ಚಳಿಗಾಲದಲ್ಲಿ ಬೆಳ್ಳುಳ್ಳಿ ಹೆಚ್ಚು ತಿನ್ಬೇಕು ಅನ್ನೋದಕ್ಕೆ ಕಾರಣವೇನು, ಇದರ ಆರೋಗ್ಯ ಪ್ರಯೋಜನಗಳು ಹೀಗಿವೆ
- ಭಾರತೀಯ ಅಡುಗೆಮನೆಯಲ್ಲಿ ಅಗ್ರಸ್ಥಾನ ಪಡೆದಿರುವ ಬೆಳ್ಳುಳ್ಳಿ ರುಚಿಗಷ್ಟೇ ಅಲ್ಲ ಆರೋಗ್ಯಕ್ಕೂ ಉತ್ತಮ. ಚಳಿಗಾಲದಲ್ಲಿ ಅಧಿಕ ಪ್ರಮಾಣದಲ್ಲಿ ಬೆಳ್ಳುಳ್ಳಿ ತಿನ್ನಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಬೆಳ್ಳುಳ್ಳಿಯಲ್ಲಿರುವ ಪೋಷಕಾಂಶಗಳು ಚಳಿಗಾಲಕ್ಕೆ ಅತ್ಯವಶ್ಯ.
- ಭಾರತೀಯ ಅಡುಗೆಮನೆಯಲ್ಲಿ ಅಗ್ರಸ್ಥಾನ ಪಡೆದಿರುವ ಬೆಳ್ಳುಳ್ಳಿ ರುಚಿಗಷ್ಟೇ ಅಲ್ಲ ಆರೋಗ್ಯಕ್ಕೂ ಉತ್ತಮ. ಚಳಿಗಾಲದಲ್ಲಿ ಅಧಿಕ ಪ್ರಮಾಣದಲ್ಲಿ ಬೆಳ್ಳುಳ್ಳಿ ತಿನ್ನಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಬೆಳ್ಳುಳ್ಳಿಯಲ್ಲಿರುವ ಪೋಷಕಾಂಶಗಳು ಚಳಿಗಾಲಕ್ಕೆ ಅತ್ಯವಶ್ಯ.
(1 / 9)
ಬೆಳುಳ್ಳಿಯನ್ನು ಸಾಮಾನ್ಯವಾಗಿ ಬಹುತೇಕ ಎಲ್ಲಾ ರೀತಿಯ ಅಡುಗೆಗಳಿಗೂ ಬಳಸಲಾಗುತ್ತದೆ. ಇದಕ್ಕೆ ಆಯುರ್ವೇದದಲ್ಲೂ ವಿಶೇಷ ಮಹತ್ವವಿದೆ. ಬೆಳ್ಳುಳ್ಳಿ ತಿನ್ನುವುದರಿಂದ ಆರೋಗ್ಯಕ್ಕೂ ಹಲವು ರೀತಿಯ ಪ್ರಯೋಜನಗಳಿವೆ. ಅದರಲ್ಲೂ ಚಳಿಗಾಲದಲ್ಲಿ ಬೆಳ್ಳುಳ್ಳಿಯನ್ನು ವಿಶೇಷವಾಗಿ ಹೆಚ್ಚು ತಿನ್ನಬೇಕು ಎಂದು ಸಲಹೆ ನೀಡಲಾಗುತ್ತದೆ. ಅದಕ್ಕೆ ಕಾರಣವೇನು ನೋಡಿ.
(2 / 9)
ಚಳಿಗಾಲದಲ್ಲಿ ಬರುವ ರೋಗಗಳಿಂದ ದೂರವಿರಲು ಬಲವಾದ ರೋಗನಿರೋಧಕ ಶಕ್ತಿಯನ್ನು ಹೊಂದಿರುವುದು ಬಹಳ ಮುಖ್ಯ. ಬೆಳ್ಳುಳ್ಳಿ ಇದಕ್ಕೆ ಉಪಯುಕ್ತವಾಗಿದೆ. ಬೆಳ್ಳುಳ್ಳಿ ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.
(3 / 9)
ಬೆಳ್ಳುಳ್ಳಿ ತಿನ್ನುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ಇದರಲ್ಲಿ ಆಲಿಸಿನ್ ಅಂಶವು ಬಿಪಿಯನ್ನು ನಿಯಂತ್ರಿಸುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ಚಳಿಗಾಲದಲ್ಲಿ ಕಾಡುವ ಹೃದಯ ಸಂಬಂಧಿ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ.
(4 / 9)
ಬೆಳ್ಳುಳ್ಳಿ ಶ್ವಾಸಕೋಶದ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಬೆಳ್ಳುಳ್ಳಿಯಲ್ಲಿರುವ ಪೋಷಕಾಂಶಗಳು ಶ್ವಾಸಕೋಶದ ಸೋಂಕಿನ ವಿರುದ್ಧ ಹೋರಾಡುತ್ತವೆ. ಹಾಗಾಗಿ ಇದು ಚಳಿಗಾಲಕ್ಕೆ ಉತ್ತಮ.
(Pixabay)(5 / 9)
ಚಳಿಗಾಲದಲ್ಲಿ ಜೀರ್ಣಕ್ರಿಯೆ ಸಂಬಂಧಿ ಸಮಸ್ಯೆ ಕಾಡುವುದು ಹೆಚ್ಚು. ಆದರೆ ಬೆಳ್ಳುಳ್ಳಿ ತಿನ್ನುವುದರಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಇದು ಕರುಳಿನ ಆರೋಗ್ಯ ಸುಧಾರಿಸಲೂ ಸಹಕಾರಿ
(6 / 9)
ಬೆಳ್ಳುಳ್ಳಿ ಪೋಷಕಾಂಶಗಳ ಶಕ್ತಿ ಕೇಂದ್ರವಾಗಿದ್ದು, ವಿಟಮಿನ್ ಸಿ ಮತ್ತು ಬಿ6, ಮ್ಯಾಂಗನೀಸ್ ಮತ್ತು ಸೆಲೆನಿಯಮ್ ಅನ್ನು ಒಳಗೊಂಡಿರುತ್ತದೆ. ಈ ಪೋಷಕಾಂಶಗಳು ಪ್ರತಿರಕ್ಷಣಾ ವ್ಯವಸ್ಥೆ, ಚಯಾಪಚಯ ಮತ್ತು ಉತ್ಕರ್ಷಣ ನಿರೋಧಕ ಶಕ್ತಿ ಸೇರಿದಂತೆ ವಿವಿಧ ದೈಹಿಕ ಕಾರ್ಯಗಳಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಚಳಿಗಾಲದ ಪಾಕವಿಧಾನಗಳಲ್ಲಿ ಬೆಳ್ಳುಳ್ಳಿಯನ್ನು ಸೇರಿಸುವುದು ಒಟ್ಟಾರೆ ದೇಹಾರೋಗ್ಯ ರಕ್ಷಿಸಲು ನೆರವಾಗುತ್ತದೆ.
(7 / 9)
ಬೆಳ್ಳುಳ್ಳಿ ಆರೋಗ್ಯ ಒಳ್ಳೆಯದು ಎನ್ನುವ ಕಾರಣಕ್ಕೆ ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅತಿಯಾಗಿ ಬೆಳ್ಳುಳ್ಳಿ ತಿಂದರೆ ಜೀರ್ಣಕಾರಿ ಅಸ್ವಸ್ಥತೆ, ಬಾಯಿಯ ದುರ್ವಾಸನೆ ಮತ್ತು ಕೆಲವು ಸಂದರ್ಭಗಳಲ್ಲಿ ಅಲರ್ಜಿಗಳಿಗೆ ಕಾರಣವಾಗಬಹುದು. ಹಾಗಾಗಿ ಹೆಚ್ಚು ತಿನ್ನುವ ಮುನ್ನ ತಜ್ಞರ ಸಲಹೆ ಪಡೆಯಿರಿ.
(8 / 9)
(ಗಮನಿಸಿ: ಈ ಮಾಹಿತಿಯು ಸಾಮಾನ್ಯಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ)
ಇತರ ಗ್ಯಾಲರಿಗಳು