ಈ 5 ಆಹಾರಗಳು ಮಧುಮೇಹಿಗಳಿಗೆ ವರದಾನ, ಸಕ್ಕರೆ ಕಾಯಿಲೆ ಇರುವವರು ಭಯವಿಲ್ಲದೇ ತಿನ್ನಬಹುದು
ಮಧುಮೇಹಿಗಳು ತಾವು ಸೇವಿಸುವ ಆಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇವರ ಆಹಾರದಲ್ಲಿ ಕೊಂಚ ವ್ಯತ್ಯಾಸವಾದ್ರೂ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಏರಿಕೆಯಾಗುತ್ತದೆ. ಮಧುಮೇಹ ಅತಿಯಾದ್ರೆ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಆದರೆ ಈ 5 ಆಹಾರಗಳು ಮಧುಮೇಹಿಗಳಿಗೆ ವರದಾನ, ಇವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಿಸಿ ಆರೋಗ್ಯ ಕಾಪಾಡುತ್ತವೆ.
(1 / 9)
ಮಧುಮೇಹವು ಜೀವನಶೈಲಿಗೆ ಸಂಬಂಧಿತ ಕಾಯಿಲೆಯಾಗಿದ್ದು, ದೇಹದಲ್ಲಿ ಇನ್ಸುಲಿನ್ ಹಾರ್ಮೋನ್ ಕೊರತೆಯಿಂದ ಅಥವಾ ಇನ್ಸುಲಿನ್ ಅನ್ನು ಸರಿಯಾಗಿ ಬಳಸಲು ದೇಹವು ಅಸಮರ್ಥವಾದಾಗ ಉಂಟಾಗುತ್ತದೆ. ಮಧುಮೇಹಿಗಳಲ್ಲಿ ಮೇದೋಜ್ಜೀರಕ ಗ್ರಂಥಿಯು ಸಾಕಷ್ಟು ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸುವುದಿಲ್ಲ. ಇದು ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸುವ ದೇಹದ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ. ಮಧುಮೇಹದಿಂದ ಬಳಲುತ್ತಿರುವ ವ್ಯಕ್ತಿಯು ಹೃದಯಾಘಾತ, ಪಾರ್ಶ್ವವಾಯು ಮತ್ತು ಕಾಲುಗಳಲ್ಲಿ ರಕ್ತದ ಹರಿವು ಕಡಿಮೆಯಾಗುವಂತಹ ಸಮಸ್ಯೆಗಳನ್ನು ಎದುರಿಸಬಹುದು.(shutterstock)
(2 / 9)
ಮಧುಮೇಹದಿಂದ ಬಳಲುತ್ತಿರುವ ವ್ಯಕ್ತಿಯು ಆಗಾಗ ಮೂತ್ರ ವಿಸರ್ಜನೆ, ಅತಿಯಾದ ಬಾಯಾರಿಕೆ, ನಿರ್ಜಲೀಕರಣ, ಹಸಿವು ಹೆಚ್ಚುವುದು, ತೂಕ ನಷ್ಟ, ಆಯಾಸ, ತಲೆತಿರುಗುವಿಕೆ, ಗಾಯಗಳು ನಿಧಾನವಾಗಿ ಗುಣವಾಗುವುದು, ಸೋಂಕು ಅಥವಾ ಚರ್ಮದ ಸಮಸ್ಯೆಗಳು, ವಾಕರಿಕೆ ಮತ್ತು ವಾಂತಿ ಮತ್ತು ದೃಷ್ಟಿ ಮಂದವಾಗಬಹುದು ಇಂತಹ ರೋಗಲಕ್ಷಣಗಳನ್ನು ಎದುರಿಸಬೇಕಾಗಬಹುದು. (shutterstock)
(3 / 9)
ಆ ಕಾರಣಕ್ಕೆ ಮಧುಮೇಹಿಗಳು ಆಹಾರದ ವಿಚಾರದಲ್ಲಿ ಕಟ್ಟುನಿಟ್ಟಾಗಿ ಇರಬೇಕು. ಈ ಕೆಲವು ಆಹಾರಗಳು ಮಧುಮೇಹಿಗಳಿಗೆ ವರದಾನವಾಗಿದೆ. ಇವು ಮಧುಮೇಹವನ್ನು ನಿಯಂತ್ರಣದಲ್ಲಿಡಲು ಪ್ರಯೋಜನಕಾರಿ. ಈ ಪಟ್ಟಿಯಲ್ಲಿ ಮೊದಲ ಹೆಸರು ಪೇರಳೆ. ನಾರಿನಾಂಶ ಸಮೃದ್ಧ ಪೇರಳೆ ಹಣ್ಣು ಕಾರ್ಬೋಹೈಡ್ರೇಟ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಪೇರಲೆಯು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ ಮತ್ತು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.(shutterstock)
(4 / 9)
ಅಗಸೆ ಬೀಜ: ನಾರಿನಾಂಶ, ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಲಿಗ್ನಾನ್ ಅಗಸೆ ಬೀಜಗಳಲ್ಲಿ ಹೇರಳವಾಗಿ ಕಂಡುಬರುತ್ತವೆ. ಈ ಎಲ್ಲಾ ಅಂಶಗಳು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.(shutterstock)
(5 / 9)
ಬೆಂಡೆಕಾಯಿ: ಬೆಂಡೆಕಾಯಿಯಲ್ಲಿರುವ ಅನೇಕ ಗುಣಲಕ್ಷಣಗಳು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆಂಡೆಕಾಯಿಯಲ್ಲಿರುವ ಕರಗುವ ಮತ್ತು ಕರಗದ ನಾರುಗಳು ಜೀರ್ಣಿಸಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ, ಇದು ರಕ್ತದಲ್ಲಿನ ಸಕ್ಕರೆಯನ್ನು ನಿಧಾನಗೊಳಿಸುತ್ತದೆ. ಬೆಂಡೆಕಾಯಿ ಕರುಳಿನಲ್ಲಿ ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ಬೆಂಡೆಕಾಯಿಯಲ್ಲಿರುವ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಉತ್ತಮವೆಂದು ಪರಿಗಣಿಸಲಾಗಿದೆ. ನಿಯಮಿತವಾಗಿ ನಿಮ್ಮ ಆಹಾರದಲ್ಲಿ ಬೆಂಡೆಕಾಯಿಯನ್ನು ಸೇರಿಸುವುದು ಮಧುಮೇಹವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ.(shutterstock)
(6 / 9)
ನೇರಳೆಹಣ್ಣು: ಜಾಮೂನ್ ಬೀಜಗಳು ಗ್ಲುಕೋಸೈಡ್, ಜಾಂಬೋಲಿನ್ ಮತ್ತು ಎಲಾಜಿಕ್ ಆಮ್ಲದಂತಹ ಗುಣಲಕ್ಷಣಗಳನ್ನು ಹೊಂದಿರುತ್ತವೆ, ಇದು ಗ್ಲೂಕೋಸನ್ ಅಧಿಕ ಉತ್ಪಾದನೆಯ ಸಂದರ್ಭದಲ್ಲಿ ಪಿಷ್ಟವನ್ನು ಸಕ್ಕರೆಯಾಗಿ ಪರಿವರ್ತಿಸುವುದನ್ನು ತಡೆಯುವ ಸಾಮರ್ಥ್ಯವನ್ನು ಹೊಂದಿದೆ. ಈ ಕಾರಣದಿಂದಾಗಿ, ದೇಹದಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲಾಗುತ್ತದೆ.(shutterstock)
(7 / 9)
ಬಾರ್ಲಿ: ಬಾರ್ಲಿಯಲ್ಲಿಯೂ ನಾರಿನಾಂಶ ಹೇರಳವಾಗಿರುತ್ತದೆ. ಇದು ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ಇದರಲ್ಲಿ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವಿದೆ. ಹಾಗಾಗಿ ಇದು ಮಧುಮೇಹ ನಿಯಂತ್ರಣಕ್ಕೆ ಸಹಕಾರಿ. (shutterstock)
(8 / 9)
ಗಮನಿಸಿ: ಈ ಮಾಹಿತಿಯು ಸಾಮಾನ್ಯಜ್ಞಾನವನ್ನು ಆಧರಿಸಿದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ತಜ್ಞರನ್ನು ಸಂಪರ್ಕಿಸಿ.
ಇತರ ಗ್ಯಾಲರಿಗಳು