳನ್ನು ಸ್ಪಷ್ಟಪಡಿಸಿಲ್ಲ. ನೈತಿಕತೆ ಇದ್ದಿದ್ದರೆ ಆರೋಗ್ಯ ಸಚಿವರು ಬಳ್ಳಾರಿಯ ಆಸ್ಪತ್ರೆಗೆ ಮೊದಲು ಹೋಗಬೇಕಿತ್ತು. ಅವರು ಹೋಗಲಿಲ್ಲ, ಅವರು ಬೆಂಗಳೂರಿನಲ್ಲಿ ಇದ್ದುಕೊಂಡೇ ಮಾತನಾಡುತ್ತಿದ್ದರು. ಇನ್ನು; ನಮಗೆ ಕೆಟ್ಟ ಹೆಸರು ತರಬೇಕು ಎಂದು ಕೆಲವರು ಷಡ್ಯಂತ್ರ ನಡೆಸಿ ಹೀಗೆ ಮಾಡಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕರು ಹೇಳುತ್ತಿದ್ದಾರೆ. ಈಗ ತನಿಖಾ ತಂಡವನ್ನು ಕಳಿಸುತ್ತೇನೆ ಅಂತಿದ್ದಾರೆ ಸಚಿವರು. ಜನತೆಗೆ ಸತ್ಯ ಹೇಳಲು ಎಷ್ಟು ದಿನ ಬೇಕು? ಆರೋಗ್ಯ ಸಚಿವರೇ ಇದರ ನೈತಿಕಹೊಣೆ ಒಪ್ಪಿಕೊಳ್ಳಬೇಕು ಎಂದು ಎಚ್‌ಡಿ ಕುಮಾರಸ್ವಾಮಿ ಗುಡುಗಿದರು. (ಸಂಗ್ರಹ ಚಿತ್ರ)

(5 / 5)

ಇಬ್ಬರು ರೋಗಿಗಳ ಸಾವಿನ ಬಗ್ಗೆ ಸರಕಾರವು ವಾಸ್ತವಾಂಶಗಳನ್ನು ಸ್ಪಷ್ಟಪಡಿಸಿಲ್ಲ. ನೈತಿಕತೆ ಇದ್ದಿದ್ದರೆ ಆರೋಗ್ಯ ಸಚಿವರು ಬಳ್ಳಾರಿಯ ಆಸ್ಪತ್ರೆಗೆ ಮೊದಲು ಹೋಗಬೇಕಿತ್ತು. ಅವರು ಹೋಗಲಿಲ್ಲ, ಅವರು ಬೆಂಗಳೂರಿನಲ್ಲಿ ಇದ್ದುಕೊಂಡೇ ಮಾತನಾಡುತ್ತಿದ್ದರು. ಇನ್ನು; ನಮಗೆ ಕೆಟ್ಟ ಹೆಸರು ತರಬೇಕು ಎಂದು ಕೆಲವರು ಷಡ್ಯಂತ್ರ ನಡೆಸಿ ಹೀಗೆ ಮಾಡಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕರು ಹೇಳುತ್ತಿದ್ದಾರೆ. ಈಗ ತನಿಖಾ ತಂಡವನ್ನು ಕಳಿಸುತ್ತೇನೆ ಅಂತಿದ್ದಾರೆ ಸಚಿವರು. ಜನತೆಗೆ ಸತ್ಯ ಹೇಳಲು ಎಷ್ಟು ದಿನ ಬೇಕು? ಆರೋಗ್ಯ ಸಚಿವರೇ ಇದರ ನೈತಿಕಹೊಣೆ ಒಪ್ಪಿಕೊಳ್ಳಬೇಕು ಎಂದು ಎಚ್‌ಡಿ ಕುಮಾರಸ್ವಾಮಿ ಗುಡುಗಿದರು. (ಸಂಗ್ರಹ ಚಿತ್ರ)(HT_PRINT)

ಇತರ ಗ್ಯಾಲರಿಗಳು