ಕನ್ನಡ ಸುದ್ದಿ  /  Photo Gallery  /  Home Minister Araga Jnanendra Holds A Meeting With Police Officers Over The Mangaluru Autorickshaw Blast

Mangaluru Auto Blast: ಮಂಗಳೂರು ಆಟೋ ಬಾಂಬ್‌ ಸ್ಫೋಟ ಸ್ಥಳಕ್ಕೆ ಗೃಹ ಸಚಿವರ ಭೇಟಿ: ಪೊಲೀಸರೊಂದಿಗೆ ಸಮಾಲೋಚನೆ

  • ಮಂಗಳೂರು: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿರುವ ಮಂಗಳೂರು ಆಟೋ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಕ್ಕೊಂದು ರೋಚಕ ಸಂಗತಿಗಳು ಬಯಲಾಗುತ್ತಿವೆ. ಆರೋಪಿ ಶಾರೀಕ್‌ನ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಪೊಲೀಸರು ಹೆಕ್ಕಿ ತೆಗೆಯುತ್ತಿರುವ ಮಾಹಿತಿ ನಿಜಕ್ಕೂ ದಂಗು ಬಡಿಸುವಂತಿವೆ. ಈ ಮಧ್ಯೆ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಆಟೋ ಬಾಂಬ್‌ ಸ್ಫೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಾದ ಮಾಹಿತಿ ಇಲ್ಲಿದೆ..

ಮಂಗಳೂರಿನಲ್ಲಿ ಸಂಭವಿಸಿದ ಆಟೋ ಬಾಂಬ್‌ ಸ್ಫೋಟ ಸ್ಥಳಕ್ಕೆ ಭೇಟಿ ನೀಡಿದ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ, ಪೊಲೀಸರಿಂದ ಮಾಹಿತಿ ಪಡೆದರು.
icon

(1 / 5)

ಮಂಗಳೂರಿನಲ್ಲಿ ಸಂಭವಿಸಿದ ಆಟೋ ಬಾಂಬ್‌ ಸ್ಫೋಟ ಸ್ಥಳಕ್ಕೆ ಭೇಟಿ ನೀಡಿದ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ, ಪೊಲೀಸರಿಂದ ಮಾಹಿತಿ ಪಡೆದರು.(ANI)

ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಸಾಕ್ಷ್ಯ ಸಂಗ್ರಹದ ಕುರಿತು ಪೊಲೀಸರಿಂದ ಮಾಹಿತಿ ಪಡೆದುಕೊಂಡರು.
icon

(2 / 5)

ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಸಾಕ್ಷ್ಯ ಸಂಗ್ರಹದ ಕುರಿತು ಪೊಲೀಸರಿಂದ ಮಾಹಿತಿ ಪಡೆದುಕೊಂಡರು.(ANI)

ಬಳಿಕ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆರಗ ಜ್ಞಾನೇಂದ್ರ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಪ್ರಗತಿಯ ಬಗ್ಗೆ ಚರ್ಚೆ ನಡೆಸಿದರು.
icon

(3 / 5)

ಬಳಿಕ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆರಗ ಜ್ಞಾನೇಂದ್ರ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಪ್ರಗತಿಯ ಬಗ್ಗೆ ಚರ್ಚೆ ನಡೆಸಿದರು.(ANI)

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ, ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದು, ಆರೋಪಿಯೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳ ವಿಚಾರಣೆಗೆ ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿಸಿದರು.
icon

(4 / 5)

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ, ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದು, ಆರೋಪಿಯೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳ ವಿಚಾರಣೆಗೆ ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿಸಿದರು.(ANI)

ಆರೋಪಿ ಶಾರೀಕ್‌ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತ ಚೇತರಿಸಿಕೊಂಡ ಬಳಿಕ ಆತನಿಂದ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಪಡೆಯಲಿದ್ದಾರೆ ಎಂದು ಆರಗ ಜ್ಞಾನೇಂದ್ರ ಇದೇ ವೇಳೆ ಸ್ಪಷ್ಟಪಡಿಸಿದರು.
icon

(5 / 5)

ಆರೋಪಿ ಶಾರೀಕ್‌ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತ ಚೇತರಿಸಿಕೊಂಡ ಬಳಿಕ ಆತನಿಂದ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಪಡೆಯಲಿದ್ದಾರೆ ಎಂದು ಆರಗ ಜ್ಞಾನೇಂದ್ರ ಇದೇ ವೇಳೆ ಸ್ಪಷ್ಟಪಡಿಸಿದರು.(ANI)


ಇತರ ಗ್ಯಾಲರಿಗಳು