ವಿಜಯ್ ಹಜಾರೆ ಟ್ರೋಫಿ: ಕರ್ನಾಟಕ vs ಹರಿಯಾಣ ಸೆಮಿಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ವಿವರ
- ವಿಜಯ್ ಹಜಾರೆ ಟ್ರೋಫಿಯ ಸೆಮಿಫೈನಲ್ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದ್ದು, ಮೊದಲ ಸೆಮಿಫೈನಲ್‌ನಲ್ಲಿ ಕರ್ನಾಟಕ ಮತ್ತು ಹರಿಯಾಣ ತಂಡಗಳು ಸೆಣಸಲಿವೆ. 50 ಓವರ್ ಸ್ವರೂಪದಲ್ಲಿ ಉಭಯ ತಂಡಗಳು ಈವರೆಗೆ ಉತ್ತಮ ಪ್ರದರ್ಶನ ನೀಡಿವೆ. ಜನವರಿ 18ರ ಶನಿವಾರ ಫೈನಲ್ ಪಂದ್ಯ ನಡೆಯುತ್ತಿದ್ದು, ಭರ್ಜರಿ ಫಾರ್ಮ್‌ನಲ್ಲಿರುವ ಕರ್ನಾಟಕ ಫೈನಲ್ ಪ್ರವೇಶಿಸುವ ನಿರೀಕ್ಷೆಯಲ್ಲಿದೆ.

(1 / 9)
ಆಡಿದ ಏಳು ಪಂದ್ಯಗಳಲ್ಲಿ ಆರು ಗೆಲುವುಗಳೊಂದಿಗೆ ಹರಿಯಾಣ 'ಎ' ಗುಂಪಿನಲ್ಲಿ ಸ್ಥಾನ ಪಡೆದರೆ, ಮಯಾಂಕ್ ಅಗರ್ವಾಲ್ ನೇತೃತ್ವದ ಕರ್ನಾಟಕ ತಂಡವು 24 ಅಂಕಗಳೊಂದಿಗೆ 'ಸಿ' ಗುಂಪಿನಲ್ಲಿ ಅಗ್ರಸ್ಥಾನ ಪಡೆದು ನಾಕೌಟ್ ಪ್ರವೇಶಿಸಿತು.
(3 / 9)
ನಾಯಕ ಮಯಾಂಕ್ ಅಗರ್ವಾಲ್ ಈಗಾಗಲೇ ಟೂರ್ನಿಯಲ್ಲಿ ನಾಲ್ಕು ಶತಕಗಳನ್ನು ಬಾರಿಸಿದ್ದಾರೆ. ಶ್ರೇಯಸ್ ಗೋಪಾಲ್ ಮತ್ತು ವಿ ಕೌಶಿಕ್ ಅವರು ಕರ್ನಾಟಕ ಪರ ಉತ್ತಮ ಪ್ರದರ್ಶನ ನೀಡಿದ್ದು, ಹರಿಯಾಣ ವಿರುದ್ಧ ಸೆಮಿಫೈನಲ್ ಪಂದ್ಯ ಗೆಲ್ಲುವ ಫೇವರಿಟ್ ಎನಿಸಿದೆ.
(4 / 9)
ಹರಿಯಾಣ ಮತ್ತು ಕರ್ನಾಟಕ ತಂಡಗಳ ನಡುವಿನ ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ ಪಂದ್ಯವು ಜನವರಿ 15ರ ಬುಧವಾರ ಮಧ್ಯಾಹ್ನ 1:30ಕ್ಕೆ ನಡೆಯಲಿದೆ.
(X)(5 / 9)
ಹರಿಯಾಣ ಮತ್ತು ಕರ್ನಾಟಕ ನಡುವಿನ ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ ಪಂದ್ಯವನ್ನು ಸ್ಪೋರ್ಟ್ಸ್ 18 ನೆಟ್ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
(PTI)(6 / 9)
ಹರಿಯಾಣ vs ಕರ್ನಾಟಕ ನಡುವಿನ ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ ಪಂದ್ಯದ ನೇರ ಪ್ರಸಾರವು ಜಿಯೋಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.
(Instagram)(8 / 9)
ಕ್ವಾರ್ಟರ್ ಫೈನಲ್‌ನಲ್ಲಿ ಹರಿಯಾಣ ತಂಡ ಗುಜರಾತ್ ವಿರುದ್ಧ 197 ರನ್‌ಗಳ ಗುರಿ ಬೆನ್ನಟ್ಟಿ 2 ವಿಕೆಟ್‌ಗಳಿಂದ ಗೆದ್ದಿತು.
ಇತರ ಗ್ಯಾಲರಿಗಳು