Manmohan Singh Death: ಮಾಜಿ ಪ್ರಧಾನಿ, ಹಿರಿಯ ಕಾಂಗ್ರೆಸ್ ಮುಖಂಡ ಮನಮೋಹನ್ ಸಿಂಗ್ ಎಲ್ಲಿಯವರು, ಓದಿದ್ದೇನು?
- ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ವಯಸ್ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಗುರುವಾರ (ಡಿ. 26) ರಾತ್ರಿ 9.50ರ ಸುಮಾರಿಗೆ ದೆಹಲಿಯ ಏಮ್ಸ್‌ನಲ್ಲಿ ನಿಧನರಾಗಿದ್ದಾರೆ. 92 ವರ್ಷ ವಯಸ್ಸಿನ ಮನಮೋಹನ್ ಸಿಂಗ್, ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು.

(1 / 6)
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ವಯಸ್ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಗುರುವಾರ (ಡಿ. 26) ರಾತ್ರಿ 8 ಗಂಟೆ ಸುಮಾರಿಗೆ ದೆಹಲಿಯ ಏಮ್ಸ್‌ನಲ್ಲಿ ನಿಧನರಾಗಿದ್ದಾರೆ.
(2 / 6)
92 ವರ್ಷ ವಯಸ್ಸಿನ ಮನಮೋಹನ್ ಸಿಂಗ್, ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.
(3 / 6)
ಮನಮೋಹನ್ ಸಿಂಗ್ 1932ರ ಸೆಪ್ಟೆಂಬರ್ 26ರಂದು ಪಂಜಾಬ್ ಪ್ರಾಂತ್ಯದ ಗಾಹ್ ಎಂಬ ಹಳ್ಳಿಯಲ್ಲಿ ಜನಿಸಿದ್ದರು. ಈಗ ಈ ಪ್ರದೇಶ ಪಾಕಿಸ್ತಾನದಲ್ಲಿದೆ. 1947ರಲ್ಲಿ ಭಾರತ ಮತ್ತು ಪಾಕಿಸ್ತಾನ ವಿಭಜನೆ ಬಳಿಕ ಸಿಂಗ್ ಕುಟುಂಬವು ಭಾರತಕ್ಕೆ ವಲಸೆ ಬಂದಿತ್ತು.
(4 / 6)
ಚಿಕ್ಕಂದಿನಿಂದಲೂ ವಿದ್ಯಾಭ್ಯಾಸದಲ್ಲಿ ಮುಂದಿದ್ದ ಮನಮೋಹನ್ ಸಿಂಗ್, ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರ ವಿಷಯದಲ್ಲಿ ಪದವಿ ಪಡೆದಿದ್ದಾರೆ. ಶೈಕ್ಷಣಿಕವಾಗಿಯೂ ಸಾಕಷ್ಟು ಓದಿಕೊಂಡಿದ್ದಾರೆ.
(5 / 6)
ಬಳಿಕ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಅಧ್ಯಯನವನ್ನು ಮಾಡಿ, 1957 ರಲ್ಲಿ ಅರ್ಥಶಾಸ್ತ್ರದಲ್ಲಿ ಪದವಿ ಪಡೆದರು. 1962 ರಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಡಾಕ್ಟರ್ ಆಫಿ ಫಿಲಾಸಫಿ ಪಡೆದರು.
ಇತರ ಗ್ಯಾಲರಿಗಳು